Homeಮುಖಪುಟಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿದ ಆರೋಪಿ ಹರಿಯಾಣದಲ್ಲಿ ಶಿವಸೇನೆ ಅಭ್ಯರ್ಥಿ!!

ಶಿವಸೇನೆ ದಲಾಲ್ ಅವರ ಕ್ರಮಗಳನ್ನು "ದೇಶಭಕ್ತಿ ತೋರಿಸುವ ವಿಧಾನ" ಎನ್ನುವ ಮೂಲಕ ಸಮರ್ಥಿಸಿಕೊಂಡಿದೆ. ದಲಾಲ್ ತನ್ನನ್ನು "ಗೌ ರಕ್ಷಕ್" ಮತ್ತು "ರಾಷ್ಟ್ರೀಯವಾದಿ" ಎಂದು ಕರೆದುಕೊಳ್ಳುತ್ತಾನೆ.

- Advertisement -
- Advertisement -

ದೆಹಲಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜೆಎನ್‌ಯು ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಗುಂಡು ಹಾರಿಸಲು ಯತ್ನಿಸಿದ ಆರೋಪ ಹೊತ್ತಿದ್ದ ನವೀನ್ ದಲಾಲ್‌ ಈಗ ಹರಿಯಾಣದ ಬಹದ್ದೂರ್‌ಗ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿದ್ದಾರೆ. ಅಕ್ಟೋಬರ್ 21 ರಂದು ಹರಿಯಾಣ ಚುನಾವಣೆ ನಡೆಯಲಿದೆ.

2018ರ ಆಗಸ್ಟ್‌ನಲ್ಲಿ, ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಜೆಎನ್‌ಯು ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ಮೇಲೆ ನವೀನ್ ದಲಾಲ್ ಮತ್ತು ದರ್ವೇಶ್ ಶಹಪುರ್ ಅವರು ಗುಂಡು ಹಾರಿಸಿದ್ದರು. ಸಾಕ್ಷಿಗಳ ಪ್ರಕಾರ ಆರೋಪಿಯ ಬಂದೂಕು ಜಾಮ್ ಆಗಿದ್ದರಿಂದ ಎರಡು ಗುಂಡುಗಳನ್ನು ಹಾರಿಸಿದ್ದರೂ ಕೂಡ ಖಾಲಿದ್ ಯಾವುದೇ ಗಾಯಗಳಾಗದೆ ಪಾರಾಗಿದ್ದರು.

ಆಗ ತಕ್ಷಣ ಇಬ್ಬರೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ದಾಳಿ ದೇಶಕ್ಕೆ “ಸ್ವಾತಂತ್ರ್ಯ ದಿನಾಚರಣೆ”ಯ ಉಡುಗೊರೆ ಎಂದು ವೀಡಿಯೊ ಅಪ್‌ಲೋಡ್ ಮಾಡಿದ ನಂತರ ಅವರಿಬ್ಬರನ್ನು ಬಂಧಿಸಲಾಗಿತ್ತು. ಶಿವಸೇನೆ ಅಭ್ಯರ್ಥಿ ದಲಾಲ್‌ ಸದ್ಯ ಜಾಮೀನಿನ ಮೇಲೆ ಹೊರಗಿದ್ದು, ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ.

ಆರೋಪಿಯೊಬ್ಬನಿಗೆ ಟಿಕೇಟ್ ನೀಡುವುದರ ಕುರಿತ ಪ್ರಶ್ನೆಗೆ ಶಿವಸೇನೆ, ದಲಾಲ್ ಅವರ ಆ ಕ್ರಮವನ್ನು “ಇದು ದೇಶಪ್ರೇಮವನ್ನು ತೋರಿಸುವ ವಿಧಾನ” ಎಂದು ಕರೆದಿದೆ. ದಲಾಲ್ ತನ್ನನ್ನು “ಗೌ ರಕ್ಷಕ್” ಮತ್ತು “ರಾಷ್ಟ್ರೀಯವಾದಿ” ಎಂದು ಕರೆದುಕೊಳ್ಳುತ್ತಾನೆ. ಆರು ತಿಂಗಳ ಹಿಂದೆಯಷ್ಟೆ ಆತ ಶಿವಸೇನೆ ಪಕ್ಷ ಸೇರಿದ್ದರು.

ಹರಿಯಾಣದ ಶಿವಸೇನೆ ನಾಯಕ ವಿಕ್ರಮ್ ಯಾದವ್ ಅವರ ಉಮೇದುವಾರಿಕೆಯನ್ನು ದೃಢಪಡಿಸಿದ್ದಾರೆ ಮತ್ತು ಗೋ ರಕ್ಷಣೆ ಮತ್ತು “ರಾಷ್ಟ್ರ ವಿರೋಧಿಗಳ” ವಿರುದ್ಧದ ಅವರ ನಿಲುವಿನಿಂದಾಗಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನವೀನ್ ದಲಾಲ್ ಅವರ ವಿರುದ್ಧ ಉಮರ್ ಖಾಲಿದ್ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವರು ಒಮ್ಮೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಸುವಿನ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದರು. ಹರಿಯಾಣದಲ್ಲಿ ನಡೆದ ಗಲಭೆ ಪ್ರಕರಣದ ಮೇಲೂ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಐಟಿ ಸೆಲ್ ನಡೆಸುತ್ತಿರುವ ತಪ್ಪು ಮಾಹಿತಿಯ ಅಭಿಯಾನದಿಂದಾಗಿ ಉಮರ್ ಖಾಲಿದ್ ಅವರನ್ನು ಕೊಲ್ಲಲು ಆರೋಪಿಗಳಿಬ್ಬರು ಯತ್ನಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪವಿದೆ. ಆದರೆ ತನಿಖೆಯ ಸಮಯದಲ್ಲಿ ಈ ವಿಡಿಯೋ ನಿಜಕ್ಕೂ ನಕಲಿ ಎಂದು ತಿಳಿದುಬಂದಿದೆ ಮತ್ತು ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಇಬ್ಬರ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸತ್ಯವು ಹೊರಬಂದಿದ್ದರೂ, ಹಲವು ಗೋಧಿ ಮಾಧ್ಯಮಗಳು ಜೆಎನ್‌ಯು ವಿದ್ಯಾರ್ಥಿಗಳನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಉಲ್ಲೇಖಿಸುತ್ತಲೇ ಇವೆ. ವಿದ್ಯಾರ್ಥಿಯ ಮೇಲೆ ಕೊಲೆ ಪ್ರಯತ್ನ ಮಾಡಿದ ವ್ಯಕ್ತಿಯು ಮುಕ್ತವಾಗಿ ತಿರುಗಾಡುತ್ತಿದ್ದಾನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದರೆ ನಾವು ಯಾವ ಕಾಲದಲ್ಲಿದ್ದೇವೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲಾತಾಣದಲ್ಲಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...