ಶಾಲೆಯೊಂದರಲ್ಲಿ ಸಹಪಾಠಿಯೊಬ್ಬ 14 ವರ್ಷದ ಬಾಲಕನಿಗೆ ಥಳಿಸಿ, ಆತನ ಖಾಸಗಿ ಭಾಗಗಳಲ್ಲಿ ಮರದ ತುಂಡನ್ನು ತುರುಕಿರುವ ಆಘಾತಕಾರಿ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
ಆರೋಪಿಯನ್ನು ಬಂಧಿಸಿ ಜುವೆನೈಲ್ ಜಸ್ಟಿಸ್ ಬೋರ್ಡ್ ಮುಂದೆ ಹಾಜರುಪಡಿಸಲಾಗಿದೆ, ಹಲ್ಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗಿಯಾಗಿರಬಹುದು ಎಂದು ಸಂತ್ರಸ್ತ ಬಾಲಕನ ಕುಟುಂಬ ಶಂಕಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 2ರಂದು ಖಾಸಗಿ ಶಾಲೆಯ ಆವರಣದಲ್ಲಿ ಈ ಘಟನೆ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಅಪೂರ್ವ ಗುಪ್ತಾ ಹೇಳಿದ್ದಾರೆ. ಸಂತ್ರಸ್ತ ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆರೋಪಿಯೊಂದಿಗೆ ಕೆಲ ವಿಚಾರಕ್ಕೆ ಜಗಳ ನಡೆದಿದೆ.
ಸಹಪಾಠಿಗಳಲ್ಲಿ ಒಬ್ಬನಾದ ಆರೋಪಿಯು ಮಾಸ್ಕ್ ಧರಿಸಿದ್ದ, ತನಗೆ ಥಳಿಸಿ, ಮರದ ತುಂಡನ್ನು ತನ್ನ ಖಾಸಗಿ ಅಂಗಕ್ಕೆ ತುರುಕಿದ್ದಾನೆ. ಹಲ್ಲೆ ಬಗ್ಗೆ ಯಾರಿಗಾದರು ತಿಳಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾಗಿ ಸಂತ್ರಸ್ತ ಬಾಲಕ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಘಟನೆಯಲ್ಲಿ ಬಾಲಕನ ಗುದದ್ವಾರಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ನಂತರ, ಸಂತ್ರಸ್ತ ಬಾಲಕನ ಪೋಷಕರು ಮತ್ತು ಸಂಬಂಧಿಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೊಕ್ಸೊ) ಕಾಯ್ದೆ ಸೇರಿದಂತೆ, ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
ಸಂತ್ರಸ್ತ ಬಾಲಕನಿಗೆ ಕೌನ್ಸಿಲಿಂಗ್ ನೀಡಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾತ್ತಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 , 341, 377, 506 ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ: ಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್ ಪ್ರತಿಭಟನೆ


