Homeಮುಖಪುಟಕೇಜ್ರಿವಾಲ್ ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಜೈಲಿನಿಂದ ಬಿಡುಗಡೆ ಆಗ್ತಾರೆ: ಅತಿಶಿ

ಕೇಜ್ರಿವಾಲ್ ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಜೈಲಿನಿಂದ ಬಿಡುಗಡೆ ಆಗ್ತಾರೆ: ಅತಿಶಿ

- Advertisement -
- Advertisement -

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸೇರಿದರೆ, ಒಂದೇ ದಿನದಲ್ಲಿ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕರು ಆಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮದ್ಯನೀತಿ ಹಗರಣಕ್ಕೆ ಸಂಬಂಧಿಸಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ದಿಬ್ರುಗಢ ಸಂಸದೀಯ ಕ್ಷೇತ್ರದ ದುಲಿಯಾಜನ್‌ನಲ್ಲಿ ಎಎಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕೇಜ್ರಿವಾಲ್‌, ಕೇಜ್ರಿವಾಲ್ ಎಂದಿಗೂ ತಲೆಬಾಗುವುದಿಲ್ಲ. ಅವರು ಜೈಲಿನ ಒಳಗಿರಲಿ ಅಥವಾ ಹೊರಗಿರಲಿ ದೇಶಾದ್ಯಂತ ಸಾಮಾನ್ಯ ಜನರ ಹಕ್ಕುಗಳಿಗಾಗಿ ಹೋರಾಡುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರು (ಅಸ್ಸಾಂ ಮುಖ್ಯಮಂತ್ರಿ) ಹಿಮಂತ ಬಿಸ್ವಾ ಶರ್ಮಾ ಅವರಂತೆ ಬಿಜೆಪಿಗೆ ಸೇರಿದರೆ, ಅವರು ಒಂದೇ ದಿನದಲ್ಲಿ ಬಿಡುಗಡೆಯಾಗುತ್ತಾರೆ. ಕೇಜ್ರಿವಾಲ್ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಿಂದ ಬಿಜೆಪಿಗೆ ಭಯವಿದೆ ಎಂದು ದೆಹಲಿ ಶಿಕ್ಷಣ ಸಚಿವರು ಹೇಳಿದ್ದಾರೆ. ಅವರು ಉತ್ತಮ ಶಾಲೆಗಳನ್ನು ನಿರ್ಮಿಸುತ್ತಾರೆ, ಅತ್ಯುತ್ತಮ ಆಸ್ಪತ್ರೆಗಳನ್ನು ನಿರ್ಮಿಸುತ್ತಾರೆ ಮತ್ತು ಬಡ ಕುಟುಂಬದ ಮಕ್ಕಳನ್ನು ಐಐಟಿಗೆ ಸೇರಿಸಲು ಸಮರ್ಥರಾಗುತ್ತಾರೆ ಎಂದು ಬಿಜೆಪಿ ಅವರನ್ನು ಕಂಬಿ ಹಿಂದೆ ಹಾಕಿದೆ ಎಂದು ಅತಿಶಿ ಹೇಳಿದರು.

ಎಷ್ಟೇ ದುಬಾರಿಯಾದರೂ ಪ್ರತಿಯೊಬ್ಬ ಬಡವರಿಗೂ  ಕೇಜ್ರಿವಾಲ್‌ ಉಚಿತ ಚಿಕಿತ್ಸೆ ನೀಡುತ್ತಾರೆ, ಬಿಜೆಪಿಯು ಚುನಾವಣೆಯ ಸಮಯದಲ್ಲಿ ಸುಳ್ಳುಗಳನ್ನು ಹೇಳುತ್ತದೆ ಮತ್ತು ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವರು ಸರ್ಕಾರ ರಚನೆಯ ನಂತರ ಅವರು ನೀಡಿದ ಎಲ್ಲಾ ಭರವಸೆಗಳನ್ನು ಮರೆತುಬಿಡುತ್ತಾರೆ ಎಂದು ಅತಿಶಿ ಹೇಳಿದರು.

ಕೇಜ್ರಿವಾಲ್ ಈಗ ದಿಬ್ರುಗಢದ ಜನರಿಗೆ ತಮ್ಮ ಭರವಸೆಗಳನ್ನು ತಂದಿದ್ದಾರೆ, ಪ್ರಾಮಾಣಿಕತೆಯ ರಾಜಕೀಯವನ್ನು ಆರಿಸಿಕೊಂಡರೆ ಉತ್ತಮ ಶಾಲೆಗಳು ಮತ್ತು ಅತ್ಯುತ್ತಮ ಆಸ್ಪತ್ರೆಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಚಹಾ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ದಿನಕ್ಕೆ 450 ರೂಪಾಯಿಗಳನ್ನು ಪಡೆಯುತ್ತಾರೆ ಮತ್ತು ಅವರ ಮನೆಗಳನ್ನು ಗುತ್ತಿಗೆಗೆ ಪಡೆಯುತ್ತಾರೆ, ಜೊತೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಪಡೆಯುತ್ತಾರೆ ಎಂದು ಅತಿಶಿ ಹೇಳಿದ್ದು, ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದಿಂದ ಮಾತ್ರ ಇದನ್ನು ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಈ ಬಾರಿ ಎಎಪಿ ಅಭ್ಯರ್ಥಿ ಮನೋಜ್ ಧನೋವರ್ ಅವರಿಗೆ ಮತ ಹಾಕುವ ಮೂಲಕ ಅವರನ್ನು ಸಂಸತ್ತಿಗೆ ಕಳುಹಿಸುವಂತೆ ದಿಬ್ರುಗಢದ ಜನತೆಗೆ ಅತಿಶಿ ಮನವಿ ಮಾಡಿದ್ದು, ಅಸ್ಸಾಂನ ಜನರು ಯಾವಾಗಲೂ ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್‌ಗೆ ಹೆಚ್ಚಿನ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಗುವಾಹಟಿ ಅಥವಾ ಟಿನ್ಸುಕಿಯಾದಲ್ಲಿ ಮುನ್ಸಿಪಲ್ ಚುನಾವಣೆಯಲ್ಲಿ ಸ್ಥಾನ ಪಡೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಅತಿಶಿ ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ,ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...