ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಮೂರನೇ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಸ್ಥಾನದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪ್ರಚಾರಕ್ಕಾಗಿ ಸಲ್ಲಿಸಲಾಗಿದೆ ಮತ್ತು ಮಾಜಿ ಶಾಸಕ ಸಂದೀಪ್ ಕುಮಾರ್ ಮೇಲೆ ಭಾರೀ ವೆಚ್ಚ ವಿಧಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಲಾದ ಮೂರನೇ ಮನವಿ ಇದಾಗಿದೆ. ದೆಹಲಿ ಹೈಕೋರ್ಟ್ ಅರ್ಜಿಯನ್ನು ವರ್ಗಾಯಿಸಿದೆ ಮತ್ತು ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಷಯವನ್ನು ಪಟ್ಟಿ ಮಾಡಲು ಆದೇಶಿಸಿದೆ.
ಈ ಹಿಂದೆ ಏಪ್ರಿಲ್ 4ರಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ ಎಸ್ ಅರೋರಾ ಅವರ ಪೀಠವು ಈ ವಿಷಯದ ಕುರಿತು ಪಿಐಎಲ್‌ನ್ನು ಪರಿಗಣಿಸಲು ನಿರಾಕರಿಸಿದೆ. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ ಎಂದು ಪೀಠವು ಹೇಳಿತ್ತು.
ಬಂಧಿತ ಮುಖ್ಯಮಂತ್ರಿ ಅಧಿಕಾರದಲ್ಲಿ ಇರುವುದನ್ನು ನಿಷೇಧಿಸುವ ಯಾವುದೇ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಗಮನಿಸಿದ ಪೀಠವು ಪಿಐಎಲ್ ವಜಾಗೊಳಿಸಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್ ಹೇಳಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ತನಿಖಾ ಸಂಸ್ಥೆ ಬಂಧಿಸಿತ್ತು. ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಅವರನ್ನು ಕಳಹಿಸಲಾಗಿದೆ.
"Heavy costs should be imposed on you."
Delhi High Court says heavy costs should be imposed on the petitioner who has filed third plea seeking to remove Arvind Kejriwal as Chief Minister of Delhi.#DelhiHighCourt @AamAadmiParty @ArvindKejriwal #ArvindKejriwalArrest pic.twitter.com/TWlXKpbZsy
— Bar and Bench (@barandbench) April 8, 2024
ಇದನ್ನು ಓದಿ: ಚುನಾವಣಾ ಬಾಂಡ್ ಹಗರಣದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ


