Homeಮುಖಪುಟಕೇಜ್ರಿವಾಲ್ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ: ಸಂಜಯ್ ಸಿಂಗ್ ಆರೋಪ

ಕೇಜ್ರಿವಾಲ್ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ: ಸಂಜಯ್ ಸಿಂಗ್ ಆರೋಪ

- Advertisement -
- Advertisement -

ತಿಹಾರ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ ಎಂದು ಎಎಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್, ಸಿಎಂ ಕೇಜ್ರಿವಾಲ್ ಅವರ ನೈತಿಕ ಸ್ಥೈರ್ಯವನ್ನು  ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ಭೇಟಿಯಾಗಲು ಅವಕಾಶ ನೀಡುತ್ತಿಲ್ಲ, ಜಂಗ್ಲಾ ಮೂಲಕ ಮಾತ್ರ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗುತ್ತಿದೆ ಎಂದು ಸಂಜಯ್ ಸಿಂಗ್‌ ಹೇಳಿದ್ದಾರೆ.

ಮುಲಾಕತ್ ಜಂಗ್ಲಾ ಕಬ್ಬಿಣದಿಂದ ನಿರ್ಮಿಸಿದ ಪರದೆಯಾಗಿದೆ. ಇದು ಜೈಲಿನೊಳಗಿನ ಕೊಠಡಿಯಲ್ಲಿ ಸಂದರ್ಶಕರಿಂದ ಕೈದಿಗಳನ್ನು ಪ್ರತ್ಯೇಕಿಸುತ್ತದೆ. ಸಂದರ್ಶಕರು ಮತ್ತು ಕೈದಿಗಳು ಎರಡು ಬದಿಗಳಲ್ಲಿ ಕುಳಿತು ಪರಸ್ಪರ ಮಾತನಾಡಬಹುದಾಗಿದೆ. ಸಂಜಯ್‌ ಸಿಂಗ್‌ ಆರೋಪದ ಬಗ್ಗೆ ತಿಹಾರ್ ಜೈಲು ಆಡಳಿತ ಈ ಬಗ್ಗೆ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.

ಕೇಜ್ರಿವಾಲ್ ಅವರನ್ನು ಪಂಜಾಬ್ ಸಿಎಂ ಭಗವಂತ್ ಮಾನ್ ಅವರಿಗೆ ಭೇಟಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಸಾಮನ್ಯ ಸಂದರ್ಶಕರಂತೆ ಪರದೆಯ ಹಿಂದಿನಿಂದ ಮಾತ್ರ ಮಾತುಕತೆಗೆ ಅವಕಾಶ ನೀಡಲಾಗಿದೆ.

ಮಂಗಳವಾರ ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ತಮ್ಮ ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ 600 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.  ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಕಿಂಗ್‌ಪಿನ್‌ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಈ ಮೊದಲು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಚುನಾವಣೆ ಪ್ರಚಾರದ ವೇಳೆ ಜಿಎಸ್‌ಟಿ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...