Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...