Homeಕರ್ನಾಟಕಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ 'ದಾರಿ ತಪ್ಪಿದ ಮಗ': ನಟ ಪ್ರಕಾಶ್ ರಾಜ್

ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

- Advertisement -
- Advertisement -

ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ‘ದಾರಿತಪ್ಪಿದ ಮಗ’ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಂಡ್ಯದ ರೈತ ಸಭಾಗಂಣದಲ್ಲಿ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ ಆಯೋಜಿಸಿದ್ದ ‘ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶ’ ದಲ್ಲಿ ಮಾತನಾಡಿದ ಅವರು, “ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳ ಮಟ್ಟಕ್ಕೆ ಇಳಿದು ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ”? ಎಂದು ಪ್ರಶ್ನಿಸಿದರು.

“ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ‘ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು’ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು” ಎಂದು ಕರೆ ನೀಡಿದರು.

“ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಬರಗಾಲದಲ್ಲಿ ಯಾಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

“ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಿಲ್ಲ. ಪರಿಹಾರ ಬಿಡುಗಡೆಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರಕ್ಕೆ ನೋಟಿಸ್ ನೀಡಲು ಮುಂದಾದಾಗ, ನೋಟಿಸ್ ಕೊಡ್ಬೇಡಿ ಮಾನ ಮರ್ಯಾದೆ ಹೋಗುತ್ತೆ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ನಾಟಕ ಯಾಕೆ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಪ್ರಗತಿಪರ ಚಿಂತಕ ಡಾ.ವಾಸು ಹಾಗೂ ಭೂಮಿ ಮತ್ತು ವಸತಿ ಹಕ್ಕುಗಳ ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ವಿಚಾರ ಮಂಡನೆ ಮಾಡಿದರು. ಸಿರಿಮನೆ ನಾಗರಾಜು, ಪ್ರಗತಿಪರ ವಕೀಲ ಬಿ.ಟಿ.ವಿಶ್ವನಾಥ್ ಅಧ್ಯಕತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಕೃಷ್ಣ ಪ್ರಕಾಶ್, ಸಿಐಟಿಯು ಮುಖಂಡರಾದ ಸಿ.ಕುಮಾರಿ, ಪತ್ರಕರ್ತ ಎನ್.ನಾಗೇಶ್, ರೈತಸಂಘದ ಲತಾ ಶಂಕರ್, ಕರ್ನಾಟಕ ಜನಶಕ್ತಿಯ ಸಿದ್ದರಾಜು, ಪೂರ್ಣಿಮಾ, ಜಗದೀಶ್ ನಗರಕರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಯ ₹5,300 ಕೋಟಿ ಎಲ್ಲಿ? ಪ್ರಧಾನಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...