ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣದಿಂದಾಗಿ ಹಣ ಕಳೆದುಕೊಂಡಿರುವ ಠೇವಣಿದಾರರ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Down Down Tejasvi Surya… Down Down Tejasvi Surya, ECHOED in Surya's Public Meeting.!
Basavanagudi's Sri Raghavendra Cooperative Bank Account Holders Sieged Tejasvi Surya in Public Meeting; Gheraoed in front of Police.!
The Voters of #Basavanagudi Held PROTEST against #BJP MLA… pic.twitter.com/y5nKr0miOz
— Hate Detector 🔍 (@HateDetectors) April 15, 2024
ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ತೇಜಸ್ವಿ ಸೂರ್ಯ ಕರೆದ ಸಭೆಯಲ್ಲೇ ಅವರ ವಿರುದ್ಧವೇ ಬ್ಯಾಂಕ್ ಠೇವಣಿದಾರರು ಆಕ್ರೋಶ ಹೊರ ಹಾಕಿದ್ದಾರೆ. ಗದ್ದಲ ಹೆಚ್ಚಾಗುತ್ತಿದ್ದಂತೆ ತೇಜಸ್ವಿ ಸೂರ್ಯ ಕೋಪಗೊಂಡು, ಸಭೆಯಿಂದ ಎದ್ದು ಹೊರ ನಡೆಯಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ತಡೆದವರನ್ನು ತಳ್ಳಿ ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸ್ಥಳದಲ್ಲಿದ್ದ ಚುನಾವಣಾ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿದ್ದಾರೆ. ವಾಗ್ವಾದದ ವೇಳೆ ಶಾಸಕ ರವಿ ಸುಬ್ರಮಣ್ಯ ಗ್ರಾಹಕರೊಬ್ಬರನ್ನು ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ.
‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಮತ್ತೊಮ್ಮೆ ಎಸ್ಕೇಪ್ : ಕಾಂಗ್ರೆಸ್ ವ್ಯಂಗ್ಯ
ಘಟನೆ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವಿಡಿಯೋ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ!
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ… pic.twitter.com/2J38A0MANi
— Karnataka Congress (@INCKarnataka) April 15, 2024
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ. ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ. ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದಿದೆ.
ಇದನ್ನೂ ಓದಿ : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್



Diaper surya