Homeಮುಖಪುಟ'ಪ್ಯಾಲೆಸ್ತೀನ್' ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ.

ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅಪೂರ್ವಾನಂದ್ ಮತ್ತು ಅರ್ಜುಮಂದ್ ಅರಾ ಮಾತನಾಡಿದ್ದು, ‘ನಾವು ಪ್ಯಾಲೆಸ್ತೀನರ ಪದವನ್ನು ಕೇಳೋಣ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಮಾರ್ಚ್ 22ರಂದು ನಡೆಸಬೇಕಾಗಿತ್ತು ಮತ್ತು ಅದಕ್ಕೆ ದೆಹಲಿ ವಿಶ್ವವಿದ್ಯಾಲಯವು ಮಾರ್ಚ್ 19ರಂದು ಅನುಮತಿ ನೀಡಿತ್ತು. ಆದರೆ ಹೋಳಿ ಹಬ್ಬದ ಕಾರಣ ಮಾರ್ಚ್ 22 ರಂದು ರಜೆ ಎಂದು ಘೋಷಿಸಿದ್ದರಿಂದ ಸಂಘಟಕರು ಅದನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದರು. ಕಾರ್ಯಕ್ರಮದ ಸ್ವರೂಪವನ್ನು ಬದಲಾಯಿಸಲಾಗಿಲ್ಲ, ಆದರೆ ವಿಶ್ವವಿದ್ಯಾನಿಲಯವು ಏಪ್ರಿಲ್ 13ರ ಶನಿವಾರದಂದು ನನಗೆ ಕಳುಹಿಸಿದ ಇ-ಮೇಲ್‌ನಲ್ಲಿ ಕಾರ್ಯಕ್ರಮ ರದ್ದು ಪಡಿಸುವ ಬಗ್ಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಡೆಸಲು ಮಾರ್ಚ್‌ನಲ್ಲಿ ಅನುಮತಿ ನೀಡಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಆಘಾತವಾಯಿತು. ನಾವು ಅದನ್ನು ಪ್ರಚಾರ ಮಾಡಿದ್ದರಿಂದ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರಿಂದ ನನಗೂ ಅವಮಾನವಾಗಿದೆ ಎಂದು ಅಪೂರ್ವಾನಂದ್ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ಕವಿ ಅಶೋಕ್ ವಾಜಪೇಯಿ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು, ವಿವಿಯ ಕಲಾ ವಿಭಾಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು ಎಂದು ಹೇಳಲಾಗಿದೆ.

ಕಾರ್ಯಕ್ರಮಕ್ಕೆ ಅನುಮತಿ ನೀಡದ ಆಡಳಿತದ ವಿರುದ್ಧ ಪ್ರತಿರೋಧದ ಭಾಗವಾಗಿ ಸಂಘಟಕರು ಮತ್ತು ವಿದ್ಯಾರ್ಥಿಗಳು ಕಾರಿಡಾರ್‌ನ ಕೊಠಡಿ ನಂ.22ರಲ್ಲಿ ಪ್ಯಾಲೆಸ್ತೀನ್ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಮತ್ತು  ಕವನವನ್ನು ವಾಚಿಸಲಾಗಿದೆ. ನಾವು ಕೋಣೆಯ ಹೊರಗಿನ ಕಾರಿಡಾರ್‌ನಲ್ಲಿ ನಿಂತು ಕವಿತೆಗಳನ್ನು ಓದಿದೆವು. ನಾವು ಕಾಲೇಜಿನಲ್ಲಿ ತೊಂದರೆ ಅಥವಾ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲು ಬಯಸುವುದಿಲ್ಲ, ಪ್ಯಾಲೆಸ್ತೀನ್‌ ಬಗ್ಗೆ ಕಾರ್ಯಕ್ರಮ ಆಯೋಜಿಸಲು ನಮಗೆ ಅನುಮತಿಸದ ಕಾರಣ ನಾವು ಸಂದೇಶವನ್ನು ಕಳುಹಿಸಲು ಬಯಸಿದ್ದೇವೆ ಎಂದು ಅರ್ಜುಮಂದ್ ಅರಾ ಅವರು ಹೇಳಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...