Homeಮುಖಪುಟಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ '14 ಕೋಟಿ ರೂ.' ವ್ಯಯಿಸಿದ್ದ ಮೋದಿ ಸರಕಾರ!

ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು, ನಿರ್ವಹಿಸಲು ತೆರಿಗೆದಾರರ ಹಣದಿಂದ 14 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂಬ ಸ್ಪೋಟಕ ಮಾಹಿತಿ ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ನಿವೃತ್ತ ಕಮೋಡೋರ್(ಜಲಸೇನಾ ಅಧಿಕಾರಿ) ಲೋಕೇಶ್ ಬಾತ್ರಾ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಆರ್‌ಟಿಐ ಈ ಮಹತ್ವದ ಮಾಹಿತಿಯನ್ನು ನೀಡಿದೆ. ಒಟ್ಟು 30 ಹಂತಗಳಲ್ಲಿ 12,04,59,043 ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಕಮಿಷನ್ ಆಗಿ ವಿಧಿಸಲಾಗಿದೆ ಮತ್ತು ಬಾಂಡ್‌ಗಳ ಮುದ್ರಣ ವೆಚ್ಚಕ್ಕಾಗಿ 1,93,73,604 ರೂ.ವ್ಯಯಿಸಲಾಗಿದೆ. ಕಮಿಷನ್‌ ಮೊತ್ತವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲು ಮತ್ತು ನಿರ್ವಹಿಸಲು ವಿಧಿಸುವ ಹಣವನ್ನು ಸೂಚಿಸುತ್ತದೆ. ಇದಲ್ಲದೆ ಮಾಸ್ಕ್-ಎ ಪ್ರಿಂಟ್ ಭದ್ರತೆಯನ್ನು ಪರಿಶೀಲಿಸುವ ಸಾಧನಕ್ಕಾಗಿ ಹೆಚ್ಚುವರಿ 6,720 ರೂ.ಗಳನ್ನು ವಿಧಿಸಲಾಗಿದೆ ಎಂದು ಆರ್ಥಿಕ ವ್ಯವಹಾರಗಳ ಸಚಿವಾಲಯ ಆರ್‌ಟಿಐ ಮೂಲಕ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ಈ ಬಾಂಡ್‌ಗಳನ್ನು ಮುದ್ರಿಸುವ ಕಾರ್ಯವನ್ನು ಮಾಡಿದೆ. 1,000, ರೂ, 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿ ಮೌಲ್ಯದ ಬಾಂಡ್‌ಗಳನ್ನು ಮುದ್ರಿಸಿದೆ.

ಮುದ್ರಿತವಾದ ಚುನಾವಣಾ ಬಾಂಡ್‌ಗಳು

1,000 ರೂ.ಗಳ 2,65,000 ಚುನಾವಣಾ ಬಾಂಡ್‌ಗಳು
10,000 ರೂ.ಗಳ 2,65,000 ಬಾಂಡ್‌ಗಳು
1 ಲಕ್ಷ ಮೌಲ್ಯದ 93,000 ಚುನಾವಣಾ ಬಾಂಡ್‌ಗಳು
10 ಲಕ್ಷ ಮೌಲ್ಯದ 26,000 ಬಾಂಡ್‌ಗಳು
1 ಕೋಟಿಯ 33,000 ಬಾಂಡ್‌ಗಳು

ಈ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚವನ್ನು ದಾನಿಗಳು ಅಥವಾ ಚುನಾವಣಾ ಬಾಂಡ್‌ ಸ್ವೀಕರಿಸುವವರು ಭರಿಸುವುದಿಲ್ಲ, ಅದು ಸರ್ಕಾರ ಅಂದರೆ ತೆರಿಗೆದಾರರ ಹಣದಿಂದ ಭರಿಸಲಾಗಿದೆ. ಚುನಾವಣಾ ಬಾಂಡ್‌ ಯೋಜನೆಯಲ್ಲಿ, ಬಾಂಡ್ ಖರೀದಿಸುವ ದಾನಿಗಳು ಎಸ್‌ಬಿಐಗೆ ಯಾವುದೇ ಸೇವಾ ಶುಲ್ಕ (ಕಮಿಷನ್) ಮತ್ತು ಬಾಂಡ್‌ಗಳ ಮುದ್ರಣ ವೆಚ್ಚವನ್ನು ಪಾವತಿಸಬೇಕಾಗಿಲ್ಲ, ಸರ್ಕಾರ ಅಥವಾ ಅಂತಿಮವಾಗಿ ತೆರಿಗೆ ಪಾವತಿದಾರರು ಈ ವೆಚ್ಚವನ್ನು ಭರಿಸುತ್ತಾರೆ ಎಂದು ಬಾತ್ರಾ ಹೇಳಿದ್ದಾರೆ.

ಇದಲ್ಲದೆ ತೆರಿಗೆ ಪಾವತಿದಾರರ ವೆಚ್ಚದಲ್ಲಿ ರಾಜಕೀಯ ಪಕ್ಷಗಳ ತೆರಿಗೆ-ಮುಕ್ತ ಪ್ರಯೋಜನಗಳಿಗಾಗಿ ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಸರ್ಕಾರಿ ಯಂತ್ರೋಪಕರಣಗಳು ಮತ್ತು ಮಾನವಶಕ್ತಿಯ ಬಳಕೆಗೆ ಭಾರಿ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಲೋಕೇಶ್ ಬಾತ್ರಾ ಅವರು ಆರೋಪಿಸಿದ್ದಾರೆ.

ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂದು ಬಾತ್ರಾ ಅವರು ಈ ಹಿಂದೆ ಸಲ್ಲಿಸಿದ ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಒಂದು ಎಲೆಕ್ಟೋರಲ್ ಬಾಂಡ್ ಮುದ್ರಣದ ವೆಚ್ಚವು 25 ರೂಪಾಯಿಯಾಗಿದೆ, ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚುವರಿ 6% ಜಿಎಸ್‌ಟಿಯನ್ನು ವಿಧಿಸುತ್ತವೆ.

ಫೆಬ್ರವರಿ 15ರಂದು ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಅಸಂವಿಧಾನಿಕ ಮತ್ತು ಈ ಮಾಹಿತಿಯ ಮತದಾರರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕರೆದಿರುವ ನ್ಯಾಯಾಲಯವು, ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಕಾಲಾವಕಾಶವನ್ನು ಕೋರಿತ್ತು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಸ್‌ಬಿಐಗೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡುವಂತೆ ಸುಪ್ರೀಂಕೋರ್ಟ್‌ ಖಡಕ್‌ ಆಗಿ ಸೂಚಿಸಿತ್ತು. ಆ ಬಳಿಕ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ಚುನಾವಣಾ ಬಾಂಡ್‌ ಯೋಜನೆಯಿಂದ ಅತಿ ಹೆಚ್ಚು ಪ್ರಯೋಜನ ಪಡೆದುಕೊಂಡಿದೆ ಎನ್ನುವುದು ಬಯಲಾಗಿತ್ತು.

ಇದನ್ನು ಓದಿ: ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...