Homeಮುಖಪುಟಮೋದಿ ಆಡಳಿತದ 10 ವರ್ಷಗಳಲ್ಲಿ 'ED' ದಾಳಿಗಳಲ್ಲಿ ಹೆಚ್ಚಳ: ವರದಿ

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ ‘ಇಡಿ’ ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು, ಮಟ್ಟಹಾಕಲು ಬಳಸುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿರುವ ಹೊಸ್ತಿಲಲ್ಲೇ ಈ ವರದಿ ಬಹಿರಂಗವಾಗಿದೆ.

2014ರಿಂದ ಕಳೆದ 10 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಗಳ ಪ್ರಮಾಣದಲ್ಲಿ 86 ಪಟ್ಟು ಹೆಚ್ಚಾಗಿದೆ, ಆಸ್ತಿ ಮುಟ್ಟುಗೋಲು ಪ್ರಮಾಣದಲ್ಲಿ 25 ಪಟ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಜುಲೈ 2005ರಿಂದ ಮಾರ್ಚ್ 2014 ರವರೆಗಿನ ಒಂಬತ್ತು ವರ್ಷಗಳ ಅವಧಿ ಮತ್ತು ಏಪ್ರಿಲ್ 2014ರಿಂದ  ಮಾರ್ಚ್ 2024ರ ನಡುವೆ ಕಳೆದ 10 ವರ್ಷಗಳಲ್ಲಿನ ದಾಖಲೆಯನ್ನು ವಿಶ್ಲೇಷಿಸಿ ಪಿಟಿಐ ಈ ಕುರಿತ ವರದಿಯನ್ನು ಸಿದ್ಧಪಡಿಸಿದೆ.

PMLAಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ ಮತ್ತು ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮಕ್ಕೆ ಜುಲೈ 1, 2005ರಿಂದ PMLA ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ಕಳೆದ 1 ದಶಕದಲ್ಲಿ ಇಡಿ ಕ್ರಮವು ಪ್ರತಿಪಕ್ಷಗಳು ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ದಬ್ಬಾಳಿಕೆಯ” ತಂತ್ರಗಳ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದರೆ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷವು, ಜಾರಿ ನಿರ್ದೇಶನಾಲಯವು ಸ್ವತಂತ್ರವಾಗಿದೆ ಮತ್ತು ಅದರ ತನಿಖೆಗಳು ಸಂಪೂರ್ಣವಾಗಿ ಅಕ್ರಮ ಮತ್ತು ಭ್ರಷ್ಟರ ವಿರುದ್ಧದ ಕಾರ್ಯಚರಣೆಯ ಭಾಗವಾಗಿದೆ ಎಂದು ‘ಇಡಿ’ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ.

2005-14ರ ಅವಧಿಯಲ್ಲಿ ಒಟ್ಟು 1,797 ದೂರುಗಳು ಮಾತ್ರ ಜಾರಿ ನಿರ್ದೇಶನಾಲಯ ದಾಖಲಿಸಿದ್ದವು, ಆದರೆ  2014ರಿಂದ 2024ರ ಅವಧಿಯಲ್ಲಿ ಕಳೆದ 10 ವರ್ಷಗಳಲ್ಲಿ 5,155 PMLA ಪ್ರಕರಣಗಳನ್ನು ದಾಖಲಿಸಿದೆ, ಇದು 2005-14ರ ಅವಧಿಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಳ ಎಂದು ವಿಶ್ಲೇಷಣೆಯು ಉಲ್ಲೇಖಿಸಿದೆ.

2014ರ ಹಣಕಾಸು ವರ್ಷದಿಂದ ಜಾರಿ ನಿರ್ದೇಶನಾಲಯವು ಇದುವರೆಗೆ 63 ವ್ಯಕ್ತಿಗಳನ್ನು ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿದೆ ಎಂದು ಮಾಹಿತಿಯು ತೋರಿಸುತ್ತದೆ. 2014-2024ರ ಅವಧಿಯಲ್ಲಿ ದೇಶಾದ್ಯಂತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 7,264 ದಾಳಿಗಳನ್ನು ನಡೆಸಿದೆ. ಇದು ಯುಪಿಎ ಸರಕಾರದ 10ವರ್ಷದ ಅವಧಿಗೆ ಹೋಲಿಸಿದೆ 86 ಪಟ್ಟು ಹೆಚ್ಚಳವಾಗಿದೆ ಅಂದರೆ ಯುಪಿಎ ಅವಧಿಯಲ್ಲಿ 84 ದಾಳಿಗಳನ್ನು ನಡೆಸಲಾಗಿತ್ತು.

ಕಳೆದ ಒಂದು ದಶಕದಲ್ಲಿ ಒಟ್ಟು 755 ಜನರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಮತ್ತು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 2005-14ರ ಅವಧಿಯಲ್ಲಿ 29 ಮಂದಿಯ ಬಂಧನ ನಡೆದಿತ್ತು ಮತ್ತು  5,086.43 ಕೋಟಿ ರೂ. ಜಪ್ತಿ ಮಾಡಲಾಗಿತ್ತು. ಈ ಅಂಕಿಅಂಶಗಳು ಯುಪಿಎ ಅವಧಿಗೆ ಹೋಲಿಸಿದರೆ ಬಂಧನಗಳು 26 ಪಟ್ಟು ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. 2014ರಿಂದ 2024ರವರೆಗೆ ಒಂದು ದಶಕದಲ್ಲಿ ದೋಷಾರೋಪ ಪಟ್ಟಿಗಳ ಸಲ್ಲಿಕೆಯು ಅದರ ಹಿಂದಿನ ದಶಕಕ್ಕಿಂತ 12 ಪಟ್ಟು ಹೆಚ್ಚಳವನ್ನು ಕಂಡಿದೆ. 1,281 ಪ್ರಾಸಿಕ್ಯೂಶನ್ ದೂರುಗಳನ್ನು ನ್ಯಾಯಾಲಯಗಳ ಮುಂದೆ ದಾಖಲಿಸಲಾಗಿತ್ತು ಹಾಗೂ ಅದರ ಹಿಂದಿನ ಅವಧಿಯಲ್ಲಿ 102 ಪ್ರಕರಣಗಳು ದಾಖಲಾಗಿದ್ದವು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಸಂಜಯ್ ಭಂಡಾರ ಆರ್ಥಿಕ ವಂಚನೆ ಮಾಡಿ ವಿದೇಶಗಳಲ್ಲಿ ಹೋಗಿ ನೆಲೆಸಿದ್ದಾರೆ, ಆದರೆ ಇಡಿ ಅವರನ್ನು ದೇಶಕ್ಕೆ ತರುವಲ್ಲಿ ಪ್ರಯತ್ನಿಸುತ್ತಿದೆ ಎಂದು ಹೇಳಿಕೊಂಡಿದೆ. ಪ್ರತಿಪಕ್ಷಗಳು ಈ ಮೂವರು ಉದ್ಯಮಿಗಳಿಗೆ ದೇಶ ಬಿಟ್ಟು ಪಲಾಯನ ಮಾಡಲು ಸಹಕಾರಿಯಾದ ವ್ಯವಸ್ಥೆಯ ಬಗ್ಗೆ ಹಲವು ಬಾರಿ ಟೀಕಿಸಿದ್ದವು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...