Homeಕರ್ನಾಟಕಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ : ಸಿಎಂ...

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುವಂತೆ ಕೋರಿದರು.

“ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜೊತೆ ಸೇರಿರುವ ಜೆಡಿಎಸ್‌ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ‘ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ’ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ನುವುದು ಬರೀ ದೇವೇಗೌಡರ ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ” ಎಂದರು.

“ಭ್ರಷ್ಟನಿಗೆ ಮತ ಕೇಳಲು ಮೋದಿ ಬರ್ತಾರೆ”

“ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ” ಎಂದು ಹೇಳಿದರು.

“ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ” ಎಂದರು.‌

“ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಆರ್‌ಡಿ ಪಾಟೀಲ್ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ ಬಿಜೆಪಿ ಸಂಸದ; ಪಿಎಸ್‌ಐ ಹಗರಣದ ಕಿಂಗ್‌ಪಿನ್ ಸಹಕಾರ ಕೇಳಿದ ಉಮೇಶ್ ಜಾಧವ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...