Homeಫ್ಯಾಕ್ಟ್‌ಚೆಕ್Fact Check: ಮಹುವಾ ಮೊಯಿತ್ರಾ 'ಎಗ್ಸ್' ಎಂದಿರುವುದನ್ನು 'ಸೆಕ್ಸ್' ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹುವಾ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ, ಸ್ವತಂತ್ರ ಮಾಧ್ಯಮ ಸಂಸ್ಥೆ ‘ನ್ಯೂಸ್ ದಿ ಟ್ರುತ್'(ಎನ್‌ಟಿಟಿ) ನ ವರದಿಗಾರ ಅವರನ್ನು ಮಾತನಾಡಿಸಿದ್ದಾರೆ. ಈ ವೇಳೆ ಇಂಗ್ಲಿಷ್ ಭಾಷೆಯಲ್ಲಿ ‘What’s your source of Energy?'(ನಿಮ್ಮ ಶಕ್ತಿಯ ಮೂಲ ಯಾವುದು?) ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಹುವಾ ಮೊಯಿತ್ರಾ ನೀಡಿರುವ ಉತ್ತರ ವೈರಲ್ ಆಗಿದೆ.

ಅನೇಕ ಎಕ್ಸ್ ಬಳಕೆದಾರರು ‘What’s your source of Energy?’ ಎಂದು ಪತ್ರಕರ್ತ ಕೇಳಿದ್ದಕ್ಕೆ, ಮಹುವಾ ಅವರು ‘Sex'(ಲೈಂಗಿಕತೆ ಅಥವಾ ಲೈಂಗಿಕ ಕ್ರಿಯೆ) ಎಂದು ಉತ್ತರ ನೀಡಿರುವುದಾಗಿ ಬರೆದುಕೊಂಡಿದ್ದಾರೆ. ಎಕ್ಸ್‌ ಬಳಕೆದಾರರು ಹಂಚಿಕೊಂಡ ವಿಡಿಯೋ ನೋಡಿದರೆ, ಮಹುವಾ ಮೊಯಿತ್ರಾ ‘Sex’ಎಂದೇ ಹೇಳಿದಂತೆ ಕೇಳುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವಂತೆ ಮಹುವಾ ಮೊಯಿತ್ರಾ ಅವರು ತನ್ನ ಶಕ್ತಿಯಾ ಅಥವಾ ಉತ್ಸಾಹದ ಮೂಲ ‘ಸೆಕ್ಸ್’ ಎಂದು ಹೇಳಿದ್ದಾರಾ? ಎಂಬುವುದನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋದಲ್ಲಿರುವ ಅಂಶ ಸತ್ಯವೇ? ಎಂದು ತಿಳಿದುಕೊಳ್ಳಲು ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಇದಕ್ಕಾಗಿ ನಾವು ‘ನ್ಯೂಸ್ ದಿ ಟ್ರುತ್’ನ ಅಧಿಕೃತ ಯೂಟ್ಯೂಬ್ ಪೇಜ್ ನೋಡಿದ್ದೇವೆ.
ಅಲ್ಲಿ, “I am Unapologetic”: TMC Mahua Moitra in Conversation with Tamal Saha | Lok Sabha Election 2024″ ಎಂಬ ಶೀರ್ಷಿಕೆಯಲ್ಲಿ ಏಪ್ರಿಲ್ 13, 2024ರಂದು ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಒಟ್ಟು 37 ನಿಮಿಷ 22 ಸೆಕೆಂಡ್‌ನ ವಿಡಿಯೋದಲ್ಲಿ ಎರಡು ನಿಮಿಷ 35 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಹೇಳಿಕೆಯಿದೆ. ವೈರಲ್ ಕ್ಲಿಪ್‌ ಅನ್ನು ಇಂಗ್ಲಿಷ್ ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ altnews.in ನಿಧಾನ ಮಾಡಿ (Slowdown)ಮಾಡಿ ಪರಿಶೀಲಿಸಿದೆ. ಅದರಲ್ಲಿ ಮಹುವಾ ಅವರು ‘Eggs,eggs'(ಮೊಟ್ಟೆ, ಮೊಟ್ಟೆ) ಎಂದು ಹೇಳುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ.

ಹಾಗಾಗಿ, ನಿಮ್ಮ ಶಕ್ತಿಯ ಮೂಲವೇನು? ಎಂದು ಕೇಳಿದ್ದಕ್ಕೆ ಮಹುವಾ ಅವರು ‘ಎಗ್ಸ್‌ ‘(ಮೊಟ್ಟೆ) ಎಂದು ಹೇಳಿದ್ದಾರೆಯೇ ಹೊರತು, ಸೆಕ್ಸ್‌ (ಲೈಂಗಿಕ ಕ್ರಿಯೆ) ಎಂದು ಹೇಳಿಲ್ಲಎಂಬುವುದನ್ನು ಖಚಿತಪಡಿಸಬಹುದು.

ಇನ್ನು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ, ಮಹುವಾ ಅವರನ್ನು ಮಾತನಾಡಿಸಿದ್ದ ಪತ್ರಕರ್ತ ತಮಾಲ್ ಶಾ ಅವರು ಏಪ್ರಿಲ್ 18, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ” ನಾನು ಮಹುವಾ ಮೊಯಿತ್ರಾ ಅವರಿಗೆ ನಿಮ್ಮ ಶಕ್ತಿಯ ಮೂಲವೇನೆಂದು ಕೇಳಿದೆ. ಅದಕ್ಕೆ ಅವರು ಮೊಟ್ಟೆಗಳು ಎಂದು ಹೇಳಿದ್ದಾರೆ. ಭಕ್ತ ಮಂಡಳಿಯವರು ಅದನ್ನು ‘ಸೆಕ್ಸ್’ ಎಂದು ತಿರುಚಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಆದ್ದರಿಂದ, ನಿಮ್ಮ ಶಕ್ತಿಯ ಮೂಲ ಯಾವುದು? ಎಂದು ಕೇಳಿದ್ದಕ್ಕೆ ಮಹುವಾ ಮೊಯಿತ್ರಾ ಅವರು ಎಗ್ಸ್ ( ಮೊಟ್ಟೆ) ಎಂದಿದ್ದಾರೆಯೇ ಹೊರತು, ಸೆಕ್ಸ್ (ಲೈಂಗಿಕತೆ) ಎಂದಿಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...