Homeಮುಖಪುಟಮಣಿಪುರ: ಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ ಮೂವರ ಬಂಧನ

ಮಣಿಪುರ: ಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ ಮೂವರ ಬಂಧನ

- Advertisement -
- Advertisement -

ಇಂಫಾಲ್ ಪೂರ್ವ ಜಿಲ್ಲೆಯ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ ಮೂವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಂಧಿತ ಮೂವರು ವ್ಯಕ್ತಿಗಳು ಶುಕ್ರವಾರ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ಘಟನೆಯ ನಂತರ ಮೂವರು ದುಷ್ಕರ್ಮಿಗಳು ವಾಹನದ ಮೂಲಕ ಸ್ಥಳದಿಂದ ಪರಾರಿಯಾಗಿದ್ದರು. ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿಮೀ ದೂರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳ ಬಳಿಯಿದ್ದ ಒಂದು 0.32 ಪಿಸ್ತೂಲ್‌, ಮದ್ದುಗುಂಡುಗಳು ಹಾಗೂ 15 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ನಿನ್ನೆ ಮತದಾನದ ವೇಳೆ, ಶಸ್ತ್ರಸಜ್ಜಿತ ಗುಂಪು ಮತದಾರರನ್ನು ತಮ್ಮ ಮನೆಗಳಿಂದ ಹೊರಗೆ ಬರದಂತೆ ಬೆದರಿಕೆ ಹಾಕುವುದು, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಹಾನಿಗೊಳಿಸಿರುವ ನಾಲ್ಕು ಘಟನೆಗಳು, ಸಶಸ್ತ್ರ ಗುಂಪಿನಿಂದ ನಕಲಿ ಮತದಾನದ ಆರೋಪಗಳು ಮತ್ತು ಒಂದು ಗುಂಡಿನ ದಾಳಿಯ ಘಟನೆ ವರದಿಯಾಗಿದೆ.

ಇಂಫಾಲ್ ಪಶ್ಚಿಮದ ಖೈಡೆಮ್‌ನಲ್ಲಿರುವ ಮತಗಟ್ಟೆಯ ಬಳಿ ಸುಮಾರು 100 ಜನರ ಪರವಾಗಿ ಸಶಸ್ತ್ರ ಗುಂಪೊಂದು ನಕಲಿ ಮತ ಚಲಾಯಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಗುಂಪು ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಒಡೆದು ಹಾಕಿವೆ ಎಂದು ವರದಿಯಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್‌ನಲ್ಲಿ ನಡೆದ ಗುಂಡಿನ ದಾಳಿಯ 25 ಸೆಕೆಂಡ್‌ಗಳ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಈ ವಿಡಿಯೋ ಹಂಚಿಕೊಂಡಿದ್ದ ಎಕ್ಸ್‌ ಬಳಕೆದಾರರು “ಇಂಫಾಲದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರದ ಪರಿಣಾಮ; ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಲ್ಲಿದೆ? ಅರಂಬಾಯಿ ತೆಂಗೋಲ್ ಭಾರತೀಯ ಸಂವಿಧಾನದ ಕಾನೂನಿಗೆ ಮೇಲಿದೆಯೇ? ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ : ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...