Homeಕರ್ನಾಟಕಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ದೂರು

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ದೂರು

- Advertisement -
- Advertisement -

ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು ಹಾಗೂ ಕಾಳಜಿಯುಳ್ಳ ನಾಗರಿಕರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿಯಾದ ತಂಡ, ಪ್ರಧಾನಿ ಮೋದಿ ವಿರುದ್ಧದ ದೂರಿನ ಪ್ರತಿ, ಸಂವಿಧಾನದ ಪೀಠಿಕೆ ಮತ್ತು ನೀತಿ ಸಂಹಿತೆ ನಿಯಮಗಳ ಪ್ರತಿಯನ್ನು ನೀಡಿದೆ.

ಭಾರತೀಯ ಚುನಾವಣಾ ಆಯೋಗದ ಕಾನೂನಿನ ಪ್ರಕಾರ ಮೋದಿಯವರು ಮಾಡಿದ ಭಾಷಣದ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಅನರ್ಹಗೊಳಿಸಬೇಕು ಮತ್ತು ಅವರನ್ನು ಪ್ರಚಾರ ಮಾಡುವುದರಿಂದ ನಿಷೇಧಿಸಬೇಕು.
ದ್ವೇಷ ಭಾಷಣ ಮಾಡುವುದರ ಮೂಲಕ ಮೋದಿ ಸಮಾಜದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ದೂರಿನ ಪ್ರತಿ 

ಹಿಂದೂ ಸಮಾಜದ ಮತ ಪಡೆಯಲು ಸುಳ್ಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದರ ಜೊತೆಗೆ, ಮುಸ್ಲಿಂ ಸಮುದಾಯದ ಬಗ್ಗೆ ಹಲವು ಅಪಾಯಕಾರಿ ಚಿಂತನೆಗಳನ್ನು ಹಬ್ಬಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿಗೆ ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಈ ಘಟನೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ, ದೂರನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ರವಾನಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ದ್ವೇಷ ಭಾಷಣಗಳು ನಡೆದ‌ ಕಡೆ ನಾವು ಎಫ್‌ಐಆರ್ ದಾಖಲಿಸುತಿದ್ದೇವೆ. ಆದರೆ, ಯಾವುದೇ ಅಭ್ಯರ್ಥಿಯನ್ನು ಚುನಾಣಾ ಪ್ರಚಾರದಿಂದ ನಿರ್ಬಂಧಿಸಲು ನನಗೆ ಅಧಿಕಾರವಿಲ್ಲ. ಈ ವಿಷಯದ ಕುರಿತು ನಾವು ಹೇಗಿದ್ದರೂ ಪಕ್ಷಗಳ ವಿರುದ್ದ ಕ್ರಿಮಿನಲ್ ಕ್ರಮ ತೆಗೆದುಕೊಂಡ ಕಾರಣ, ಆ ಪಕ್ಷಗಳಿಗೆ ನೋಟಿಸ್ ಏನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಈ ದೂರು ಸಲ್ಲಿಸಿದ ಸಂಸ್ಥೆಗಳು :

1. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL)

2. ಬಹುತ್ವ ಕರ್ನಾಟಕ

3. ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (AILAJ)

4. ದ್ವೇಷ ಭಾಷಣದ ವಿರುದ್ಧ ಜನಾಂದೋಲನ

5. ಪೀಪಲ್ಸ್ ವಾಚ್

6. ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವಿಮೆನ್ (NFIW)

7. ನ್ಯಾಷನಲ್ ಅಲೈಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ಸ್ (NAPM)

8. ನ್ಯೂ ಟ್ರೇಡ್ ಯೂನಿಯನ್ ಇನಿಶಿಯೇಟಿವ್ (NTUI)

9. ಹ್ಯೂಮನ್ ರೈಟ್ಸ್ ಫೋರಮ್ (HRF)

10. ಲಾ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್

11. ಸೇವ್ ದಿ ನೇಷನ್

12. ತಮಿಳುನಾಡು ಪೊದುಮೇಡೈ

13. ಭಾರತ್ ಜೋಡೋ ಅಭಿಯಾನ್, ಮುಂಬೈ

14. ಸ್ಟೂಡೆಂಟ್ಸ್ಪೀ ಫಾರ್ಪ ಪೀಪಲ್ಸ್ ಡೆಮಾಕ್ರಸಿಗಾಗಿ

15. ಆಲ್ ಇಂಡಿಯಾ ಡೆಮಾಕ್ರೆಟಿಕ್ ವಿಮೆನ್ಸ್ ಅಸೋಸಿಯೇಷನ್ (AIDWA)

ಇದನ್ನೂ ಓದಿ : ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...