Homeಮುಖಪುಟರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಲು...

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಲು ಮುಂದಾದ ಚು.ಆಯೋಗ; ವರದಿ

- Advertisement -
- Advertisement -

ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಭಾಷಣ ಮಾಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗದು ಎಂಬ ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆ ಇದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಧಾನಿ ಮೋದಿ ಭಾಷಣದಲ್ಲಿ ಧಾರ್ಮಿಕ ವಿಚಾರಗಳನ್ನು ತರುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಆನಂದ್ ಎಸ್ ಜೊಂಡಲೆ ಅವರು ನೀಡಿರುವ ದೂರನ್ನು ಚುನಾವಣಾ ಆಯೋಗ ವಿಲೇವಾರಿ ಮಾಡುವ ಸಾಧ್ಯತೆಯಿದೆ(ತಿರಸ್ಕರಿಸುವ) ಎಂದು ವರದಿ ತಿಳಿಸಿದೆ.

ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿಯವರು “ಹಿಂದೂ ದೇವರುಗಳು, ಹಿಂದೂ ಪೂಜಾ ಸ್ಥಳಗಳು, ಸಿಖ್ ದೇವರುಗಳು, ಸಿಖ್ ಆರಾಧನಾ ಸ್ಥಳಗಳ ಹೆಸರಿನಲ್ಲಿ ತಮ್ಮ ಪಕ್ಷಕ್ಕೆ ಮತ ಕೇಳುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಇದು ಪ್ರಧಾನಿ ವಿರುದ್ಧದ ದೂರುಗಳ ಚುನಾವಣಾ ಸಮಿತಿಯ ಮೊದಲ ವಿಲೇವಾರಿಯಾಗಿದೆ. ಎಪ್ರಿಲ್ 21 ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮುಸ್ಲಿಮರ ವಿರುದ್ದ ಮಾಡಿರುವ ದ್ವೇಷ ಭಾಷಣದ ವಿರುದ್ದ ಹಲವು ದೂರುಗಳು ದಾಖಲಾಗಿವೆ. ಚುನಾವಣಾ ಆಯೋಗ ಅವುಗಳನ್ನು ಪರಿಶೀಲಿಸುತ್ತಿದೆ.

ಚುನಾವಣಾ ಸಮಿತಿಯು ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಜೊಂಡಲೆ ಅವರೊಂದಿಗೆ ಹಂಚಿಕೊಳ್ಳಲಿದೆ. ಈ ಪ್ರಕರಣ ಸಂಬಂಧ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಈ ವಾರ ವಿಚಾರಣೆಗೆ ಒಳಪಡಿಸುವ ನಿರೀಕ್ಷೆಯಿದೆ. ನ್ಯಾಯಾಲಯದ ಮೆಟ್ಟಿಲೇರುವ ಮೊದಲು, ಏಪ್ರಿಲ್ 10ರಂದು ಚುನಾವಣಾ ಆಯೋಗಕ್ಕೆ ಜೋಂಡಲೆ ದೂರು ನೀಡಿದ್ದರು.

ಫಿಲಿಬಿತ್‌ನಲ್ಲಿ ಪ್ರಧಾನಿ ಮೋದಿ ಧಾರ್ಮಿಕ ವಿಚಾರ ಉಲ್ಲೇಖಿಸಿ ನೀತಿ ಸಂಹಿತೆ ಉಲ್ಲಂಘಿಸಿಲ್ಲ. ಅವರು ತಮ್ಮ ಸರ್ಕಾರದ ಸಾಧನೆಗಳನ್ನು ಹೇಳಿದ್ದಾರೆ ಎಂದು ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡುವ ಸಾಧ್ಯತೆ ಇದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ : ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read