Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...