Homeಕರ್ನಾಟಕಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

ಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

- Advertisement -
- Advertisement -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿ ಮಹತ್ವದ ಅಂಶವೊಂದು ಬಯಲಾಗಿದ್ದು, ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ 4.8 ಕೋಟಿ ರೂಪಾಯಿ ನಗದು ವಾಪಾಸ್ಸು ಮಾಡಲು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಮಾಜಿ ಆರೋಗ್ಯ ಸಚಿವ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕರೆ ಮಾಡಿದ್ದರು ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ಏಪ್ರಿಲ್ 25ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿರುವ ಮುನೀಶ್ ಅವರ ಪೋನ್‌ಗೆ ಸುಧಾಕರ್ ಅವರ ದೂರವಾಣಿ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದೆ. ಕರೆಯಲ್ಲಿ ‘ಬಿಟ್ಬಿಡಿ’ ಎಂದು ಸುಧಾಕರ್‌ ಆಗ್ರಹಿಸಿದ್ದಾರೆ. ಇದಲ್ಲದೆ ವಾಟ್ಸಾಫ್‌ ಸಂದೇಶವನ್ನು ಕೂಡ ಕಳುಹಿಸಿದ್ದಾರೆ, ಸಂದೇಶದಲ್ಲಿ ನಗದು ವಾಪಾಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ.

ಸುಧಾಕರ್ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸದಸ್ಯ ದಶರಥ ವಿ ಕುಂಬಾರ್ ಸಲ್ಲಿಸಿರುವ ದೂರಿನಲ್ಲಿ, ಏಪ್ರಿಲ್ 25ರಂದು ಬೆಳಿಗ್ಗೆ 11.45 ರ ಸುಮಾರಿಗೆ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಯಲಹಂಕದ ಮನೆಯೊಂದರಲ್ಲಿ ಸುಮಾರು 10 ಕೋಟಿ ರೂ.ನಗದು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಮತದಾರರಿಗೆ ಲಂಚ ನೀಡುವುದಕ್ಕಾಗಿ ಮತ್ತು ಚುನಾವಣೆ ಸಮಯದಲ್ಲಿ ದುರ್ಬಳಕೆಗಾಗಿ ನಗದು ಕೂಡಿಟ್ಟಿರುವ ಬಗ್ಗೆ ಆರೋಪಿಸಿದ್ದರು. ಇದಲ್ಲದೆ ಕರೆ ಮಾಡಿದವರು ನಗದು ಇರುವ ಮನೆಯ ಜಿಪಿಎಸ್ ಲೊಕೇಶನ್‌ ಕೂಡ ನೀಡಿದ್ದರು.

ಇದರ ಬೆನ್ನಲ್ಲಿ ಮುನೀಶ್ ಮೌದ್ಗಿಲ್ ಅವರು ಮಧ್ಯಾಹ್ನ 1ಗಂಟೆ ಸುಮಾರಿಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ನಡೆದ ದಾಳಿಯಲ್ಲಿ ಸುಧಾಕರ್‌ ಆಪ್ತ ಗುತ್ತಿಗೆದಾರನ ಮನೆಯಿಂದ 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಚುನಾವಣಾ ನಾಮಪತ್ರದಲ್ಲಿ ಉಲ್ಲೇಖಿಸಿರುವ ಸಂಖ್ಯೆಯಿಂದ ಮುನೀಶ್ ಮೌದ್ಗಿಲ್‌ಗೆ ಕರೆ ಮತ್ತು ವಾಟ್ಸಾಪ್‌ ಸಂದೇಶ ಹೋಗಿದೆ.

ಮೌದ್ಗಿಲ್ ಅವರಿಗೆ ಮಧ್ಯಾಹ್ನ 2.04ಕ್ಕೆ ಮಾಧವರ ಗೋವಿಂದಪ್ಪ ಐಟಿ ತಂಡ ಎಂದು ಉಲ್ಲೇಖಿಸಿದ ಒಂದು ಸಂದೇಶ ಹೋಗಿದೆ, ನಂತರ 2.07ಕ್ಕೆ ಇನ್ನೊಂದು ಸಂದೇಶವು ದಯವಿಟ್ಟು ಸಹಾಯ ಮಾಡಿ ನಾನು ನಿಮಗೆ ತುಂಬಾ ಕೃತಜ್ಞರಾಗಿರುತ್ತೇನೆ, ವಂದನೆಗಳು ಎಂದು ಉಲ್ಲೇಖಿಸಲಾಗಿದೆ. ಮಧ್ಯಾಹ್ನ 2.14ಕ್ಕೆ ಸುಧಾಕರ್ ಮೌದ್ಗಿಲ್ ಅವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ “9945141601 ಆನಂದ್ ರತ್ಕಲ್” ಎಂದು ಬರೆದಿತ್ತು. ಐಆರ್‌ಎಸ್ ಅಧಿಕಾರಿ ಆನಂದ್ ರತ್ಕಲ್ ಅವರು ಬೆಂಗಳೂರು ನಗರ ಜಿಲ್ಲೆಯ ಐಟಿ ನೋಡಲ್ ಅಧಿಕಾರಿಯಾಗಿದ್ದು, ಇವರೇ ದಾಳಿ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಅವರಿಗೆ ನಗದನ್ನು ಬಿಟ್ಟು ಬಿಡುವಂತೆ ಸೂಚಿಸಲು ಮೌದ್ಗಿಲ್‌ಗೆ ನಂಬರ್ ಕಳುಹಿಸಿದ್ದರು ಎಂದು ಅಂದಾಜಿಸಲಾಗಿದೆ.

ಈ ಕುರಿತು ಅಧಿಕಾರಿಯೋರ್ವರು ಮಾತನಾಡಿದ್ದು, ಚುನಾವಣೆ ವೇಳೆ ನಡೆದ ದಾಳಿಗಳಲ್ಲಿ ಹಣ ಮತ್ತು ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಗುತ್ತಿಗೆದಾರರು ಅಥವಾ ಇತರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ನಂತರ ಐಟಿ ಇಲಾಖೆಯು ದಂಡ ಪಾವತಿಸಿದ ನಂತರ ಹಣವನ್ನು ಬಿಡುಗಡೆ ಮಾಡುತ್ತದೆ. ಈ ಪ್ರಕರಣದಲ್ಲೂ ಸುಧಾಕರ್ ಕರೆ ಮಾಡದೆ ಇದ್ದಿದ್ದರೆ ಯಾವ ರಾಜಕಾರಣಿಗೂ ಲಿಂಕ್ ಆಗುತ್ತಿರಲಿಲ್ಲ. ಹಣ ವಶಪಡಿಸಿಕೊಂಡಾಗ ರಾಜಕಾರಣಿಯೊಬ್ಬರು ಕರೆ ಮಾಡಿದರೂ ಇತರ ಹಲವು ಅಧಿಕಾರಿಗಳು ದೂರು ದಾಖಲಿಸದೇ ಇರಬಹುದು, ಆದರೆ ಮೌದ್ಗಿಲ್‌ ಇದನ್ನು ಮಾಡಿದ್ದಾರೆ. ಈಗ ಸುಧಾಕರ್ ಅವರು ಆ ಸಂದೇಶಗಳನ್ನು ಏಕೆ ಕಳುಹಿಸಿದ್ದಾರೆ ಎಂಬುವುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 ಇ (ಲಂಚ), 171 ಎಫ್, 171 ಬಿ, 171 ಸಿ (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಮತ್ತು ಸೆಕ್ಷನ್ 123ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...