Homeಕರ್ನಾಟಕವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

ವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ದಲಿತ ಚಳವಳಿಯ ಹಿರಿಯ ನಾಯಕ, ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಅವರ ಬಹುಕಾಲದ ಒಡನಾಡಿಯಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್‌.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ರಾಜಕಾರಣಿಗಳು, ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನರಾದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ದಲಿತ ದಮನಿತರ ಪರವಾದ ದಿಟ್ಟ ದನಿ, ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ’ ಎಂದು ಹೇಳಿದ್ದಾರೆ.

“ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ನೋವು ತೋಡಿಕೊಂಡಿದ್ದಾರೆ.

‘ಸ್ನೇಹಿತ, ಸಂಸದರು, ಕರ್ನಾಟಕ ಕಂಡಂತಹ ಶ್ರೇಷ್ಠ ಮುತ್ಸದ್ದಿ ನಾಯಕರಲ್ಲಿ ಒಬ್ಬರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯು ಅಪಾರ ನೋವನ್ನುಂಟುಮಾಡಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಶೋಷಿತರ ಏಳಿಗೆಗಾಗಿ ಹಾಗೂ ಅನ್ಯಾಯ, ಅಸಮಾನತೆಯ ವಿರುದ್ಧದ ಹೋರಾಟಕ್ಕೆ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಶ್ರೀನಿವಾಸ್ ಪ್ರಸಾದ್ ಅವರು ಆದರ್ಶವಾಗಿ ಇದ್ದಂತಹ ನಾಯಕರು. ಅವರ ಹೋರಾಟದ ಹಾಗೂ ಸಚ್ಚಾರಿತ್ರ್ಯದ ಬದುಕು ಯುವಕರಿಗೆ ಸದಾ ಸ್ಫೂರ್ತಿ ನೀಡುವಂತಹದ್ದು, ಸಾಮಾಜಿಕ ನ್ಯಾಯದ ಪರವಾದ ರಾಜಕಾರಣಕ್ಕೆ ಅವರ ಸೇವೆ ಇನ್ನಷ್ಟು ಅಗತ್ಯವಿತ್ತು, ಕೇಂದ್ರ ಸಚಿವರಾಗಿ, ರಾಜ್ಯದ ಸಚಿವರಾಗಿ ಸಂಸದರಾಗಿ ಅವರ ಸೇವೆ ಅನನ್ಯವಾದುದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸ್ ಪ್ರಸಾಧ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗೆ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ.

‘ಅವರ ನೇರ, ನಿಷ್ಠುರ ಹಾಗೂ ಪ್ರಾಮಾಣಿಕ ವ್ಯಕ್ತಿತ್ವ ಹಾಗೂ ಬಾಬಾ ಸಾಹೇಬರ ಸಮಸಮಾಜದ ನಿರ್ಮಾಣದ ಬಗೆಗಿನ ಅವರ ಬದ್ಧತೆ ಹಾಗೂ ಹೋರಾಟ ಸದಾ ಸ್ಪೂರ್ತಿದಾಯಕ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಚಳವಳಿಯಲ್ಲಿ ಶ್ರೀನಿವಾಸ್ ಪರಸಾದ್ ಅವರ ಬಹುಕಾಲದ ಒಡನಾಡಿಯಾಗಿದ್ದ ಸಚಿವ ಮಹದೇವಪ್ಪ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಸಾಕಷ್ಟು ಮನುಷ್ಯ ಪ್ರೀತಿಯನ್ನು ಇಟ್ಟುಕೊಂಡು, ಸೈದ್ಧಾಂತಿಕ ವಿಷಯದಲ್ಲಿ ಎಂದೂ ರಾಜಿ‌ಮಾಡಿಕೊಳ್ಳದೇ, ಶೋಷಿತ ಸಮುದಾಯಗಳ ಹಿತಾಸಕ್ತಿಯ ಪರವಾಗಿದ್ದ ಧೀಮಂತ ನಾಯಕ, ದಲಿತರ ಸ್ವಾಭಿಮಾನದ ದನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಅವರಿಗೆ ಶುಭಕೋರಿ ಅವರ ಯೋಗಕ್ಷೇಮ ವಿಚಾರಿಸುವ ಸಲುವಾಗಿ ತೆರಳಿದ್ದ ವೇಳೆ ಸುಮಾರು ಹೊತ್ತು ಅವರೊಂದಿಗೆ ಚರ್ಚಿಸಿದ್ದೆನು. ಸಮಾನ ಮನಸ್ಕರಾದ ನೀವೆಲ್ಲರೂ ಬಂದಿದ್ದು ನನಗೆ ತೀವ್ರ ಸಂತೋಷ ತಂದಿದೆ ಎಂದು ಪ್ರಸಾದ್ ಅವರು ನನ್ನೆಡೆ ಆಪ್ತ ಭಾವನೆಯಿಂದ ನೋಡಿದ್ದನ್ನು ನಾನು ಎಂದಿಗೂ ಮರೆಯಲಾರೆ” ಎಂದು ಬರೆದುಕೊಂಡಿದ್ದಾರೆ.

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

“ಸಮಸಮಾಜದ ಗಟ್ಟಿ ಪ್ರತಿಪಾದಕರು, ರಾಜ್ಯ ಕಂಡ ಮೇರು ನಾಯಕರಲ್ಲಿ ಒಬ್ಬರಾದ ಶ್ರೀನಿವಾಸ ಪ್ರಸಾದ್ ಅವರ ಅಕಾಲಿಕ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದಿಂದ ರಾಜ್ಯದಲ್ಲಿ ಪ್ರಗತಿಪರ ರಾಜಕಾರಣದ ಕೊಂಡಿ ಕಳಚಿದಂತಾಗಿದೆ. ಬುದ್ದ ಬಸವ ಅಂಬೇಡ್ಕರ್ ತತ್ವಗಳ ಆಧಾರದಲ್ಲಿ ಅನ್ಯಾಯದ ವಿರುದ್ಧದ ಹೋರಾಟದ ಹಾದಿಯನ್ನೇ ಬದುಕಾಗಿಸಿದ್ದ, ವಯಕ್ತಿಕವಾಗಿ ಮಾರ್ಗದರ್ಶಕರಾಗಿದ್ದ ಅವರ ಜೀವನ ನಾಡಿನ ಮುಂದಿನ ಪೀಳಿಗೆಗೆ ಸದಾ ನಂದಾದೀಪದಂತೆ ಉಳಿಯಲಿದೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನ ವರ್ಗಕ್ಕೆ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...