Homeಮುಖಪುಟಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

- Advertisement -
- Advertisement -

ಬ್ರಿಟನ್‌ನ ಭಾರತೀಯರು ಅಥವಾ ಆ ದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.52ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯತೆಯನ್ನು ರಕ್ಷಿಸಲು ಪ್ರಯತ್ನಿಸುವ ಸಮುದಾಯ ನೇತೃತ್ವದ ಸಂಸ್ಥೆ ಎಂದು ಗುರುತಿಸಿಕೊಂಡಿರುವ ‘ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ’ ಬ್ರಿಟಿಷ್ ಭಾರತೀಯರಾದ 500 ಜನರ ಮೇಲೆ ಬ್ರಿಟನ್‌ನಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 50ರಷ್ಟು ಹಿಂದೂಗಳು ಹಿಂದುತ್ವ ತತ್ವಗಳನ್ನು ತಿರಸ್ಕರಿಸಿದ್ದಾರೆ.

ಶೇ.50ರಷ್ಟು ಮಹಿಳೆಯರು ಮತ್ತು ಶೇ.50ರಷ್ಟು ಪುರುಷರ ಮೇಲೆ ಸಮೀಕ್ಷೇ ನಡೆಸಲಾಗಿದೆ. ಈ ಸಮೀಕ್ಷೆಗೆ ಒಳಗಾದವರಲ್ಲಿ 18 ರಿಂದ 44 ವರ್ಷ ವಯಸ್ಸಿನವರು 57%, ಹಿಂದೂಗಳು 43%, ಪದವೀದರರು 62% ಮತ್ತು ಬ್ರಿಟನ್‌ನಿಂದ ಹೊರಗೆ ಜನಿಸಿದವರು 56% ಇದ್ದಾರೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ನಾಲ್ಕು ವರ್ಷಗಳವರೆಗೆ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದರೆ, ಉಳಿದ ಅರ್ಧದಷ್ಟು ಜನರು ಕನಿಷ್ಠ ಐದು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ.

ಒಟ್ಟು ಪ್ರತಿಕ್ರಿಯಿಸಿದವರಲ್ಲಿ 35 ಶೇ. ಜನರು ಮೋದಿಯವರ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಶೇ.52ರಷ್ಟು ಜನರು ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಹಿಂದೂಗಳಲ್ಲಿ, ಶೇ.57ರಷ್ಟು ಜನರು ಭಾರತದ ಪ್ರಧಾನಿಯ ಪರ ಒಲವು ತೋರಿದ್ದಾರೆ, ಆದರೆ ಶೇ. 71ರಷ್ಟು ಹಿಂದೂಯೇತರರು ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಭಾರತದಲ್ಲಿ ಜನಿಸಿದವರು, ವಯಸ್ಸಾದವರು ಮತ್ತು ಇಂಗ್ಲಿಷ್ ಮಾತನಾಡಲು ಬಾರದ ಮನೆಯಲ್ಲಿರುವವರು ಮೋದಿಯವರ ಬಗ್ಗೆ ಹೆಚ್ಚು ಒಲವು ತೋರಿದ್ದಾರೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಪ್ರಕಟಣೆಯಲ್ಲಿ ಹೇಳಿದೆ.

ಪುರುಷರಿಗಿಂತ ಹೆಚ್ಚು ಶೇ.34ರಷ್ಟು ಮಹಿಳೆಯರು ಮೋದಿಯವರ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.28ರಷ್ಟು ಪುರುಷರು ಮೋದಿ ಪರ ಮಾತನಾಡಿದ್ದಾರೆ.

ಭಾರತದ ಪಥ (ಭಾರತ ಮುನ್ನಡೆಯುತ್ತಿರುವ ಹಾದಿ)ದ ಬಗ್ಗೆ ಕೇಳಿದಾಗ, ಶೇ. 68ರಷ್ಟು ಹಿಂದೂಗಳು ಭಾರತವು ಸರಿಯಾದ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಆದರೆ, ಶೇ. 73ರಷ್ಟು ಹಿಂದೂಯೇತರರು ಮತ್ತು ಶೇ. 81ರಷ್ಟು ಮುಸ್ಲಿಮರು ಇದನ್ನು ಒಪ್ಪಿಲ್ಲ.

ಸಮೀಕ್ಷೆಯ ಸಾರಾಂಶವು, ಉತ್ತರಿಸಿದ ಬಹುಪಾಲು ಜನರು “ಮೋದಿಯಿಂದ ಪ್ರಚಾರಗೊಂಡ ಧಾರ್ಮಿಕ ಹಿಂಸಾಚಾರವು ಬ್ರಿಟನ್‌ಗೆ ವ್ಯಾಪಿಸುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಹಿಂದೂಗಳು, ಅಂದರೆ ಶೇ. 65ರಷ್ಟು ಜನರು ಸಂಬಂಧಿತ ಘಟನೆಗಳಿಗೆ ಮೋದಿಯನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಇನ್ನು ಈ ಕುರಿತು ಶೇ.65ರಷ್ಟು ಜನರು 1ರಿಂದ 10ರೊಳಗಿನ ರೇಟಿಂಗ್ಸ್‌ನಲ್ಲಿ 8 ರೇಟಿಂಗ್ ನೀಡಿದ್ದಾರೆ. ಇದು ಗಂಭೀರ ಕಳವಳವನ್ನು ಸೂಚಿಸುತ್ತದೆ. 2022ರಲ್ಲಿ ಲೀಸೆಸ್ಟರ್‌ನಲ್ಲಿ ಹಿಂದೂ-ಮುಸ್ಲಿಮರ ನಡುವೆ ನಡೆದ ಹಿಂಸಾಚಾರವನ್ನು ಹೆಚ್ಚಿನ ಜನರು ಉಲ್ಲೇಖಿಸಿದ್ದಾರೆ.

ಈ ಸಮೀಕ್ಷೆಯು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕಾರ್ಯಸೂಚಿಯನ್ನು ಇಡೀ ಬ್ರಿಟಿಷ್ ಭಾರತೀಯ ಸಮುದಾಯ ಬೆಂಬಲಿಸುತ್ತಿದೆ ಎಂಬ ಚಾಲ್ತಿಯಲ್ಲಿರುವ ನಂಬಿಕೆಯನ್ನು ಸುಳ್ಳಾಗಿಸಿದೆ ಎಂದು ಪ್ಲಾಟ್‌ಫಾರ್ಮ್ ಫಾರ್ ಇಂಡಿಯನ್ ಡೆಮಾಕ್ರಸಿ ಹೇಳಿದೆ.

ಹಿಂದುತ್ವದ ಬಗೆಗಿನ ಧೋರಣೆಗಳು ಮತ್ತು ಭಾರತದ ಬಗ್ಗೆ ಕಾಳಜಿ

ಶೇ. 50ರಷ್ಟು ಹಿಂದೂ ಪ್ರತಿಕ್ರಿಯಿಸಿದವರು ಸೇರಿದಂತೆ ಬಹುಪಾಲು ಪ್ರತಿಕ್ರಿಯಿಸಿದವರು ತಾವು ಹಿಂದುತ್ವದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿರುವುದಾಗಿ ಸಮೀಕ್ಷೆ ಹೇಳಿದೆ. ಹಿಂದುತ್ವದ ಕಡೆ ಒಲವು ಹೊಂದಿರುವವರಲ್ಲಿ ಹೆಚ್ಚಿನವರು ಪುರುಷರು, ಅವರು ಜಾತಿ, ಅರೇಂಜ್ ಮ್ಯಾರೇಜ್, ಗೋಮಾಂಸ ನಿಷೇಧ ಇತ್ಯಾದಿ ವಿಚಾರಗಳಲ್ಲಿ ಹಿಂದುತ್ವದ ಕಡೆ ಒಲವು ತೋರಿಸಿದ್ದಾರೆ.

ಪ್ರತಿಕ್ರಿಯಿಸಿದವರಲ್ಲಿ ಮೋದಿ ಪರವಾಗಿ ಒಲವು ತೋರಿಸದವರು ‘ಧಾರ್ಮಿಕ ಉದ್ವಿಗ್ನತೆ ಮತ್ತು ಪ್ರಜಾಪ್ರಭುತ್ವದ ನಿರ್ಬಂಧಗಳು ಭಾರತ ಎದುರಿಸುತ್ತಿದೆ’ ಎಂದು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...