Homeಮುಖಪುಟತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ 'ಸ್ಟ್ರಾಂಗ್ ರೂಂ' ಹೊರಗಿನ ಸಿಸಿಟಿವಿ

ತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗಿನ ಸಿಸಿಟಿವಿ

- Advertisement -
- Advertisement -

ತಮಿಳುನಾಡಿನ ಈರೋಡ್ ಸಂಸದೀಯ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳು (ಇವಿಎಂ) ಮತ್ತು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳನ್ನು ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗೆ ಇರಿಸಲಾದ ಸಿಸಿಟಿವಿ ಕ್ಯಾಮೆರಾ ಸೋಮವಾರ ನಸುಕಿನ ವೇಳೆ ಒಂದು ಗಂಟೆಯ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ವರದಿಯಾಗಿದೆ.

ಚಿತ್ತೋಡಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ಇತ್ತು. ಈರೋಡ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರಾಜ ಗೋಪಾಲ್ ಸುಂಕರ ಪ್ರಕಾರ, ಸ್ಟ್ರಾಂಗ್ ರೂಮ್‌ನ ಹೊರಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ದೋಷವನ್ನು ಒಂದು ಗಂಟೆಯಲ್ಲಿ ಸರಿಪಡಿಸಲಾಗಿದೆ. ಸ್ಟ್ರಾಂಗ್ ರೂಮ್‌ನ ಹೊರಗಿನ ಎಲ್ಲಾ ಕ್ಯಾಮೆರಾಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ನೀಲಗಿರಿ ಲೋಕಸಭಾ ಕ್ಷೇತ್ರದ ಉದಗಮಂಡಲಂನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಇದೇ ರೀತಿಯ ಸಮಸ್ಯೆ ವರದಿಯಾಗಿದ್ದು, ಏಪ್ರಿಲ್ 27ರಂದು ಇವಿಎಂಗಳನ್ನು ಹೊಂದಿರುವ ಆರು ಸ್ಟ್ರಾಂಗ್ ರೂಮ್‌ಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು 20 ನಿಮಿಷಗಳ ಕಾಲ ಯಾವುದೇ ದೃಶ್ಯವನ್ನು ದಾಖಲಿಸದೆ ಖಾಲಿಯಾಗಿದೆ.

ಇದು ಎರಡನೇ ಘಟನೆ ಹಿನ್ನೆಲೆಯಲ್ಲಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೋಮವಾರ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಪತ್ರ ಬರೆದಿದ್ದು, ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯನ್ನು ಖಾತರಿಪಡಿಸಲು ಮತ್ತು ಭದ್ರತಾ ಉಲ್ಲಂಘನೆಗಳನ್ನು ತಡೆಯಲು ತ್ವರಿತ ಮಧ್ಯಸ್ಥಿಕೆಗೆ ವಿನಂತಿಸಿದ್ದಾರೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ಸಿಸಿಟಿವಿ ಕವರೇಜ್‌ನ ಅಡಚಣೆಯನ್ನು ಉದ್ದೇಶಪೂರ್ವಕವಾಗಿ ಉಂಟುಮಾಡಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಸಿಇಸಿಗೆ ಮನವಿ ಮಾಡಿದರು.

ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಿರುವ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಇದೆ ಎಂದು ರಾಜಾ ವಿವರಿಸಿದರು. ಈರೋಡ್‌ನ ಎಲ್ಲಾ ಸ್ಟ್ರಾಂಗ್ ರೂಮ್‌ಗಳ ಹೊರಗೆ ಒಟ್ಟು 48 ಸಿಸಿಟಿವಿ ಕ್ಯಾಮೆರಾಗಳಿವೆ. ಪ್ರತಿ ಸ್ಟ್ರಾಂಗ್ ರೂಮ್‌ನ ಹೊರಗೆ ಎಂಟು ಕ್ಯಾಮೆರಾಗಳನ್ನು ಇರಿಸಲಾಗಿದೆ, ಇವೆಲ್ಲವೂ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿವೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಬಹುದು ಎಂದು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮೇಲ್ವಿಚಾರಣೆಯು ಚುನಾವಣಾ ಫಲಿತಾಂಶಗಳು ಬರುವ ಜೂನ್ 4ರವರೆಗೆ ಇರುತ್ತದೆ. ಫಲಿತಾಂಶಗಳ ನಂತರ ಮೂರು ತಿಂಗಳ ಅವಧಿಗೆ ಈ ತುಣುಕನ್ನು ಸಂಗ್ರಹಿಸಲಾಗುತ್ತದೆ.

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ, ಅಲ್ಲಿ ಭೋಪಾಲ್‌ನ ಸ್ಟ್ರಾಂಗ್ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ್ದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದಿದ್ದರೂ, ಸಂಬಂಧಪಟ್ಟ ಅಧಿಕಾರಿಯ ಲೋಪವನ್ನು ಗಮನಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...