Homeಕರ್ನಾಟಕಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇಂದು (ಮೇ 1, 2024) ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್‌ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ. ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್‌ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, 2024ರ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ ಪ್ರಕರಣದ ಬಗ್ಗೆ ನಿಮಗೆ ತಿಳಿದಿರಲೇಬೇಕು. ಪ್ರಜ್ವಲ್ ರೇವಣ್ಣ ಅವರು ಎದುರಿಸುತ್ತಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿತನದ್ದಾಗಿದ್ದು, ಇದು ದೇಶದ ಆತ್ಮಸಾಕ್ಷಿಯನ್ನೇ ಅಲ್ಲಾಡಿಸಿದೆ” ಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.

“ಕರ್ನಾಟಕ ಸರ್ಕಾರ ಏಪ್ರಿಲ್ 28ರಂದು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ (ಸಿಐಡಿ) ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ತನಿಖೆಯನ್ನು ಸರಿಯಾದ ರೀತಿಯಲ್ಲಿ ಪ್ರಾರಂಭಿಸಿದೆ. ಹಲವಾರು ಮಹಿಳೆಯರ ವಿರುದ್ಧದ ಆಪಾದಿತ ಅಪರಾಧಗಳ ನೈಜ ಸ್ವರೂಪ ಹೊರಬಿದ್ದ ಕೂಡಲೇ ಸಂತ್ರಸ್ತರು ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಲು ಎಸ್‌ಐಟಿ ರಚನೆ ಮಾಡಲಾಗಿದ್ದು, ಏಪ್ರಿಲ್ 28ರಂದು ಎಫ್‌ಐಆರ್ ಕೂಡ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

“ವರದಿಗಳ ಪ್ರಕಾರ, ಪೊಲೀಸ್ ಪ್ರಕರಣ ಮತ್ತು ಬಂಧನವನ್ನು ಗ್ರಹಿಸಿದ್ದ ಆರೋಪಿ ಸಂಸದ ಮತ್ತು ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 27ರಂದು ದೇಶ ಬಿಟ್ಟು ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ” ಎಂದಿದ್ದಾರೆ.

“ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಮಾಡಿದ್ದಾರೆನ್ನಲಾದ ಅಪರಾಧಗಳ ಆರೋಪಗಳ ತನಿಖೆಗೆ ಎಸ್‌ಐಟಿ ಹಗಲಿರುಳು ಶ್ರಮಿಸುತ್ತಿರುವಾಗ, ಅವರನ್ನು ದೇಶಕ್ಕೆ ಮರಳಿ ಕರೆ ತರುವುದು ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಅವರು ದೇಶದ ಕಾನೂನಿನ ಪ್ರಕಾರ ತನಿಖೆ ಮತ್ತು ವಿಚಾರಣೆಯನ್ನು ಎದುರಿಸಬೇಕಿದೆ.” ಎಂದು ಹೇಳಿದ್ದಾರೆ.

“ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ ಮತ್ತು ಪೊಲೀಸ್ ವ್ಯವಸ್ಥೆಗಳನ್ನು ಬಳಸಿಕೊಂಡು ಮತ್ತು ಇತರ ಕ್ರಮಗಳನ್ನು ಕೈಗೊಳ್ಳಲು ವಿದೇಶಾಂಗ ವ್ಯವಹಾರ ಮತ್ತು ಗೃಹ ವ್ಯವಹಾರಗಳ ಸಚಿವಾಲಯಗಳನ್ನು ಒತ್ತಾಯಿಸಲು ಈ ಪತ್ರ ಬರೆಯಲಾಗಿದೆ. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳ ನೆರವಿನಿಂದ ಕಾನೂನನ್ನು ಎದುರಿಸಲು ಪರಾರಿಯಾದ ಸಂಸತ್ ಸದಸ್ಯನನ್ನು ಶೀಘ್ರವೇ ವಾಪಸ್ ವಿದೇಶದಿಂದ ಕರೆತರಲು ಮನವಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಎಸ್ಐಟಿ ಎಲ್ಲಾ ಅಗತ್ಯ ವಿವರಗಳನ್ನು ಒದಗಿಸಲಿದೆ” ಎಂದು ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಕೆಲ ವರದಿಗಳು ಪ್ರಜ್ವಲ್ ಮೇ 3ರಂದು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರಿಗೂ ಏಪ್ರಿಲ್ 30ರಂದು ನೋಟಿಸ್ ಜಾರಿ ಮಾಡಿದೆ. 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...