Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...