Homeಮುಖಪುಟಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್‌ಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚು.ಆಯೋಗ

- Advertisement -
- Advertisement -

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರಿಗೆ ಚುನಾವಣಾ ಆಯೋಗವು 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ವಿಧಿಸಿದೆ.

ಭಾರತದ ಸಂವಿಧಾನದ 324 ನೇ ವಿಧಿ ಯಡಿಯಲ್ಲಿ, BRS ಅಧ್ಯಕ್ಷರಾದ ಕೆ. ಚಂದ್ರಶೇಖರ ರಾವ್ ಅವರು ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು,  ಸಂದರ್ಶನಗಳು, ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಯಾವುದೇ ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಹೇಳಿಕೆಗಳನ್ನು ನೀಡದಂತೆ ನಿಷೇಧ ವಿಧಿಸಿದೆ.

ಮೇ1 2024 ರಂದು ರಾತ್ರಿ 8ಗಂಟೆಯಿಂದ 48 ಗಂಟೆಗಳ ಕಾಲ ನಿಷೇಧ ವಿಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಏಪ್ರಿಲ್ 5 ರಂದು ಸಿರ್ಸಿಲ್ಲಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಸಿಆರ್ ಅವರು ಕಾಂಗ್ರೆಸ್ ನಾಯಕರನ್ನು ‘ನಾಯಿಯ ಮಕ್ಕಳು’ ಎಂದು ಉಲ್ಲೇಖಿಸಿದ್ದಲ್ಲದೆ ತೆಲಂಗಾಣ ಸರಕಾರದ ಬಗ್ಗೆ ಹಲವು ವಿವಾದಾತ್ಮಕ ಪದಗಳನ್ನು ಬಳಕೆ ಮಾಡಿದ್ದರು.

ಏಪ್ರಿಲ್ 5ರಂದು ಸಿರಿಸಿಲ್ಲಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಸಿಆರ್, ಕಾಂಗ್ರೆಸ್ ಶಾಸಕರನ್ನು ಅವಹೇಳನ ಮಾಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಉಪಾಧ್ಯಕ್ಷ ಜಿ ನಿರಂಜನ್ ಏಪ್ರಿಲ್ 6ರಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪರಿಶೀಲಿಸಿದ ಚುನಾವಣಾ ಆಯೋಗ, ಈ ಅವಹೇಳನಕಾರಿ ಟೀಕೆಗಳು ವಿರೋಧ ಪಕ್ಷದ ಪ್ರತಿಷ್ಠೆಯನ್ನು ಹಾನಿಗೊಳಿಸಬಹುದು ಮತ್ತು ಪ್ರಸ್ತುತ ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆಗೆ ಅಡ್ಡಿಯಾಗಬಹುದು ಎಂದು ಕಂಡುಕೊಂಡಿದೆ. ಟೀಕೆಗಳ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಕೆಸಿಆರ್‌ಗೆ ಇಸಿಐನಿಂದ ಏಪ್ರಿಲ್ 18, 2024ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಚುನಾವಣಾ ಪ್ರಚಾರದ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಹಲವು ಸೂಚನೆಗಳನ್ನು ನೀಡಿದ ನಂತರವೂ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದನ್ನು ಆಯೋಗ ಗಮನಿಸಿದೆ. ಕೆಸಿಆರ್ ಸರಿಯಾದ ಸಮಯಕ್ಕೆ ಸ್ಪಂದಿಸದಿದ್ದರೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಚುನಾವಣಾ ಪ್ರಾಧಿಕಾರ ಈ ಮೊದಲು ಹೇಳಿತ್ತು.

ಇದನ್ನು ಓದಿ: ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...