Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...