Homeಮುಖಪುಟಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಗುರುವಾರ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ.

ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಮೇ 7ರವರೆಗೆ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಜನರು ಕೇಜ್ರಿವಾಲ್‌ಗೆ ತಮ್ಮ ಸಂದೇಶಗಳನ್ನು ಬರೆಯಲು ಲಜಪತ್ ನಗರದಲ್ಲಿ ಎರಡು ಫಲಕಗಳನ್ನು ಅಳವಡಿಸಲಾಗಿದೆ.

ಎಪಿ ಜಂಗ್ಪುರ ಶಾಸಕ ಪ್ರವೀಣ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ದೆಹಲಿಯ ಜನರು ತಮ್ಮ ಮುಖ್ಯಮಂತ್ರಿಯನ್ನು ಪ್ರೀತಿಸುತ್ತಾರೆ ಎಂದು ಭಾರತೀಯ ಜನತಾ ಪಕ್ಷಕ್ಕೆ ತೋರಿಸಿ ಕೊಡಲು ನಗರದ ವಿವಿಧ ಭಾಗಗಳಲ್ಲಿ ಸಹಿ ಅಭಿಯಾನವನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ. ನಾವು ಈ ಅಭಿಯಾನವನ್ನು ಇಲ್ಲಿಂದ ಪ್ರಾರಂಭಿಸಿದ್ದೇವೆ ಮತ್ತು ಅದನ್ನು ವಿವಿಧ ಪ್ರದೇಶಗಳಿಗೆ ವಿಸ್ತರಿಸುತ್ತೇವೆ. ನಾವು ಈ ಸಹಿಗಳನ್ನು ಸಂಗ್ರಹಿಸಿ ಬಿಜೆಪಿಗೆ ಕಳುಹಿಸುತ್ತೇವೆ ಮತ್ತು ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದನ್ನು ತೋರಿಸುತ್ತೇವೆ  ಎಂದು ಹೇಳಿದ್ದಾರೆ.

ಈ ವೇಳೆ ಎಎಪಿ ಪಕ್ಷದ ಕಾರ್ಯಕರ್ತರು ‘ಜೈಲ್ ಕಾ ಜವಾಬ್ ವೋಟ್ ಸೇ ದೇಂಗೆ’ ಮತ್ತು ‘ಅರವಿಂದ್ ಕೇಜ್ರಿವಾಲ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ್ದಾರೆ. ಸಿಎಂ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟ ರೀತಿಗೆ ದೆಹಲಿಯ ಜನರು ತೀವ್ರ ಕೋಪಗೊಂಡಿದ್ದಾರೆ. ಜನರು ಸರ್ವಾಧಿಕಾರ ಮತ್ತು ಕೇಜ್ರಿವಾಲ್‌ ಬಂಧನದ ವಿರುದ್ಧ ತಮ್ಮ ಮತಗಳ ಮೂಲಕ ಪ್ರತಿಕ್ರಿಯಿಸುತ್ತಾರೆ ಎಂದು ಎಎಪಿ ಪೂರ್ವ ದೆಹಲಿ ಲೋಕಸಭಾ ಅಭ್ಯರ್ಥಿ ಕುಲದೀಪ್ ಕುಮಾರ್ ಹೇಳಿದ್ದಾರೆ.

ಈಗ ರದ್ದಾದ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...