Homeಮುಖಪುಟಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ 2019ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.  ರಾಜ್ಯಪಾಲರನ್ನು ತನ್ನ ಬಡ್ತಿ ಕುರಿತು ಚರ್ಚಿಸಲು ಭೇಟಿಯಾದಾಗ ಅವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಈ ಬಗ್ಗೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೊದಲು ರಾಜಭವನ ಪೊಲೀಸ್ ಔಟ್‌ಪೋಸ್ಟ್‌ಗೆ ದೂರು ನೀಡಿದ್ದಳು ಎಂದು ಮೂಲಗಳು ತಿಳಿಸಿವೆ. ದೂರನ್ನು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ. ಮಹಿಳೆಯ ಆರೋಪದ ಪ್ರಕಾರ, ರಾಜಭವನದಲ್ಲಿ ಆಕೆಗೆ ಕಿರುಕುಳ ನೀಡಲಾಗಿದೆ ಎಂದು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ಬೆನ್ನಲ್ಲಿ ಬಂಗಾಳದ ರಾಜ್ಯಪಾಲ ಆನಂದ ಬೋಸ್ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಸತ್ಯಕ್ಕೆ ಜಯ ಸಿಗುತ್ತದೆ. ಈ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಯಾರಾದರೂ ನನ್ನನ್ನು ನಿಂದಿಸುವ ಮೂಲಕ ಚುನಾವಣಾ ಲಾಭಗಳನ್ನು ಪಡೆಯಲು ಬಯಸಿದರೆ, ದೇವರು ಅವರನ್ನು ಆಶೀರ್ವದಿಸಲಿ. ಆದರೆ ಭ್ರಷ್ಟಾಚಾರ ಮತ್ತು ಬಂಗಾಳದಲ್ಲಿನ ಹಿಂಸಾಚಾರದ ವಿರುದ್ಧ ನನ್ನ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರ ನಿವಾಸದ ಮೂಲಗಳ ಪ್ರಕಾರ, ಮಹಿಳಾ ಉದ್ಯೋಗಿ, ರಾಜಭವನದ ಉದ್ಯೋಗಿಯೂ ಆಗಿರುವ ತನ್ನ ಗೆಳೆಯನ ಸಹಾಯದಿಂದ ಜನರು ಭಾರತದ ಚುನಾವಣಾ ಆಯೋಗಕ್ಕೆ ಕಳುಹಿಸುತ್ತಿದ್ದ ದೂರುಗಳನ್ನು ತಡೆಯುತ್ತಿದ್ದರು. ಈ ಬಗ್ಗೆ ಮಹಿಳೆಗೆ ತರಾಟೆಗೆ ತೆಗೆದುಕೊಂಡಾಗ ಅವರು ಹೊರಗೆ ಹೋಗಿ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ಹೇಳಿದೆ.

ಸಾಂವಿಧಾನಿಕ ತಜ್ಞರ ಪ್ರಕಾರ, ರಾಜ್ಯಪಾಲರು ಅಧಿಕಾರದಲ್ಲಿರುವಾಗ ಸಂವಿಧಾನದ 361ನೇ ವಿಧಿಯ ಅಡಿಯಲ್ಲಿ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳಿಂದ ವಿನಾಯಿತಿ ಪಡೆಯುತ್ತಾರೆ. ಈ ಘಟನೆಯು ಪ.ಬಂಗಾಳದಲ್ಲಿ ರಾಜಕೀಯ ಸಂಚಲನವನ್ನು ಉಂಟುಮಾಡಿದೆ.

ಆರೋಪಗಳನ್ನು ಹೊರಿಸಿದ ಮಹಿಳೆಯನ್ನು ಬೋಸ್ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಟಿಎಂಸಿಯ ಹಿರಿಯ ನಾಯಕರು ಇಂದು ಸಂಜೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ತಿಳಿಸಿದ್ದಾರೆ. ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ರಾಜ್ಯ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಹೇಳಿದ್ದಾರೆ.

ಬಂಗಾಳ ಗವರ್ನರ್ ಸಿವಿ ಆನಂದ ಬೋಸ್ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಎಷ್ಟು ಭಯಾನಕವಾಗಿದೆ. ರಾಜ್ಯಪಾಲರನ್ನು ಭೇಟಿಗೆ ಹೋದಾಗ ತನಗೆ ಕಿರುಕುಳ ನೀಡಲಾಯಿತು ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ ಹೇಳಿದ್ದಾರೆ .

ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿದ್ದು, ಇದು ಟಿಎಂಸಿಯ ಪಿತೂರಿಯೇ ಅಥವಾ ಇದರಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ನೋಡಬೇಕು. ಎಸ್‌ಎಸ್‌ಸಿ ಹಗರಣದ ಹಿನ್ನೆಲೆ ಟಿಎಂಸಿ ರಾಜಕೀಯವಾಗಿ ಮೂಲೆಗುಂಪಾಗಿದೆ ಮತ್ತು ಉಸಿರಾಟಕ್ಕಾಗಿ ಈಗ ಜಾಗವನ್ನು ಹುಡುಕುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಆದ್ದರಿಂದ ಇದು ಟಿಎಂಸಿಯ ಪಿತೂರಿಯೇ ಅಥವಾ ಅದರಲ್ಲಿ ಏನಾದರೂ ಸತ್ಯವಿದೆಯೇ ಎಂದು ನೋಡಬೇಕಾಗಿದೆ. ಇದು ಪಿತೂರಿ ಎಂದಾದರೆ ಅಪರಾಧಿಗಳಿಗೆ ಶಿಕ್ಷೆಯಾಗಬೇಕು, ನಿಜವೆಂದು ಕಂಡುಬಂದರೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...