Homeಮುಖಪುಟರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌ ಶರ್ಮಾ...

ರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

- Advertisement -
- Advertisement -

ಲೋಕಸಭಾ ಚುನಾವಣೆಗೆ ಉತ್ತರಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಮತ್ತು ಅಮೇಥಿ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಉತ್ತರಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ ಕ್ಷೇತ್ರದಿಂದ ಕಿಶೋರಿ ಲಾಲ್‌ ಶರ್ಮಾ ಅವರು ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.

ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿಯಿಂದ ತೆರವಾದ ರಾಯ್‌ ಬರೇಲಿ ಕ್ಷೇತ್ರದಿಂದ ಕೂಡ ಕಣಕ್ಕಿಳಿಯಲಿದ್ದಾರೆ. ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದ್ದ ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ರಾಯ್ಬರೇಲಿ ಮತ್ತು ವಯನಾಡ್ ಎರಡೂ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಗೆಲುವು  ಸಾಧಿಸಿದರೆ ಒಂದು ಸ್ಥಾನವನ್ನು ಮುಂದಕ್ಕೆ ತೆರವು ಮಾಡಬೇಕಾದೀತು. ರಾಯ್ಬರೇಲಿ ದಶಕಗಳ ಹಿಂದಿನ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದರೆ, ವಯನಾಡ್ ಕಾಂಗ್ರೆಸ್ ಭದ್ರಕೋಟೆಯಾಗಿದೆ. ವಾರಗಳ ಕಾಲ ಅಳೆದು ತೂಗಿ ಶುಕ್ರವಾರ ಕಾಂಗ್ರೆಸ್ ಈ ನಿರ್ಧಾರವನ್ನು ಪ್ರಕಟಿಸಿದೆ.

ಮೇ 20ರಂದು ಐದನೇ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ 2019ರಲ್ಲಿ ಅಮೇಥಿಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಣಕ್ಕಿಳಿಸಲಾಗಿದೆ. ಅಮೇಥಿ ಅಥವಾ ರಾಯ್‌ ಬರೇಲಿ ಯಾವುದಾದರು ಒಂಡು ಕ್ಷೇತ್ರದಿಂದ ರಾಬರ್ಟ್‌ ವಾದ್ರಾ ಅವರು ಕಣಕ್ಕಿಳಿಯಲಿದ್ದಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಇದಲ್ಲದೆ ರಾಯ್‌ ಬರೇಲಿಯಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆಯ ಬಗ್ಗೆ ಕೂಡ ಚರ್ಚೆ ನಡೆದಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮೂರನೇ ಹಂತದ ಮತದಾನ ಮೇ.7ರಂದು ನಡೆಯಲಿದೆ. ಲೋಕಸಭೆ ಚುನಾವಣೆಯ ಫಲಿತಾಂಶ ಜೂ.4ರಂದು ಪ್ರಕಟವಾಗಲಿದೆ.

ಇದನ್ನು ಓದಿ: ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...