Homeಮುಖಪುಟರೋಹಿತ್ ವೇಮುಲಾ 'ಪರಿಶಿಷ್ಟ ಜಾತಿ'ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ.

ಮೇ 3ರಂದು ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆ ನಡೆಯಲಿದೆ. ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಚ್ಚರಿ ಎಂದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳ ಬಳಿಕ ಈ ವರದಿ ಬಂದಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಮೇ 13ರಂದು ತೆಲಂಗಾಣ ಮತದಾನಕ್ಕೆ ಸಿದ್ದವಾಗುತ್ತಿದ್ದು, ಮತದಾನಕ್ಕೆ ಕೇವಲ 10 ದಿನಗಳ ಮೊದಲು ವರದಿಯನ್ನು ಬಿಡುಗಡೆ ಮಾಡಲಾಗಿದೆ. 2016ರಲ್ಲಿ ‘ಜಸ್ಟೀಸ್ ಫಾರ್ ವೇಮುಲಾ ಅಭಿಯಾನ’ಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೋಹಿತ್ ವೇಮುಲಾ ಆಕ್ಟ್ ಎಂಬ ಕಾನೂನನ್ನು ರಚಿಸುವುದಾಗಿ ಭರವಸೆ ನೀಡಿದ್ದರು. ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಅಲ್ಪಸಂಖ್ಯಾತರಿಗೆ “ಶಿಕ್ಷಣ ಮತ್ತು ಘನತೆಯ ಹಕ್ಕನ್ನು ಕಾಪಾಡಲು” ಜಾರಿಗೊಳಿಸುವುದಾಗಿ ಹೇಳಿದ್ದರು. ಇತ್ತೀಚಿನ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ಕಾಂಗ್ರೆಸ್ ಸೇರಲು ಆಹ್ವಾನಿಸಿದ್ದರು.

ತೆಲಂಗಾಣ ಕಾಂಗ್ರೆಸ್ ಅಥವಾ ಕೇಂದ್ರದ ನಾಯಕರು ಪ್ರಕರಣವನ್ನು ಮುಚ್ಚುವ ವರದಿಗೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಎಸ್‌ಎ) ಮುಖಂಡರು ಮತ್ತು ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ಸೇರಿದಂತೆ ಅವರ ಸಂಬಂಧಿಕರನ್ನು ಸಂಪರ್ಕಿಸಿದಾಗ ಶುಕ್ರವಾರ ನ್ಯಾಯಾಲಯದ ವಿಚಾರಣೆಯವರೆಗೂ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಪ್ರಾಥಮಿಕವಾಗಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು SC/ST ದೌರ್ಜನ್ಯ ತಡೆ (POA) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ, ಮುಚ್ಚುವಿಕೆಯ ವರದಿಯು ವೇಮುಲನ ಜಾತಿಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತದೆಯೇ ಹೊರತು ಆತ್ಮಹತ್ಯೆಗೆ ಕಾರಣಗಳಲ್ಲ, ಅವರ ಆತ್ಮಹತ್ಯೆಗೆ ಯಾರೂ ಕಾರಣರಾಗಿರುವ ಬಗ್ಗೆ ಪುರವೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯು ರೋಹಿತ್‌, ತಾನು ಪರಿಶಿಷ್ಟ ಜಾತಿಗೆ ಸೇರಿದವನಲ್ಲ ಎಂದು ತಿಳಿದಿದ್ದನು ಮತ್ತು ಅವನ ತಾಯಿ ಅವನಿಗೆ ಎಸ್‌ಸಿ ಪ್ರಮಾಣಪತ್ರವನ್ನು ಪಡೆದಿದ್ದರು ಎಂದು ಹೇಳುತ್ತದೆ. ಇದು ರೋಹಿತ್‌ನಲ್ಲಿ ನಿರಂತರವಾಗಿದ್ದ ಭಯದಲ್ಲಿ ಒಂದಾಗಿರಬಹುದು, ಏಕೆಂದರೆ ಇದು ಬಹಿರಂಗಗೊಂಡರೆ ಆತ ಕಾನೂನು ಕ್ರಮ ಎದುರಿಸುವ ಭೀತಿಯಲ್ಲಿದ್ದ ಎಂದು ಉಲ್ಲೇಖಿಸಲಾಗಿದೆ.

ರಾಧಿಕಾ ವೇಮುಲಾ ಅವರು ಎಸ್‌ಸಿ ಮಾಲಾ ಜಾತಿಗೆ ಸೇರಿದವರು ಮತ್ತು ತಮ್ಮ ಬಾಲ್ಯದಿಂದಲೂ ವಡ್ಡರ ಒಬಿಸಿ ಕುಟುಂಬದಲ್ಲಿ ಮನೆ ಸಹಾಯಕರಾಗಿ ಬೆಳೆದರು. ರೋಹಿತ್ ಅವರ ತಂದೆ ಮಣಿಕುಮಾರ್ ಕೂಡ ವಡ್ಡರ ಸಮುದಾಯಕ್ಕೆ ಸೇರಿದವರಾಗಿದ್ದರು.

ವರದಿಯ ಪ್ರಕಾರ, ರೋಹಿತ್ ಸ್ವಯಂ ಸಮಸ್ಯೆಗಳನ್ನು ಹೊಂದಿದ್ದ ಎಂದು ಹೇಳಲಾಗಿದೆ. ರೋಹಿತ್‌ ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಹೊರತಾಗಿಯೂ, ಅಧ್ಯಯನಕ್ಕಿಂತ ಕ್ಯಾಂಪಸ್‌ನಲ್ಲಿ ರಾಜಕೀಯ ವಿಷಯಗಳಲ್ಲಿ ಹೆಚ್ಚು ತೊಡಗಿಸಿಕೊಂಡಿರುವಂತೆ ತೋರುತ್ತಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯದ ನಿರ್ಧಾರದಿಂದ ಅವರು ಕೋಪಗೊಂಡಿದ್ದರೆ, ಅವರು ಖಂಡಿತವಾಗಿಯೂ ನಿರ್ದಿಷ್ಟ ಪದಗಳಲ್ಲಿ ಬರೆಯುತ್ತಿದ್ದರು. ಆದರೆ ಅವರು ಹಾಗೆ ಮಾಡಲಿಲ್ಲ. ರೋಹಿತ್ ಸಾವಿಗೆ ಆ ಸಮಯದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಚಾಲ್ತಿಯಲ್ಲಿರುವ ಸನ್ನಿವೇಶಗಳು ಕಾರಣವಲ್ಲ ಎಂದು ಎಂದು ವರದಿಯಲ್ಲಿ ಹೇಳಲಾಗಿದೆ.

ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ವಿಚಾರಣೆ ನಡೆಸುವಾಗ ತನಿಖಾ ಅಧಿಕಾರಿ (ಐಒ)  ಜಾತಿಯ ಬಗ್ಗೆ ನಿರ್ಧರಿಸಲು ಕುಟುಂಬದ ಸದಸ್ಯರ ಮಾದರಿಗಳೊಂದಿಗೆ ಡಿಎನ್‌ಎ ಪರೀಕ್ಷೆಗೆ ಒಳಗಾಗಲು ಸಿದ್ಧರಿದ್ದೀರಾ ಎಂದು ಕೇಳಿದಾಗ ಅವರು ‘ಮೌನವಾಗಿದ್ದರು’ ಎಂದು ಉಲ್ಲೇಖಿಸಲಾಗಿದೆ. ಇದಲ್ಲದೆ ರೋಹಿತ್ ಮತ್ತು ಇತರ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್(ASA) ನಾಯಕರನ್ನು ಹಾಸ್ಟೆಲ್‌ಗಳಿಂದ ಹೊರಹಾಕಿರುವ ನಿರ್ಧಾರ ವಿಶ್ವವಿದ್ಯಾಲಯದ ಶಿಸ್ತಿನ ನಿಯಮಗಳಲ್ಲಿ ಸೂಚಿಸಲಾದ ಶಿಕ್ಷೆಗಳಲ್ಲಿ ಒಂದಾಗಿದೆ ಎಂದು ವರದಿಯು ವಾದಿಸುತ್ತದೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...