Homeಮುಖಪುಟಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

ಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

- Advertisement -
- Advertisement -

ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಂತಹ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ ಎಂದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’ ಯುಕೆ ಕೋರ್ಟ್‌ನಲ್ಲಿ ಒಪ್ಪಿಕೊಂಡ ಬೆನ್ನಲ್ಲಿ ಕೋವಿಶೀಲ್ಡ್‌ ತೆಗೆದುಕೊಂಡ ಬಳಿಕ ಇಬ್ಬರು ಯುವತಿಯರು ಮೃತಪಟ್ಟಿರುವ ಬಗ್ಗೆ ಅವರ ಪೋಷಕರು ಆರೋಪಿಸಿದ್ದಾರೆ.

ಅಸ್ಟ್ರಾಜೆನೆಕಾ ಲಸಿಕೆಯನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ‘ಕೋವಿಶೀಲ್ಡ್’ ಎಂಬ ಹೆಸರಿನಲ್ಲಿ ತಯಾರಿಸಿದೆ ಮತ್ತು ಇಲ್ಲಿ ವ್ಯಾಪಕವಾಗಿ ಜನರಿಗೆ ಈ ಲಸಿಕೆಯನ್ನು ನೀಡಲಾಗಿದೆ.

ವೇಣುಗೋಪಾಲನ್‌ ಗೋವಿಂದನ್‌ 2021ರಲ್ಲಿ ತನ್ನ 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡಿದ್ದರು, ಹಲವು ಜೀವಗಳನ್ನು ಕಳೆದುಕೊಂಡ ನಂತರ ಕಂಪೆನಿ ಈಗ ವಾಸ್ತವ ಒಪ್ಪಿಕೊಂಡಿದೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ. 15 ಯುರೋಪಿಯನ್ ದೇಶಗಳು ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾಗುವ ಸಾವುಗಳ ಹಿನ್ನೆಲೆ ಅದರ ಬಳಕೆಯನ್ನು ನಿರ್ಬಂಧಿಸಿದ ನಂತರ ಸೀರಮ್ ಇನ್‌ಸ್ಟಿಟ್ಯೂಟ್ ಲಸಿಕೆ ಪೂರೈಕೆಯನ್ನು ನಿಲ್ಲಿಸಬೇಕಿತ್ತು. ನೊಂದ ಪೋಷಕರು ನ್ಯಾಯಕ್ಕಾಗಿ ವಿವಿಧ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದರೂ ವಿಚಾರಣೆ ನಡೆಯುತ್ತಿಲ್ಲ. ನ್ಯಾಯಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯದ ಹೆಸರಿನಲ್ಲಿ ನಡೆಸಲಾದ ಈ ದುಷ್ಕೃತ್ಯವು ಮರುಕಳಿಸುವುದನ್ನು ತಡೆಯಲು, ನಾವು ಎಲ್ಲಾ ಅಪರಾಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೇವೆ ಎಂದು ವೇಣುಗೋಪಾಲನ್‌ ಹೇಳಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಅಡಾರ್ ಪೂನಾವಾಲ್ಲಾ ಅವರು ಈ ಪಾಪಗಳಿಗೆ ಉತ್ತರಿಸಬೇಕಾಗುತ್ತದೆ. ಇದಲ್ಲದೆ ಲಸಿಕೆಗೆ ಅನುಮೋದಿಸಿದ್ದಕ್ಕಾಗಿ ಸರ್ಕಾರವನ್ನು ಅವರು ದೂಷಿಸಿದ್ದಾರೆ.

2021ರಲ್ಲಿ ರಿಥೈಕಾ (18)ಎಂಬ ಮಗಳನ್ನು ಕಳೆದುಕೊಂಡ ರಚನಾ ಗಂಗೂ ಮತ್ತು 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡ ಗೋವಿಂದನ್ ಅವರು ತಮ್ಮ  ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ಮಂಡಳಿಯನ್ನು ನೇಮಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಬಹಿರಂಗವಾಗಿತ್ತು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...