Homeಕರ್ನಾಟಕಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಹಾಸನದ ಪೆನ್‌ಡ್ರೈವ್‌ ವೈರಲ್‌ ಕೇಸ್‌ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು, ಇದೀಗ ಈ ಸುದ್ದಿ ಅಂತರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲೂ ವರದಿಯಾಗಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಓದುಗರನ್ನು, ವೀಕ್ಷಕರನ್ನು ಹೊಂದಿರುವ ಬಿಬಿಸಿ ಹಾಗೂ ಅಲ್‌ಜಝೀರಾ ಸುದ್ದಿ ಮಾಧ್ಯಮಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಜ್ವಲ್ ಪ್ರಕರಣದ ಬಗ್ಗೆ ವಿವರವಾದ ವರದಿ ಪ್ರಕಟಿಸಿವೆ.

ಅಲ್‌ಜಝೀರಾ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲಿ 33 ವರ್ಷದ ಪ್ರಜ್ವಲ್ ಚಿತ್ರೀಕರಿಸಿದ ಸುಮಾರು 3,000 ವೀಡಿಯೋಗಳ ಸೋರಿಕೆಯಾಗಿದೆ, ಬಹುಪಾಲು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳವನ್ನು ವಿಡಿಯೋ ತೋರಿಸುತ್ತಿದೆ, ಇದು ಚುನಾವಣೆಯ ಹೊಸ್ತಿಲಲ್ಲಿ ಎನ್‌ಡಿಎ ವಿರುದ್ಧ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿದೆ ಎಂದು ಉಲ್ಲೇಖಿಸಿದೆ.

ಪ್ರಜ್ವಲ್ ವಿರುದ್ಧದ ಆರೋಪಗಳು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಥವಾ ರಾಷ್ಟ್ರೀಯವಾಗಿ ಪ್ರಧಾನಿಗೆ ಹಾನಿಯನ್ನುಂಟುಮಾಡುತ್ತವೆಯೇ ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಪಕ್ಷ ಮತ್ತು ಮೋದಿಯ ಮತದಾರರು ಇದನ್ನು ನಿರ್ಲಕ್ಷಿಸುತ್ತಾರೆ ಎಂದು ಲೇಖಕ ಮತ್ತು ರಾಜಕೀಯ ವಿಶ್ಲೇಷಕ ರಶೀದ್ ಕಿದ್ವಾಯಿ ಹೇಳಿಕೆಯನ್ನು ಅಲ್ ಜಝೀರಾ ಉಲ್ಲೇಖಿಸಿದೆ. 2023ರಲ್ಲಿ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥರಾಗಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೇಶದ ಹಲವು ಪ್ರಮುಖ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರೂ,  ಸಿಂಗ್ ಜಾಮೀನಿನ ಮೇಲೆ ಈಗ ಸ್ವತಂತ್ರವಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಪ್ರಜ್ವಲ್ ರೇವಣ್ಣ: ಕರ್ನಾಟಕದ ಸಂಸದರ ‘ಲೈಂಗಿಕ ದೌರ್ಜನ್ಯ’ ವಿಡಿಯೋ ವಿರುದ್ಧ ಆಕ್ರೋಶ’ ಎಂಬ ಶೀರ್ಷಿಕೆಯಲ್ಲಿ ಲಂಡನ್‌ ಮೂಲದ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿ ವರದಿಯನ್ನು ಮಾಡಿದೆ. ವರದಿಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ, ಪ್ರಜ್ವಲ್‌ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯ ಜೊತೆ ನಿಂತಿರುವ ಪೋಟೋವನ್ನು ಕೂಡ ಪ್ರಕಟಿಸಿದೆ.

ಭಾರತೀಯ ಸಂಸದರೊಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತೋರಿಸುವ ಸಾವಿರಾರು ವಿಡಿಯೋಗಳು ಕರ್ನಾಟಕದಲ್ಲಿ ಹರಿದಾಡಿದೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಬಿಬಿಸಿ ವರದಿಯಲ್ಲಿ ಉಲ್ಲೇಖಿಸಿದೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾದ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಪಕ್ಷ ಮತ್ತು ನಾಯಕತ್ವಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.ಎಸ್‌ಐಟಿ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣಗೆ ತನಿಖೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿದ್ದಾರೆ. 24 ಗಂಟೆಗಳ ಒಳಗೆ ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.  ಇದರ ಬೆನಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೊಟೀಸ್‌ ಜಾರಿ ಮಾಡಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...