Homeಅಂತರಾಷ್ಟ್ರೀಯಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ 'ಆಯ್ಧ ಅಭ್ಯರ್ಥಿಗಳಿಗೆ' ರಹಸ್ಯವಾಗಿ ಹಣಕಾಸಿನ ನೆರವು: ವರದಿ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

- Advertisement -
- Advertisement -

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು ತಿಳಿಸಿದೆ.

ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು 2019 ಮತ್ತು 2021ರ ನಡುವೆ ಕೆನಡಾದಲ್ಲಿ ರಾಜಕೀಯ ಪ್ರಕ್ರಿಯೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಘಟನೆಗಳನ್ನು ವಿವರಿಸುತ್ತದೆ. ವರದಿಯಲ್ಲಿ ಕೆನಡಾದ ರಾಜಕಾರಣಿಗಳು ಭಾರತದಿಂದ “ಅಕ್ರಮ ಆರ್ಥಿಕ ಬೆಂಬಲ” ವನ್ನು ಗೌಪ್ಯವಾಗಿ ಸ್ವೀಕರಿಸಿರುವ ಬಗ್ಗೆ ಉಲ್ಲೇಖಿತವಾಗಿದೆ.

ಸೆಕ್ಯೂರಿಟಿ ಆ್ಯಂಡ್ ಇಂಟೆಲಿಜನ್ಸ್ ಥ್ರೆಟ್ಸ್ ಟು ಎಲೆಕ್ಷನ್ಸ್ ಟಾಸ್ಕ್‌ಫೋರ್ಸ್ (ಎಸ್‌ಐಟಿಇ) ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಹಸ್ತಕ್ಷೇಪ ಚಟುವಟಿಕೆಗಳನ್ನು ಗಮನಿಸಿದೆ. ಇವುಗಳಲ್ಲಿ ಚೀನಾ ಹೆಚ್ಚು ಪಾಲು  ಹೊಂದಿದ್ದು, ಸ್ವಲ್ಪಮಟ್ಟಿಗೆ ಭಾರತ ಮತ್ತು ಪಾಕಿಸ್ತಾನದ ಕೈವಾಡ ಕಂಡು ಬಂದಿದೆ ಮತ್ತು ಇದನ್ನು ಏಜೆಂಟ್‌ಗಳ ಮೂಲಕ ನಡೆಸಲಾಗಿತ್ತು ಎಂದು ತಿಳಿಸಿದೆ. ಆದರೆ ಈ ಹಸ್ತಕ್ಷೇಪಗಳು ಕ್ರಿಮಿನಲ್ ತನಿಖೆಯನ್ನು ಅಗತ್ಯವಾಗಿಸುವ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.

ತಿಂಗಳ ಕಾಲ ಈ ಕುರಿತು ತನಿಖೆ ನಡೆಸಲಾಗಿದ್ದು, 21 ದಿನಗಳ ವಿಚಾರಣೆಯ ಸಮಯದಲ್ಲಿ 60ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಳಿಕ ‘ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಸಾರ್ವಜನಿಕ ವಿಚಾರಣೆ’ ತನ್ನ ಆರಂಭಿಕ ವರದಿಯನ್ನು ಬಿಡುಗಡೆ ಮಾಡಿದೆ, ಇದು 2019 ಮತ್ತು 2021ರ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಕೇಂದ್ರೀಕರಿಸಿ ತನಿಖೆಯನ್ನು ನಡೆಸಿ ವರದಿಯನ್ನು ಸಿದ್ದಪಡಿಸಿದೆ.

ಸಂಶೋಧನೆಯ ಪ್ರಕಾರ, ಕೆನಡಾದಲ್ಲಿ ದಕ್ಷಿಣ ಏಶ್ಯನ್ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೆನಡಾದಲ್ಲಿ ಭಾರತವು ಹಿತಾಸಕ್ತಿಯನ್ನು ಹೊಂದಿದೆ. ಆ ದೇಶದಲ್ಲಿರುವ ಖಲಿಸ್ತಾನಿ ಬೆಂಬಲಿಗರ ವಿಷಯದಲ್ಲಿ ಕೆನಡಾದ ನಿಲುವನ್ನು ಭಾರತದ ಹಿತಾಸಕ್ತಿಗೆ ಅನುಗುಣವಾಗಿಸುವ ಉದ್ದೇಶವನ್ನು ಈ ಹಸ್ತಕ್ಷೇಪವು ಹೊಂದಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಏಷ್ಯಾದ ಸಮುದಾಯದ ಕೆಲವು ಸದಸ್ಯರನ್ನು ಭಾರತ ಸರ್ಕಾರವು ಭಾರತ ವಿರೋಧಿ ಭಾವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ನೋಡುತ್ತದೆ. ಖಾಲಿಸ್ತಾನಿ ಪ್ರತ್ಯೇಕತಾವಾದದೊಂದಿಗೆ ಸೇರಿದವರನ್ನು ಭಾರತಕ್ಕೆ ಬೆದರಿಕೆ ಎಂದು ಭಾರತವು ನೋಡುತ್ತದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಭಾರತವು ತನ್ನ ವಿದೇಶಿ ಹಸ್ತಕ್ಷೇಪದಿಂದ ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರನ್ನು ಗುರಿಯಾಗಿಸುವ ಜೊತೆಗೆ ಇಂಡೋ-ಕೆನಡಿಯನ್ನರಲ್ಲದವರನ್ನು ಕೂಡ ಗುರಿಯಾಗಿಸುತ್ತದೆ. ಈ ಕ್ರಮಗಳು ಕೆನಡಾದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ನೇರವಾಗಿ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿರದಿದ್ದರೂ, ಅವು ಆತಂಕಕಾರಿಯಾಗಿವೆ ಎಂದು ವರದಿ ಹೇಳಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಭಾರತೀಯರಾದ ಕರಣ್‌ಪ್ರೀತ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್ ಬ್ರಾರ್ ಅವರನ್ನು ಆಲ್ಬರ್ಟಾದ ಎಡ್ಮಂಟನ್‌ನಿಂದ ಬಂಧಿಸಿದ್ದಾರೆ. ಇದರ ಬೆನ್ನಲ್ಲಿ ಈ ಹಸ್ತಕ್ಷೇಪದ ವರದಿ ಹೊರ ಬಿದ್ದಿದೆ.

ಇದನ್ನು ಓದಿ: ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...