Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...