Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...