Homeಮುಖಪುಟಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

ಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪದಲ್ಲಿ ನ್ಯೂಸ್‌ಕ್ಲಿಕ್ ಮಾನವ ಸಂಪನ್ಮೂಲ (ಹೆಚ್‌ಆರ್‌) ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಕ್ಷಮಾದಾನ ಪಡೆದಿದ್ದು, ಹಾಗಾಗಿ, ಬಿಡುಗಡೆ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

“ಚಕ್ರವರ್ತಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ‘ಅಭ್ಯಂತರವಿಲ್ಲ’ ಎಂದು ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ತಿಳಿಸಿದೆ. ಚಕ್ರವರ್ತಿ ಕೂಡ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್ 164 ಅಡಿಯಲ್ಲಿ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಪೀಠವು ಆದೇಶದಲ್ಲಿ ಹೇಳಿದೆ.

“ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿ ಮತ್ತು ಪ್ರಕರಣದ ಸಂಗತಿಗಳು ಹಾಗೂ ಸಂದರ್ಭಗಳ ಜೊತೆಗೆ ಪ್ರಾಸಿಕ್ಯೂಷನ್ ನೀಡಿದ ನಿರಾಕ್ಷೇಪಣೆಯನ್ನು ಹೈಕೋರ್ಟ್‌ ಪರಿಗಣಿಸಿದೆ. 25,000 ರೂಪಾಯಿಗಳ ‘ವೈಯಕ್ತಿಕ ಬಾಂಡ್’ ಒದಗಿಸಿದ ಬಳಿಕ ಚಕ್ರವರ್ತಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಬಹುದು” ಎಂದು ಹೈಕೋರ್ಟ್‌ ಹೇಳಿದೆ.

ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿಯನ್ನು ಗಮನಿಸಿದ ನ್ಯಾಯಮೂರ್ತಿ ಶರ್ಮಾ, “ಚಕ್ರವರ್ತಿ ಪೋಲಿಯೊ ಸಮಸ್ಯೆಗೆ ತುತ್ತಾಗಿದ್ದಾರೆ. ಅವರಿಗೆ ಪಾರ್ಶ್ವವಾಯು ಸಮಸ್ಯೆಯಾಗಿದ್ದು, 59% ಶಾಶ್ವತ ದೈಹಿಕ ಅಸಾಮರ್ಥ್ಯದಿಂದ ಬಳಲುತ್ತಿದ್ದಾರೆ. ಗಾಲಿಕುರ್ಚಿಯ ಮೇಲೆ ಅವಲಂಬಿತರಾಗಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯ ವಿಚಾರದಲ್ಲಿ ಪ್ರಾಸಿಕ್ಯೂಷನ್‌ನಿಂದ ತಕಾರಾರು ಬಂದಿಲ್ಲ. ಅರ್ಜಿದಾರರ ವೈದ್ಯಕೀಯ ಸ್ಥಿತಿಯು ವಿಶೇಷ ಪರಿಗಣನೆಗೆ ಅರ್ಹವಾಗಿದೆ. ಒಬ್ಬ ವ್ಯಕ್ತಿಯ ದೈಹಿಕ ಅಂಗವೈಕಲ್ಯವು ಆತನ ಯೋಗಕ್ಷೇಮ ಮತ್ತು ದೈನಂದಿನ ಕಾರ್ಯನಿರ್ವಹಣೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಂದರ್ಭಗಳಲ್ಲಿ ನ್ಯಾಯಾಲಯವು ನ್ಯಾಯಯುತವಾಗಿ ತನ್ನ ಜವಾಬ್ದಾರಿ ನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಚಕ್ರವರ್ತಿ ಅವರನ್ನು 2023ರ ಅಕ್ಟೋಬರ್ 3ರಂದು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿದ್ದರು. ಅವರಿಗೆ ಜನವರಿ 6ರಂದು ಕ್ಷಮಾದಾನ ನೀಡಿದ್ದ ಸೆಷನ್ಸ್‌ ನ್ಯಾಯಲಯ, “ಚಕ್ರವರ್ತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನೈಜ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ನೀಡಿದ ಹೇಳಿಕೆಯು ಉತ್ತಮ ಸಾಕ್ಷ್ಯವಾಗಿದೆ” ಎಂದು ಹೇಳಿತ್ತು.

ಚಕ್ರವರ್ತಿ ಅವರಿಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿತ್ತು. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭಗಳ ಸಂಪೂರ್ಣ ಮತ್ತು ನಿಜವಾದ ಮಾಹಿತಿಯನ್ನು ಬಹಿರಂಗಪಡಿಸಬೇಕು. ಉದ್ದೇಶಪೂರ್ವಕವಾಗಿ ಯಾವುದೇ ವಿಚಾರಗಳನ್ನು ಮರೆಮಾಚಬಾರದು. ಉದ್ದೇಶಪೂರ್ವಕವಾಗಿ ಸುಳ್ಳು ಪುರಾವೆಗಳನ್ನು ನೀಡಬಾರದು ಎಂದು ಹೇಳಿತ್ತು.

ಇದೇ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಕೂಡ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...