Homeಮುಖಪುಟಜನರನ್ನು ತಪ್ಪುದಾರಿಗೆಳೆಯಲು ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಜನರನ್ನು ತಪ್ಪುದಾರಿಗೆಳೆಯಲು ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜನರನ್ನು ತಪ್ಪುದಾರಿಗೆಳೆಯಲು ಮತ್ತು ಪ್ರಚೋದಿಸಲು ಸುಳ್ಳುಗಳನ್ನು ಹರಡುತ್ತಿದ್ದಾರೆ, ಅವರು ಸುಳ್ಳುಗಾರರ ನಾಯಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಹೈದರಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ಸಣ್ಣತನದ ಮತ್ತು ಬಾಲಿಶ’ ಮಾತುಗಳನ್ನಾಡುವುದು ಪ್ರಧಾನಿ ಮೋದಿಗೆ ಯೋಗ್ಯವಲ್ಲ, ಪ್ರಧಾನಿ ಮೋದಿ ಸುಳ್ಳುಗಾರರ ನಾಯಕ,  ಅವರು ಚುನಾವಣಾ ಪ್ರಣಾಳಿಕೆಯ ಬಗ್ಗೆ ಏಕೆ ಮಾತನಾಡುತ್ತಿಲ್ಲ ಮತ್ತು ಕಳೆದ 10 ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡಿದೆ ಎಂಬುವುದನ್ನು ಯಾಕೆ ಹೇಳುತ್ತಿಲ್ಲ? ಅವರು ತಮ್ಮ ಕೆಲಸದ ಮೇಲೆ ಮತಗಳನ್ನು ಕೇಳುವುದಿಲ್ಲ. ಅವರು ಕೇವಲ ಕಾಂಗ್ರೆಸ್‌ನ್ನು ನಿಂದಿಸುತ್ತಾರೆ ಮತ್ತು ಕಾಂಗ್ರೆಸ್‌ನ ಹೇಳಿಕೆಗಳನ್ನು ತಿರುಚುತ್ತಾರೆ ಎಂದು ಹೇಳಿದ್ದಾರೆ.

2-3 ವರ್ಷಗಳ ಹಿಂದೆ ಬಿಜೆಪಿ ನಾಯಕರು ಕಾಂಗ್ರೆಸ್‌ ನಮಗೆ ಪ್ರತಿಸ್ಪರ್ಧಿ ಅಲ್ಲ ಎಂದು ಹೇಳುತ್ತಿದ್ದರು, ಹಾಗಾದರೆ ನೀವು ಕಾಂಗ್ರೆಸ್‌ನ್ನು ಏಕೆ ನಿಂದಿಸುತ್ತಿದ್ದೀರಿ? ಇದರ ಅರ್ಥ ನೀವು ಭಯಪಡುತ್ತೀರಿ ಎಂದಾಗಿದೆ. ಭಯಪಡುವವರು ಮಾತ್ರ ಈ ರೀತಿಯ ಭಾಷೆಯನ್ನು ಬಳಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೋದಿ ‘ಎಂ’ ಪದವನ್ನು ಇಷ್ಟಪಡುತ್ತಾರೆ ಎಂದು ತೋರುತ್ತದೆ, ಯಾಕೆಂದರೆ ಅವರು ಯಾವಾಗಲೂ ಮೊಘಲ್, ಮಟನ್, ಮುಸ್ಲಿಂ ಲೀಗ್ ಮತ್ತು ಮಂಗಳಸೂತ್ರದ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರ ಕಿತ್ತುಕೊಳ್ಳುತ್ತೇವೆ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಖರ್ಗೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ವಿಭಜಿಸಲು ಇಂತಹ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಮಂಗಳಸೂತ್ರವನ್ನು ಕಸಿದುಕೊಳ್ಳಲು ಯಾರಿಗೂ ಧೈರ್ಯವಿಲ್ಲ, ಮೋದಿಯಂತಹ ವ್ಯಕ್ತಿಯಿಂದ ಮಾತ್ರ ಇದು ಸಾಧ್ಯ ಎಂದು ಹೇಳಿದ್ದಾರೆ.

ಟೆಂಪೋಗಳಲ್ಲಿ ಹಣ ಸಾಗಿಸುತ್ತಿರುವ ಕಾರಣ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ‘ಅದಾನಿ ಮತ್ತು ಅಂಬಾನಿ’ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದೆ ಎಂಬ ಪ್ರಧಾನಿಯವರ ಇತ್ತೀಚಿನ ಟೀಕೆಗಳ ಬಗ್ಗೆ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಇಡಿ, ಸಿಬಿಐ ಮತ್ತು ಐಟಿಯನ್ನು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಳ್ಳಲು ಏಕೆ ಬಳಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ ಆರು ಭರವಸೆಗಳಲ್ಲಿ ಐದನ್ನು ಈಡೇರಿಸಿದೆ ಎಂದು ಹೇಳಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಒಂದನ್ನು ಜಾರಿಗೊಳಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ, ಹಿಮಾಚಲ ಪ್ರದೇಶ ಅಥವಾ ತೆಲಂಗಾಣದಲ್ಲಿ ನೀಡಿದ ಭರವಸೆಗಳನ್ನು ನಾವು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಯುವಕರಿಗಾಗಿ ಪೆಹಲಿ ನೌಕ್ರಿ ಪಕ್ಕಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಮತ್ತು ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪುನರುಚ್ಚರಿಸಿದ ಮಲ್ಲಿಕಾರ್ಜುನ ಖರ್ಗೆ ಮಹಾಲಕ್ಷ್ಮಿ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಅಸಂಘಟಿತ ವಲಯ ಮತ್ತು ಗಿಗ್ ಕಾರ್ಮಿಕರಿಗೆ ಸಂಬಂಧಿಸಿದ ಕಾನೂನುಗಳನ್ನು ಸಹ ಸರ್ಕಾರ ಬಲಪಡಿಸುತ್ತದೆ, ಎಂಎಸ್‌ಪಿಗೆ ಕಾನೂನು ಖಾತರಿಯೊಂದಿಗೆ ರೈತರಿಗೆ ನ್ಯಾಯ ಒದಗಿಸಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗಗಳು ಮತ್ತು ವ್ಯಾಪಾರ ಅವಕಾಶಗಳಂತಹ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಸಮುದಾಯಗಳ ಸ್ಥಿತಿಗತಿಗಳ ಬಗ್ಗೆ ಸತ್ಯವನ್ನು ತಿಳಿಯಲು ಜಾತಿ ಗಣತಿಯನ್ನು ಮಾಡಲಾಗುತ್ತದೆ. ಎಲ್ಲರಿಗೂ ನ್ಯಾಯ ಒದಗಿಸಲು ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಖರ್ಗೆ ಹೇಳಿದ್ದಾರೆ.

ಹರಿಯಾಣದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಳಿದಾಗ, ಶಾಸಕರು ಸರ್ಕಾರ ರಚಿಸಬೇಕೇ ಅಥವಾ ರಾಜ್ಯಪಾಲರ ಆಳ್ವಿಕೆಗೆ ಒತ್ತಾಯಿಸಬೇಕೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ  ಹೈಕಮಾಂಡ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಸದೃಢವಾಗಿದ್ದು, ಅವಧಿ ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ಜಿ ದೇವರಾಜೇಗೌಡ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರಿನ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...