Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ...

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

- Advertisement -
- Advertisement -

ಮುಸ್ಲಿಂ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನ ಧ್ವಜವನ್ನು ಬಳಸಿದ್ದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಅಸೋಸಿಯೇಷನ್‌ ಫಾರ್‌‌ ಪ್ರೊಟೆಕ್ಷನ್ ಸಿವಿಲ್‌ ರೈಟ್ಸ್ ಸಂಘಟನೆಯ ನಿಯೋಗವು (ಎಪಿಸಿಆರ್) ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಈ ಬಗ್ಗೆ ಮಾತನಾಡಿದ ಎಪಿಸಿಆರ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಿಯಾಝ್, ಸುವರ್ಣ ನ್ಯೂಸ್ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮವೊಂದರ ಪ್ರಸಾರದ ಸಮಯದಲ್ಲಿ ಅಜಿತ್ ಹನಮಕ್ಕನವರ್ ಹಿಂದೂ ಜನಸಂಖ್ಯೆಯನ್ನು ಪ್ರತಿನಿಧಿಸಲು ಭಾರತೀಯ ಧ್ವಜವನ್ನು ಮತ್ತು ಮುಸ್ಲಿಮರನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿ ಕೋಮು ದ್ವೇಷ ಹರಡಲು ಯತ್ನಿಸಿದ್ದಾರೆ. ರಾಷ್ಟ್ರೀಯ ಧ್ವಜಗಳನ್ನು ಧಾರ್ಮಿಕ ಸಮುದಾಯಗಳಿಗೆ ರೂಪಕಗಳಾಗಿ ಬಳಸುವುದು ತಪ್ಪುದಾರಿಗೆಳೆಯುವಂತಿದೆ, ಆದ್ದರಿಂದ ಸುವರ್ಣ ನ್ಯೂಸ್‌ ಮತ್ತು ನಿರೂಪಕ ಅಜಿತ್ ಹನಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೈರ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ‘ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಮತ್ತು ಅದರ ಆ್ಯಂಕರ್ ಅಜಿತ್ ಹನುಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆ್ಯಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದು ಝಬೈರ್ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು. ಇದರ ಬೆನ್ನಲ್ಲಿ ಸುವರ್ಣ ನ್ಯೂಸ್ ಮತ್ತು ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನು ಓದಿ: ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಪತ್ರಿಕಾ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ‘ವೋಟ್ ಚೋರಿ’ ರ‍್ಯಾಲಿಗೆ ಗೈರು: ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ 60 ಪ್ರಮುಖ ಪದಾಧಿಕಾರಿಗಳು ಅಮಾನತು!

ಅಖಿಲ ಭಾರತ ಯುವ ಕಾಂಗ್ರೆಸ್ ನಾಯಕತ್ವವು ಕಠಿಣ ನಿರ್ಧಾರ ತಳೆದಿದ್ದು, ರಾಷ್ಟ್ರೀಯ ನಾಯಕತ್ವ ನೀಡಿದ್ದ ಕರೆಗೆ ಗೈರುಹಾಜರಾದ ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ ಬರೋಬ್ಬರಿ 60 ಪ್ರಮುಖ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ...

ಮೂರು ಕೋಟಿ ಒಳನುಸುಳುಕೋರರು ಎಲ್ಲಿಂದ ಬಂದರು?: ‘ವೋಟ್ ಚೋರಿ’ ಬಗ್ಗೆ ಮುಕ್ತ ಚರ್ಚೆಗೆ ಬನ್ನಿ: ಮೋದಿ-ಅಮಿತ್ ಶಾಗೆ ಖರ್ಗೆ ಸವಾಲು

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನದ (ವೋಟ್ ಚೋರಿ) ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುವ ಧೈರ್ಯ ತೋರಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿರುವ ಮುಕ್ತ ಚರ್ಚೆಯ ಸವಾಲನ್ನು ಸ್ವೀಕರಿಸಿ ಎಂದು ಕಾಂಗ್ರೆಸ್ ರಾಷ್ಟ್ರೀಯ...

ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದುವುದನ್ನು ದಂಡನೀಯವಾಗಿಸುವ ಕಾನೂನುಗಳು ಪ್ರಸ್ತುತತೆ ಕಳೆದುಕೊಂಡಿವೆ : ಸುಪ್ರೀಂ ಕೋರ್ಟ್

ಭಾರತದ ಕುಸಿಯುತ್ತಿರುವ ಫಲವತ್ತತೆ ದರವನ್ನು (fertility rate) ಗಮನದಲ್ಲಿಟ್ಟುಕೊಂಡು, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವ ಕಾನೂನುಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ ಎಂದು ಸುಪ್ರೀಂ ಕೋರ್ಟ್...

ಅಮೆರಿಕ ಮಧ್ಯಂತರ ಚುನಾವಣೆ : ಜಗತ್ತಿನ ಗಮನ ಸೆಳೆದ ಅಬ್ದುಲ್ ಸಯೀದ್, ಡೆಬ್ ಹಾಲೆಂಡ್ ಮತ್ತು ಇಲ್ಹಾನ್ ಉಮರ್ ಆಯ್ಕೆ!

ಅಮೆರಿಕದ ರಾಜಕೀಯ ಅಖಡಾದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ಮಧ್ಯಂತರ ಚುನಾವಣೆಯ ಪ್ರಾಥಮಿಕ ಫಲಿತಾಂಶಗಳು ಹೊರಬಿದ್ದಿದ್ದು, ಡೆಮಾಕ್ರಟಿಕ್ ಪಕ್ಷದ ಸುಧಾರಣಾವಾದಿ ನಾಯಕರ ಜಯಯಾನ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದೆ. ಅಸೋಸಿಯೇಟೆಡ್...

ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಅರ್ಜಿದಾರರು, ಡಿಲೀಟ್ ಆದ ಮತದಾರರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಇತ್ತೀಚೆಗೆ ನೀಡಿರುವ...

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...