ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗುತ್ತಿದೆ. ಇದರ ಜೊತೆಗೆ ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಡಿಶಾದ 28 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಮತದಾನವು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. 96 ಕ್ಷೇತ್ರಗಳಲ್ಲಿ ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಂಧ್ರಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11 ಮಧ್ಯಪ್ರದೇಶ ಹಾಗೂ ಪಶ್ಚಿಮಬಂಗಾಳದ ತಲಾ 4 ಕ್ಷೇತ್ರಗಳು, ಬಿಹಾರದ 5 ಸ್ಥಾನಗಳು, ಜಾರ್ಖಂಡ್ ಹಾಗೂ ಒಡಿಶಾದ ಮತ್ತು ಜಮ್ಮುಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.
3 ಹಂತಗಳಲ್ಲಿ ಈವರೆಗೆ ಒಟ್ಟು 285 ಕ್ಷೇತ್ರಳಿಗೆ ಮತದಾನವಾಗಿದೆ. ಚುನಾವಣಾ ಆಯೋಗವು ಶನಿವಾರ ಅಧಿಕೃತ ಅಧಿಸೂಚನೆಯೊಂದನ್ನು ಹೊರಡಿಸಿ ಲೋಕಸಭಾ ಚುನಾವಣೆ 3ನೇ ಹಂತದಲ್ಲಿ 65.68 ಶೇ. ಮತದಾನವಾಗಿರುವುದಾಗಿ ಹೇಳಿದೆ.
ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳ ಜೊತೆಗೆ 175 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ತೆಲಂಗಾಣದ ಎಲ್ಲಾ 17 ಲೋಕಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಅಸಾದುದ್ದೀನ್ ಉವೈಸಿ (ಎಐಎಂಐಎಂ)- ಹೈದರಾಬಾದ್, ಅಖಿಲೇಶ್ ಯಾದವ್ (ಎಸ್ಪಿ) -ಕನೌಜ್,ಮಹುವಾ ಮೊಯಿತ್ರಾ(ಟಿಎಂಸಿ)- ಕೃಷ್ಣನಗರ, ವೈ.ಎಸ್.ಶರ್ಮಿಳಾ ರೆಡ್ಡಿ (ಕಾಂಗ್ರೆಸ್) -ಕಡಪ, ಅಧೀರ್ ರಂಜನ್ ಚೌಧರಿ (ಕಾಂಗ್ರೆಸ್), ಯೂಸುಫ್ ಪಠಾಣ್ (ಟಿಎಂಸಿ) – ಬೆಹ್ರಾಂಪುರ, ಶತ್ರುಘ್ನಸಿನ್ಹಾ (ಟಿಎಂಸಿ)-ಅಸಾನ್‌ಸೊಲ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.
4ನೇ ಹಂತದ ಮತದಾನ ಮುಗಿಯುತ್ತಿದ್ದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 379 ಸ್ಥಾನಗಳಿಗೆ ಮತದಾನವು ಪೂರ್ಣಗೊಳ್ಳುತ್ತದೆ. ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ.
4ನೇ ಹಂತದ ಮತದಾನದಲ್ಲಿ 17.7ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 19 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನೇಮಿಸಲಾಗಿದೆ. 1.92 ಲಕ್ಷ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ.
ನಟ ಅಲ್ಲು ಅರ್ಜುನ್ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅಲ್ಲು ಅರ್ಜುನ್, ಎಲ್ಲರೂ ಮತ ಚಲಾಯಿಸಿ. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮುಂದಿನ ಐದು ವರ್ಷಕ್ಕೆ ಇದು ಪ್ರಮುಖ ದಿನವಾಗಿದೆ ಎಂದು ಹೇಳಿದ್ದಾರೆ.
ಹೈದರಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ಬಿಜೆಪಿಯ ಸಿದ್ಧಾಂತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಧಾನಿ ಮೋದಿ ನೀಡಿರುವ ಹೇಳಿಕೆಗಳನ್ನು ಜನರು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
#WATCH | Telangana: Actor Jr NTR, along with his family, shows the indelible ink mark on his finger after voting at a polling booth in Jubilee Hills, Hyderabad.#LokSabhaElections2024 pic.twitter.com/G7c4HpWhnG
— ANI (@ANI) May 13, 2024
#WATCH | Telangana: Actor Allu Arjun casts his vote at a polling booth in Jubilee Hills, Hyderabad.
#LokSabhaElections2024 pic.twitter.com/M0yhR7XLeP
— ANI (@ANI) May 13, 2024
ಇದನ್ನು ಓದಿ: “ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್ ಕೇಜ್ರಿವಾಲ್


