Homeಮುಖಪುಟಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

ಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

- Advertisement -
- Advertisement -

ಭಾರತೀಯ ರಕ್ಷಣಾ ಸಿಬ್ಬಂದಿಗಳು ದ್ವೀಪ ರಾಷ್ಟ್ರವನ್ನು ತೊರೆದ ಕೆಲವು ದಿನಗಳ ನಂತರ, ಭಾರತವು ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆ ಇದೆ ಎಂದು ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಒಪ್ಪಿಕೊಂಡಿದ್ದಾರೆ.

ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು ನಮ್ಮ ಸಿಬ್ಬಂದಿ ಪರವಾನಗಿ ಪಡೆದಿಲ್ಲ” ಎಂದು ಹೇಳಿದರು.

ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು, ಅನಿರ್ದಿಷ್ಟ ಕಾರಣಗಳಿಂದ ತಮ್ಮ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೌಮೂನ್ ವಿವರಿಸಿದರು.

ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದ ಭಾಗವಾಗಿ ಫೆಬ್ರವರಿಯಲ್ಲಿ ನಿಗದಿಪಡಿಸಲಾದ ಗಡುವನ್ನು ಅನುಸರಿಸಿ ಭಾರತೀಯ ಸಿಬ್ಬಂದಿ ಶುಕ್ರವಾರ ಮಾಲ್ಡೀವ್ಸ್‌ನಿಂದ ಹೊರಟರು. ಈ ಒಪ್ಪಂದವು ನವೆಂಬರ್ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸ್ವಲ್ಪ ಸಮಯದ ನಂತರ ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮಾಲ್ಡೀವಿಯನ್ ಅಧ್ಯಕ್ಷ ಮೊಹಮದ್ ಮುಯಿಜ್ಜು ಮಾಡಿದ ಬೇಡಿಕೆಯನ್ನು ಅನುಸರಿಸಿತು.

ಫೆಬ್ರವರಿ ತಿಂಗಳು ನವದೆಹಲಿಯಲ್ಲಿ ನಡೆದ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

ಭಾರತೀಯ ಸೇನಾ ಸಿಬ್ಬಂದಿಯನ್ನು ಬದಲಿಸುವ ಮಾಲ್ಡೀವ್ಸ್‌ ಕ್ರಮವು ತನ್ನ ದಕ್ಷಿಣದ ಆಯಕಟ್ಟಿನ ಸ್ಥಳದಲ್ಲಿ ಚೀನಾದ ಪ್ರಭಾವವನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಮುಯಿಜ್ಜು ಅಧಿಕಾರಕ್ಕೆ ಬಂದ ನಂತರ, ಅಲ್ಲಿನ ಸರ್ಕಾರವು ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಚೀನಾದೊಂದಿಗೆ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದೆ ಮತ್ತು ಹಲವಾರು ಯೋಜನೆಗಳಲ್ಲಿ ಭಾರತವನ್ನು ನಿರ್ಲಕ್ಷ್ಯ ಮಾಡುತ್ತಿದೆ.

ಮಾಲ್ಡೀವ್ಸ್ ಮಾರ್ಚ್‌ನಲ್ಲಿ ಚೀನಾದೊಂದಿಗೆ ಮಿಲಿಟರಿ ನೆರವು ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತದ ನೆರೆಯಲ್ಲಿರುವ ತನ್ನ ಬಂದರಿನಲ್ಲಿ ಚೀನೀ ಸಂಶೋಧನಾ ನೌಕೆಯನ್ನು ಡಾಕ್ ಮಾಡಲು ಸಹ ಅನುಮತಿಸಿದೆ.

ಹಿಂದಿನ ಆಡಳಿತದ ಅವಧಿಯಲ್ಲಿ ಮಾಲ್ಡೀವ್ಸ್‌ನ ರಾಜಧಾನಿಯಾದ ಮಾಲೆಯೊಂದಿಗೆ ನವದೆಹಲಿಯ ಸಂಬಂಧಗಳು ಗಮನಾರ್ಹವಾಗಿ ಬೆಳೆದರೆ, ಚೀನಾ ಪರವಾದ ಮುಯಿಜ್ಜು “ಇಂಡಿಯಾ ಔಟ್” ವೇದಿಕೆಯಲ್ಲಿ ಪ್ರಚಾರ ಮಾಡಿದರು. ದೇಶದಲ್ಲಿ ಭಾರತೀಯ ಮಿಲಿಟರಿ ಉಪಸ್ಥಿತಿಯು ಮಾಲ್ಡೀವ್ಸ್ ಸಾರ್ವಭೌಮತ್ವವನ್ನು ರಾಜಿ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ; ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...