Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

- Advertisement -
- Advertisement -

ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಗೃಹ ಬಂಧನದ ಭದ್ರತೆ ವೆಚ್ಚ 20 ಲಕ್ಷ ರೂಪಾಯಿ ಪಾವತಿಸುವಂತೆ ನವ್ಲಾಖಾ ಅವರಿಗೆ ನಿರ್ದೇಶನ ನೀಡಿದೆ.

ನವ್ಲಾಖಾ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ಎಸ್‌.ವಿ.ಎನ್ ಭಟ್ಟಿ ಅವರ ಪೀಠ ವಿಚಾರಣೆ ನಡೆಸುತ್ತಿದೆ.

ಜನವರಿ 1, 2018 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿದ ಆರೋಪದ ಮೇಲೆ ಪತ್ರಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ನವ್ಲಾಖಾ ಅವರನ್ನು ಏಪ್ರಿಲ್ 14, 2020 ರಂದು ಎನ್‌ಐಎ ಬಂಧಿಸಿತ್ತು. ಅನಾರೋಗ್ಯದ ಕಾರಣ, ನವೆಂಬರ್ 2022ರಲ್ಲಿ ಸುಪ್ರೀಂ ಕೋರ್ಟ್ ನವ್ಲಾಖಾ ಅವರ ಗೃಹ ಬಂಧನಕ್ಕೆ ಆದೇಶಿಸಿತ್ತು.

ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ನವ್ಲಾಖಾ ಅವರು ಭಯೋತ್ಪಾದಕ ಕೃತ್ಯ ಎಸಗಿದ್ದಾರೆ ಎಂದು ದೃಢೀಕರಿಸಲು ಯಾವುದೇ ಸಾಕ್ಷ್ಯ ಇಲ್ಲ ಎಂದು ಗಮನಿಸಿದ್ದ ನ್ಯಾಯಮೂರ್ತಿಗಳಾದ ಎ.ಎಸ್ ಗಡ್ಕರಿ ಮತ್ತು ಶಿವಕುಮಾರ್ ಅವರ ಬಾಂಬೆ ಹೈಕೋರ್ಟ್ ಪೀಠ ಕಳೆದ ಡಿಸೆಂಬರ್‌ನಲ್ಲಿ ನವ್ಲಾಖಾ ಅವರಿಗೆ ಜಾಮೀನು ನೀಡಿತ್ತು. ಆದರೆ, ಎನ್‌ಐಎ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಲಾವಕಾಶ ಕೋರಿದ ಹಿನ್ನೆಲೆ, ಹೈಕೋರ್ಟ್ ತನ್ನ ಆದೇಶವನ್ನು 3 ವಾರಗಳ ಕಾಲ ತಡೆಹಿಡಿದಿತ್ತು. ಬಳಿಕ ತಡೆಯನ್ನು ಹಲವು ಬಾರಿ ವಿಸ್ತರಿಸಿತ್ತು.

ನವ್ಲಾಖಾ ನಾಲ್ಕು ವರ್ಷಗಳಿಗೂ ಹೆಚ್ಚು ಸಮಯದಿಂದ ಸೆರೆವಾಸದಲ್ಲಿದ್ದಾರೆ. ವಿಚಾರಣೆ ಪೂರ್ಣಗೊಳ್ಳಲು ಇನ್ನೂ ಹಲವು ವರ್ಷಗಳೇ ತೆಗೆದುಕೊಳ್ಳಬಹುದು. ಅಲ್ಲದೆ, ನವ್ಲಾಖಾ ಅವರು ಭಯೋತ್ಪಾದಕ ಕೃತ್ಯ ಎಸಗಿದ್ದಾರೆ ಎಂದು ದೃಢೀಕರಿಸಲು ಯಾವುದೇ ಸಾಕ್ಷ್ಯ ದೊರೆತಿಲ್ಲ ಎಂಬ ಅಂಶಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್ ಬಾಂಬೆ ಹೈಕೋರ್ಟ್ ಜಾಮೀನಿಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆಗೆದು ಹಾಕಿದೆ.

ಇದನ್ನೂ ಓದಿ : ಮುಂಬೈ| ಜಾಹೀರಾತು ಫಲಕ ಕುಸಿತ : ಮೃತರ ಸಂಖ್ಯೆ 14ಕ್ಕೆ ಏರಿಕೆ ;70ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...