Homeಮುಖಪುಟಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

ಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇವಲ ಹಿಂದೂ-ಮುಸ್ಲಿಂ, ಮಂದಿರ-ಮಸೀದಿ, ಸನಾತನ-ಇಸ್ಲಾಂ ಬಗ್ಗೆ ಮಾತನಾಡುತ್ತಾರೆ, ಆದರೆ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನದಂತಹ ದೇಶದ ದೊಡ್ಡ ಸಮಸ್ಯೆಗಳ ಬಗ್ಗೆ ಮೌನವಾಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.

ಜಾರ್ಖಂಡ್‌ನ ಛಾತ್ರಾದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಬೆಲೆ ಏರಿಕೆ ವಿಚಾರವಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಯುಪಿಎ ಆಡಳಿತದಲ್ಲಿ ಕೇಸರಿ ಪಕ್ಷಕ್ಕೆ ಒಂದು ಕಾಲದಲ್ಲಿ ಪ್ರಮುಖ ಕಾಳಜಿಯಾಗಿದ್ದ ಹಣದುಬ್ಬರವು ಈಗ ಅವರಿಗೆ ಆರಾಮದಾಯಕವಾಗಿದೆ. ಅಡುಗೆ ಅನಿಲ ದರವು ಯುಪಿಎ ಆಡಳಿತಾವಧಿಯಲ್ಲಿ 400ರೂ. ಇದ್ದಾಗ, ಬಿಜೆಪಿಯು ಬೆಲೆಯೇರಿಕೆಯನ್ನು ರಾಕ್ಷಸ ಎಂದು ಕರೆದಿತ್ತು. ಆದರೆ, ಅದರ ದರವು ರೂ. 1,200ನ್ನು ಮೀರಿರುವಾಗ ಬೆಲೆಯೇರಿಕೆಯು ಪ್ರೇಮಿಯಾಗಿ ಬದಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪಕ್ಷವು ದ್ವೇಷದ ರಾಜಕಾರಣ ಮಾಡುತ್ತಿದೆ ಮತ್ತು ಹಿಂದೂ-ಮುಸ್ಲಿಂ ಹೆಸರಿನಲ್ಲಿ ತಾರತಮ್ಯವನ್ನು ಹರಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೇವಲ ಹಿಂದೂ-ಮುಸ್ಲಿಂ, ಮಂದಿರ-ಮಸೀದಿ, ಸನಾತನ-ಇಸ್ಲಾಂ ಬಗ್ಗೆ ಮಾತನಾಡುತ್ತಾರೆ, ಆದರೆ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನದಂತಹ ದೇಶದ ದೊಡ್ಡ ಸಮಸ್ಯೆಗಳ ಬಗ್ಗೆ  ಮೌನವಾಗಿದ್ದಾರೆ. ಪ್ರಧಾನಮಂತ್ರಿಯವರು ಇತ್ತೀಚೆಗೆ ಜಾರ್ಖಂಡ್‌ನ ಛತ್ರಕ್ಕೆ ಭೇಟಿ ನೀಡಿದ್ದರು, ಆದರೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಒಂದೇ ಒಂದು ಪದವನ್ನು ಹೇಳಲಿಲ್ಲ ಅಥವಾ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದೇ ಮಾರ್ಗಸೂಚಿಯನ್ನು ನೀಡಲಿಲ್ಲ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಸಂಚು ರೂಪಿಸಿ ಕಂಬಿ ಹಿಂದೆ ಕಳುಹಿಸಲಾಗಿದೆ. ಬಿಜೆಪಿಗರು ನಮ್ಮ ಕುಟುಂಬದ ವಿರುದ್ಧ ಇಡಿ, ಸಿಬಿಐನ್ನು ಬಳಸಿದ್ದಾರೆ, ಆದರೆ ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ ಒಂದು ಕೋಟಿ ಯುವಕರಿಗೆ ಉದ್ಯೋಗ, ಎಲ್‌ಪಿಜಿ ಸಿಲಿಂಡರ್ ದರವನ್ನು 500ರೂ.ಗೆ ಇಳಿಸಲಾಗುವುದು ಮತ್ತು 200ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯಕ್ಕೆ ಸಿಲುಕಲಿದೆ, ಕೇಂದ್ರದಿಂದ ಮೋದಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ದೊಡ್ಡ ಕೈಗಾರಿಕೆ ಸ್ಥಾಪನೆಯಾಗಿಲ್ಲ. ಮೋದಿ ಸರ್ಕಾರ ಕೈಗಾರಿಕೆಗಳನ್ನು ಸ್ಥಾಪಿಸುವ ಬದಲು ರೈಲ್ವೆ, ವಿಮಾನ ನಿಲ್ದಾಣಗಳು, ಬ್ಯಾಂಕ್‌ಗಳು ಮತ್ತು ಸಾರ್ವಜನಿಕ ವಲಯದ ಘಟಕಗಳನ್ನು ಮಾರಾಟ ಮಾಡುವಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...