Homeಮುಖಪುಟಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಬಂಧನ

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಬಂಧನ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕ ಮತ್ತು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಬಂಧಿಸಿದೆ.

ಸತತ ವಿಚಾರಣೆಯ ನಂತರ 70 ವರ್ಷದ ಆಲಂ ಅವರನ್ನು ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯದ ವಲಯ ಕಚೇರಿಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ 9 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯವು ಸಚಿವ ಆಲಂಗೀರ್ ಆಲಂ ಅವರನ್ನು ವಿಚಾರಣೆ ನಡೆಸಿದೆ. ಈ ವೇಳೆ ದಾಖಲಿಸಿದ ಹೇಳಿಕೆಯಂತೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ವಾರ ಆಲಂ ಅವರ ಆಪ್ತ ಕಾರ್ಯದರ್ಶಿ ಹಾಗೂ ರಾಜ್ಯ ಆಡಳಿತ ಸೇವಾ ಅಧಿಕಾರಿ ಸಂಜೀವ್ ಕುಮಾರ್ ಲಾಲ್ (52) ಹಾಗೂ ಲಾಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಜಹಾಂಗೀರ್ ಆಲಂ (42) ಅವರು ನಂಟು ಹೊಂದಿದ ಫ್ಲ್ಯಾಟ್‌ನಿಂದ 32 ಕೋಟಿ ರೂ.ಗೂ ಅಧಿಕ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಆ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದರು. ಇದೀಗ ತನಿಖೆಯ ಮುಂದುವರಿದ ಭಾಗವಾಗಿ ಸಚಿವ ಅಲಂಗೀರ್ ಆಲಂ ಬಂಧನ ನಡೆದಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭ್ರಷ್ಟಾಚಾರ ಹಾಗೂ ಲಂಚ ಪಾವತಿಸಿದ ಆರೋಪಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಇಬ್ಬರು ಬಂಧಿತ ವ್ಯಕ್ತಿಗಳನ್ನು ತನ್ನ ಕಸ್ಟಡಿಗೆ ಕೋರಿದಾಗ, ಕೆಲವು ಪ್ರಭಾವಿ ವ್ಯಕ್ತಿಗಳ ಪರವಾಗಿ ಸಂಜೀವ್ ಕುಮಾರ್ ಲಾಲ್ ಕಮಿಷನ್ ಸಂಗ್ರಹಿಸಿದ್ದಾರೆ ಮತ್ತು ಗ್ರಾಮೀಣ ಇಲಾಖೆಯಲ್ಲಿ ಮೇಲಿಂದ ಕೆಳಗಿನವರೆಗೆ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಪಡಿಸಿಕೊಂಡ ಒಟ್ಟು ನಗದು ಮೊತ್ತವು ಸುಮಾರು 36.75 ಕೋಟಿ ರೂಪಾಯಿಗಳಷ್ಟಿದೆ, ಇದರಲ್ಲಿ ಲಾಲ್ ಅವರಿಗೆ ಸಂಬಂಧಿಸಿದ ಸ್ಥಳದಿಂದ 10.05 ಲಕ್ಷ ರೂಪಾಯಿಗಳು ಮತ್ತು ಗುತ್ತಿಗೆದಾರರೋರ್ವರಿಗೆ ಸಂಬಂಧಿಸಿದ ಸ್ಥಳದಿಂದ 1.5 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿ: ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...