Homeಮುಖಪುಟಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ನಿವಾಸದ ಹೊಸ ವೀಡಿಯೊ ವೈರಲ್

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ನಿವಾಸದ ಹೊಸ ವೀಡಿಯೊ ವೈರಲ್

- Advertisement -
- Advertisement -

ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಯ ಮನೆಯೊಳಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಎಎಪಿ ನಾಯಕಿ ಸ್ವಾತಿ ಮಲಿವಾಲ್ ಅವರು, ಶುಕ್ರವಾರ ಮಧ್ಯಾಹ್ನ ವೈರಲ್ ಆಗಿರುವ 52 ಸೆಕೆಂಡುಗಳ ಮೊಬೈಲ್ ಫೋನ್ ವೀಡಿಯೊಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿಎಂ ನಿವಾಸದಿಂದ ತೊರೆಯುವಂತೆ ಭದ್ರತಾ ಅಧಿಕಾರಿಗಳೊಂದಿಗೆ ಸ್ವಾತಿ ವಾಗ್ವಾದ ಮತ್ತು ಕಿರುಚಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಮಲಿವಾಲ್, “ರಾಜಕೀಯ ಹಿಟ್‌ಮ್ಯಾನ್” ಎಂದು ಕೇಜ್ರಿವಾಲ್ ಅವರ ಹೆಸರು ನೇರವಾಗಿ ಹೇಳದೆ ಟೀಕಿಸಿದ್ದಾರೆ. “ಹಿಟ್‌ಮ್ಯಾನ್ ವೀಡಿಯೊವನ್ನು ಹಂಚಿಕೊಳ್ಳಲು ತನ್ನ ಜನರಿಗೆ ನಿರ್ದೇಶಿಸಿದ್ದಾರೆ ಎಂದು ಹೇಳಿದ್ದಾರೆ. ಪಕ್ಷವನ್ನು ರಕ್ಷಿಸಲು ಮತ್ತು ಈ ಅಪರಾಧವನ್ನು ಮಾಡಿದ ನಂತರ ತನ್ನನ್ನು ಉಳಿಸಿಕೊಳ್ಳಲು ಒಂದು ನಿರೂಪಣೆಯನ್ನು ನಿರ್ಮಿಸಲು ಪ್ರುತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರತಿ ಬಾರಿಯಂತೆ… ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ತಾನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ. ತನ್ನ ಜನರನ್ನು ಯಾವುದೇ ಸಂದರ್ಭವಿಲ್ಲದೆ ಟ್ವೀಟ್ ಮಾಡಲು ಮತ್ತು ವೀಡಿಯೊಗಳನ್ನು ಪ್ಲೇ ಮಾಡುವಂತೆ ಮಾಡುವ ಮೂಲಕ, ಈ ಅಪರಾಧವನ್ನು ಮಾಡಿದ ನಂತರ ತನ್ನನ್ನು ತಾನು ಉಳಿಸಿಕೊಳ್ಳಬಹುದು ಎಂದು ಅವನು ಭಾವಿಸುತ್ತಾನೆ” ಎಂದಿದ್ದಾರೆ.

“ಯಾರನ್ನಾದರೂ ಥಳಿಸುತ್ತಿರುವ ವಿಡಿಯೋವನ್ನು ಯಾರು ಮಾಡುತ್ತಾರೆ? ಮನೆ ಮತ್ತು ಕೋಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸತ್ಯವು ಬಹಿರಂಗಗೊಳ್ಳುತ್ತದೆ” ಎಂದು ಮಲಿವಾಲ್ ಹೇಳಿದ್ದಾರೆ.

“ಯಾವ ಮಟ್ಟಕ್ಕೆ ಬೇಕಾದರೂ ಬೀಳು… ದೇವರು ನೋಡುತ್ತಿದ್ದಾನೆ. ಮುಂದೊಂದು ದಿನ ಸತ್ಯ ಬಯಲಾಗುತ್ತದೆ” ಎಂದಿದ್ದಾರೆ.

ವೈರಲ್ ಆಗಿರುವ ವೀಡಿಯೊ ದೃಶ್ಯವು ಭದ್ರತಾ ಸಿಬ್ಬಂದಿಗಳೊಟ್ಟಿಗಿನ ವಾಗ್ವಾದದಿಂದ ಪ್ರಾರಂಭವಾಗುತ್ತದೆ; ಸೋಫಾ ಮೇಲೆ ಕುಳಿತಿರುವ ಮಲಿವಾಲ್ ಅವರನ್ನು ಹೊರಗೆ ಹೋಗುವಂತೆ ಸಿಬ್ಬಂದಿಗಳು ಬಲವಂತಪಡಿಸುತ್ತಿರುವುದನ್ನು ಕಾಣಬಹುದಾಗಿದೆ.

ಕೇಜ್ರಿವಾಲ್ ವಾಸಿಸುವ ಪ್ರದೇಶದ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ತಾನು ಪೊಲೀಸರಿಗೆ ದೂರು ನೀಡುವುದಾಗಿ ಮಲಿವಾಲ್ ಹೇಳುತ್ತಾರೆ. “ಅದು ಇಲ್ಲಿ ಆಗುವುದಿಲ್ಲ… ನೀವು ದಯವಿಟ್ಟು ನಮ್ಮೊಂದಿಗೆ ಬನ್ನಿ” ಎಂದು ಭದ್ರತಾ ಸಿಬ್ಬಂದಿ ಮತ್ತೆ ಹೇಳುತ್ತಾರೆ. “ನಾವು ನಿಮ್ಮನ್ನು ಸ್ಥಳಾಂತರಿಸಲು ವಿನಮ್ರವಾಗಿ ವಿನಂತಿಸುತ್ತೇವೆ…” ಎಂದು ಭದ್ರತಾ ಸಿಬ್ಬಂದಿ ಹೇಳುವುದನ್ನು ಕೇಳಲಾಗುತ್ತದೆ.

ಈ ಹಂತದಲ್ಲಿ ಮಲಿವಾಲ್ ಅವರು ಪೊಲೀಸರಿಗೆ ತುರ್ತು ಕರೆ ಮಾಡಿರುವುದಾಗಿ ಹೇಳಿದ್ದು, “ಪೊಲೀಸರು ಬರಲಿ…” ಎಂದು ಪ್ರತಿಕ್ರಿಯಿಸಿ, ಸಿಬ್ಬಂದಿಯೊಂದಿಗೆ ಮತ್ತೆ ವಾದಿಸಿದರು.

ಸೋಮವಾರ ದೆಹಲಿ ಪೊಲೀಸರು ಮಲಿವಾಲ್ ನೀಡಿದ ಹೇಳಿಕೆಯ ಆಧಾರದ ಮೇಲೆ ಬಿಭವ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೇಜ್ರಿವಾಲ್ ಅವರ ನಿವಾಸದಿಂದ ಎರಡು ಕರೆಗಳು ಬಂದಿವೆ ಎಂದು ಹೇಳಿದರು. ಫೋನ್ ಸಂಖ್ಯೆಯನ್ನು ಮಲಿವಾಲ್ ಅವರಿಗೆ ನೋಂದಾಯಿಸಲಾಗಿದೆ. ಆದರೆ, ಕರೆ ಮಾಡಿದವರು ತಮ್ಮ ಗುರುತು ಹೇಳಲಿಲ್ಲ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ; ಕೇಜ್ರಿವಾಲ್ ಪಿಎ ಹಲ್ಲೆ ಪ್ರಕರಣ: ಸ್ವಾತಿ ಮುಖದ ಮೇಲೆ ಆಂತರಿಕ ಗಾಯ; ಹೇಳಿಕೆ ಪಡೆದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...