Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ; ಅವರ ಆಮ್ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ.

ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರನ್ನು ಸಲ್ಲಿಸಲಾಗಿದ್ದು, ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸುವಂತೆ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಫೆಡರಲ್ ಏಜೆನ್ಸಿಯು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ 55 ವರ್ಷದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅವರ ಅಧಿಕೃತ ನಿವಾಸದಿಂದ ಬಂಧಿಸಿತ್ತು. ಪ್ರಸ್ತುತ ಅವರು ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.

ಒಟ್ಟಾರೆ ಈ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಎಂಟನೇ ಚಾರ್ಜ್ ಶೀಟ್ ಇದಾಗಿದ್ದು, ಇದುವರೆಗೆ 18 ಜನರನ್ನು ಬಂಧಿಸಿದೆ. ಕಳೆದ ವಾರ, ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಮತ್ತು ಇತರ ನಾಲ್ವರ ವಿರುದ್ಧ ಸಂಸ್ಥೆಯು ಇದೇ ರೀತಿಯ ದೂರು ದಾಖಲಿಸಿದೆ.

ಮುಖ್ಯಮಂತ್ರಿಯನ್ನು ಈ ಹಿಂದೆ ಇಡಿ ದೆಹಲಿ ಅಬಕಾರಿ “ಹಗರಣ”ದ ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ಕರೆದಿದೆ. ಅವರು ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರ ವ್ಯಕ್ತಿಗಳೊಂದಿಗೆ ಶಾಮೀಲಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೇಜ್ರಿವಾಲ್ ಅವರು ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ ಎಂಬುದಕ್ಕೆ ನಮ್ಮ ಬಳಿ ನೇರ ಪುರಾವೆಗಳಿವೆ. ಅವರ ಬಿಲ್‌ಗಳನ್ನು ಪ್ರಕರಣದ ಆರೋಪಿಯೊಬ್ಬರು ಭಾಗಶಃ ಪಾವತಿಸಿದ್ದಾರೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಕೇಜ್ರಿವಾಲ್ ಸೂತ್ರೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಂಸ್ಥೆ ಆರೋಪಿಸಿದೆ. ವಿವಾದದ ನಂತರ ದೆಹಲಿಯ ಅಬಕಾರಿ ನೀತಿಯನ್ನು ಈಗ ರದ್ದುಗೊಳಿಸಲಾಗಿದೆ.

ಆಪಾದಿತ ಹಗರಣಕ್ಕೆ ಎಎಪಿಯ ರಾಷ್ಟ್ರೀಯ ಸಂಚಾಲಕರಾಗಿ ಕೇಜ್ರಿವಾಲ್ ಅವರು ಹೊಣೆಗಾರರಾಗಿದ್ದಾರೆ ಎಂದು ಅವರು ಆರೋಪಿಸಿದರು.

ಅಬಕಾರಿ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸಿ, ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ನಂತರ ಇಡಿ ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ಆಗಸ್ಟ್ 17, 2022 ರಂದು ದಾಖಲಿಸಲಾದ ಸಿಬಿಐ ಎಫ್‌ಐಆರ್‌ನ ಅರಿವನ್ನು ತೆಗೆದುಕೊಂಡು 2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ತನಿಖೆಗಾಗಿ ಇಡಿ 2022ರ ಆಗಸ್ಟ್ 22 ರಂದು ತನ್ನ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ.

ಇದನ್ನೂ ಓದಿ; ‘ಸೋನಿಯಾ ಗಾಂಧಿಯಂತೆ ಮೋದಿ ಇಟಾಲಿಯನ್ ಅಲ್ಲ..’; ಬಿಜೆಪಿ ಅಭ್ಯರ್ಥಿ ಕಂಗನಾ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಅರ್ಜಿದಾರರು, ಡಿಲೀಟ್ ಆದ ಮತದಾರರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಇತ್ತೀಚೆಗೆ ನೀಡಿರುವ...

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...