Homeಮುಖಪುಟಯೆಚೂರಿ, ದೇವರಾಜನ್ ಭಾಷಣದ 'ಸರ್ವಾಧಿಕಾರಿ-ಮುಸ್ಲಿಂ' ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

ಯೆಚೂರಿ, ದೇವರಾಜನ್ ಭಾಷಣದ ‘ಸರ್ವಾಧಿಕಾರಿ-ಮುಸ್ಲಿಂ’ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

- Advertisement -
- Advertisement -

ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನ (ಡಿಡಿ) ವಿರೋಧ ಪಕ್ಷದ ನಾಯಕರ ಭಾಷಣಗಳನ್ನು ಪ್ರಸಾರಕ್ಕೂ ಮುನ್ನ ಸೆನ್ಸಾರ್ ಮಾಡಿವೆ ಎಂದು ವರದಿಯಾಗಿದೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ “ಕೋಮುವಾದ, ಸರ್ವಾಧಿಕಾರಿ ಆಡಳಿತ”, “ಕಠಿಣ ಕಾನೂನುಗಳು” ಎಂಬ ಪದಗುಚ್ಛಗಳನ್ನು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ (ಎಐಎಫ್‌ಬಿ) ನಾಯಕ ಜಿ ದೇವರಾಜನ್ ಅವರು ಬಳಸಿದ್ದ “ಮುಸ್ಲಿಮರು” ಎಂಬ ಪದವನ್ನು ಸೆನ್ಸಾರ್ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ.

ಚುನಾವಣಾ ಚಿಹ್ನೆಗಳ (ಮೀಸಲು ಮತ್ತು ಹಂಚಿಕೆ) ನಿಬಂಧನೆಗಳ ಆದೇಶ 1968ರಡಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 59 ರಾಜ್ಯ ಪಕ್ಷಗಳು ಚುನಾವಣಾ ಪ್ರಚಾರದ ಸುದ್ದಿ ಪ್ರಸಾರದ ಅರ್ಹತೆ ಹೊಂದಿವೆ. ಈ ಪಕ್ಷಗಳ ರಾಷ್ಟ್ರ ಹಾಗೂ ರಾಜ್ಯ ಪ್ರತಿನಿಧಿಗಳ ಚುನಾವಣಾ ಪ್ರಚಾರದ ಭಾಷಣವನ್ನು ಪ್ರಸಾರ ಮಾಡಲು ಅನುಮತಿಸಲಾಗಿರುವುದನ್ನು ಏಪ್ರಿಲ್‌ನಲ್ಲಿ ಹೊರಡಿಸಿರುವ ಚುನಾವಣಾ ಆಯೋಗದ ಆದೇಶದಲ್ಲಿ ತಿಳಿಸಲಾಗಿತ್ತು.

ಪ್ರಸಾರ ಭಾರತಿಯ ಅಧಿಕಾರಿಯೊಬ್ಬರು ಸೆನ್ಸಾರ್ ಆದೇಶವನ್ನು ಸಮರ್ಥಿಸಿಕೊಂಡಿದ್ದು, ಎಐಆರ್ ಮತ್ತು ಡಿಡಿ ಎರಡೂ ಸಂಸ್ಥೆಗಳು ಚುನಾವಣಾ ಆಯೋಗ ನಿಗದಿಪಡಿಸಿದ ‘ನಡವಳಿಕೆ ನಿಯಮಗಳನ್ನು’ ಅನುಸರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ರಾಜಕೀಯ ನಾಯಕರ ಭಾಷಣದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಎಂದು ಅವರು ಹೇಳಿದ್ದು, ಮುಖ್ಯಮಂತ್ರಿಗಳ ಪಠ್ಯಗಳನ್ನು ಸಹ ಸರಿಪಡಿಸಿದ ನಿದರ್ಶನಗಳಿವೆ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೀತಾರಾಮ್ ಯೆಚೂರಿ, “ನನ್ನ ಭಾಷಣದ ಹಿಂದಿ ಆವೃತ್ತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇಂಗ್ಲಿಷ್ ತರ್ಜುಮೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.

ಜಿ ದೇವರಾಜನ್‌ ಮಾತನಾಡಿ, “ನಾನು ನನ್ನ ಭಾಷಣದಲ್ಲಿ ಸಿಎಎಯಿಂದ ಮುಸ್ಲಿಮರಿಗೆ ಆಗುತ್ತಿರುವ ತಾರತಮ್ಯಗಳ ಬಗ್ಗೆ ಉಲ್ಲೇಖಿಸಿದ್ದೆ. ಅವರು ‘ಮುಸ್ಲಿಂ’ ಪದವನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ನಾನು ಸಿಎಎ ಕಾನೂನಿನಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರದ ಮಾಧ್ಯಮಗಳಿಗೆ ಮನವರಿಕೆ ಮಾಡಿದರೂ, ಅವರು ಆ ಪದವನ್ನು ಉಳಿಸಿಕೊಳ್ಳದೆ ಅಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೂರದರ್ಶನದ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಸೀತಾರಾಮ್ ಯೆಚೂರಿ ಅವರು ಸೆನ್ಸಾರ್ ಅನ್ನು ಪ್ರತಿಭಟಿಸಿದ್ದಾರೆ. ಭಾಷಣದಿಂದ ನಿರ್ದಿಷ್ಟ ಪದಗಳನ್ನು ಅಳಿಸುವುದು ಭಿನ್ನಾಭಿಪ್ರಾಯದ ಹಕ್ಕಿನ ನಿರಾಕರಣೆಯಾಗಿದೆ ಎಂದು ಯೆಚೂರಿ ಹೇಳಿದ್ದಾರೆ. ಎಐಅಆರ್‌ಗೂ ಅವರು ಪತ್ರ ಬರೆದಿದ್ದಾರೆ ಎಂದು ವರದಿ ಹೇಳಿದೆ.

ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭಾಷಣಗಳ ಉಚಿತ ಪ್ರಸಾರ ಯೋಜನೆಯನ್ನು ಜನವರಿ 1998ರಲ್ಲಿ ಪರಿಚಯಿಸಲಾಗಿದೆ. ಈ ಮೂಲಕ ಚುನಾವಣೆಯ ಸಂದರ್ಭದಲ್ಲಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಸಮಾನವಾಗಿ ಬಳಸುವ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...