Homeಮುಖಪುಟಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ’ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

“ನಾವು ಇಲ್ಲಿಯವರೆಗೆ ಬುಲ್ಡೋಜರ್‌ಗಳನ್ನು ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಪ್ರಧಾನಿಯೇ ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದ ನಂತರ ಸಂವಿಧಾನದ ಪ್ರಕಾರ ಎಲ್ಲವನ್ನೂ ರಕ್ಷಿಸಲಾಗುವುದು. ನಾವು ಸಂವಿಧಾನವನ್ನು ಅನುಸರಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಖರ್ಗೆ ಮಾತನಾಡಿದರು. ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಶರದ್ ಪವಾರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ವೇಳೆ ಉಪಸ್ಥಿತರಿದ್ದರು.

“ಇಂಡಿಯಾ ಮೈತ್ರಿಕೂಟ ಮಹಾರಾಷ್ಟ್ರದ 48 ಸ್ಥಾನಗಳ ಲೋಕಸಭಾ ಸ್ಥಾನಗಳ ಪೈಕಿ 46ರನ್ನು ಗೆಲ್ಲಲಿದೆ. ಇದನ್ನು ಜನರೇ ಹೇಳುತ್ತಿದ್ದಾರೆ. ನಮ್ಮ ಮೈತ್ರಿಕೂಟ ಗರಿಷ್ಠ ಸ್ಥಾನಗಳನ್ನು ಗೆದ್ದು ಬಿಜೆಪಿಯನ್ನು ಸೋಲಿಸಲಿದೆ ಎಂದು ಖರ್ಗೆ ಹೇಳಿದ್ದಾರೆ.

ಮಹಾರಾಷ್ಟ್ರದ ನೈಜ ಪಕ್ಷಗಳಿಂದ ಚಿಹ್ನೆಗಳನ್ನು ಕಿತ್ತುಕೊಂಡು ಬಿಜೆಪಿ ಬೆಂಬಲಿತ ಪಕ್ಷಗಳಿಗೆ ನೀಡಲಾಗಿದೆ ಎಂದು ಶಿವಸೇನೆ ಮತ್ತು ಎನ್‌ಸಿಪಿಯನ್ನು ಉಲ್ಲೇಖಿಸಿ ಖರ್ಗೆ ವಿಷಾದ ವ್ಯಕ್ತಪಡಿಸಿದರು.

“ಮಹಾರಾಷ್ಟ್ರದ ಅಕ್ರಮ ‘ಮಹಾಯುತಿ’ ಸರ್ಕಾರವನ್ನು ದ್ರೋಹ ಮತ್ತು ಪಿತೂರಿಯ ಆಧಾರದ ಮೇಲೆ ರಚಿಸಲಾಗಿದೆ. ಅದನ್ನು ಸ್ವತಃ ಪ್ರಧಾನಿ ಬೆಂಬಲಿಸುತ್ತಿದ್ದಾರೆ. ಮೋದಿ ಹೋದಲ್ಲೆಲ್ಲಾ ಜನರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ನಿಜವಾದ ಪಕ್ಷಗಳಿಂದ ಚಿಹ್ನೆಗಳನ್ನು ಕಸಿದು ಬಿಜೆಪಿ ಬೆಂಬಲಿಸುವ ಪಕ್ಷಗಳಿಗೆ ನೀಡಲಾಗಿದೆ. ಇದು ನ್ಯಾಯಾಲಯ ಮತ್ತು ಚುನಾವಣಾ ಆಯೋಗದ ನಿರ್ಧಾರ. ಆದರೆ, ಎಲ್ಲವೂ ಮೋದಿಯವರ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...