Homeಮುಖಪುಟಲೋಕಸಭೆ ಚುನಾವಣೆ ಹಂತ-5: ಇಂದು 49 ಕ್ಷೇತ್ರಗಳಲ್ಲಿ ಮತದಾನ

ಲೋಕಸಭೆ ಚುನಾವಣೆ ಹಂತ-5: ಇಂದು 49 ಕ್ಷೇತ್ರಗಳಲ್ಲಿ ಮತದಾನ

- Advertisement -
- Advertisement -

ಲೋಕಸಭೆ ಚುನಾವಣೆಯ ಹಿನ್ನೆಲೆ ಇಂದು ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಇಂದು ಐದನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನು ಭದ್ರಗೊಳಿಸುತ್ತಿದ್ದಾರೆ.

ಮಹಾರಾಷ್ಟ್ರದ 13 ಲೋಕಸಭೆ ಕ್ಷೇತ್ರಗಳಿಗೆ, ಅಮೇಥಿ ಮತ್ತು ರಾಯ್ ಬರೇಲಿ ಸೇರಿದಂತೆ ಉತ್ತರ ಪ್ರದೇಶದಲ್ಲಿ 14, ಪಶ್ಚಿಮ ಬಂಗಾಳದ 7, ಬಿಹಾರದಲ್ಲಿ 5, ಜಾರ್ಖಂಡ್‌ನಲ್ಲಿ 3, ಒಡಿಶಾದಲ್ಲಿ 5, ಜಮ್ಮು ಮತ್ತು ಕಾಶ್ಮೀರ,  ಲಡಾಖ್‌ನಲ್ಲಿ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಸುತ್ತಿನ ಚುನಾವಣೆಯು ಏಳು ಹಂತಗಳ ವ್ಯಾಪ್ತಿಯಲ್ಲಿ ಚಿಕ್ಕದಾಗಿದೆ. ಇದಲ್ಲದೆ ಜಾರ್ಖಂಡ್‌ನ ಗಾಂಡೆ ಹಾಗೂ ಉತ್ತರಪ್ರದೇಶದ ಲಕ್ನೋ ಪೂರ್ವ ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಇಂದು ಮತದಾನ ನಡೆಯುತ್ತಿದೆ.

49 ಕ್ಷೇತ್ರಗಳಲ್ಲಿ ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಠ 264 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕ ರಾಜನಾಥ್ ಸಿಂಗ್‌, ಸ್ಮೃತಿ ಇರಾನಿ, ಚಿರಾಗ್ ಪಾಸ್ವಾನ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಕಣದಲ್ಲಿದ್ದಾರೆ. 89.5 ಮಿಲಿಯನ್ ಜನರು ಮತ ಚಲಾಯಿಸಲಿದ್ದಾರೆ.

ಇಂದಿನ ಐದನೇ ಹಂತದ ಮತದಾನದ ಪ್ರಕ್ರಿಯೆ ಕೊನೆಗೊಂಡಾಗ ಏ.19ರಂದು ಪ್ರಾರಂಭವಾದ ಚುನಾವಣೆಯಲ್ಲಿ ಲೋಕಸಭೆಯ 543 ಸ್ಥಾನಗಳಲ್ಲಿ 428 ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಂತಾಗುತ್ತದೆ.

ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಮತ್ತು ಜವಾಬ್ದಾರಿ ಮತ್ತು ಹೆಮ್ಮೆಯಿಂದ ಮತ ಚಲಾಯಿಸುವಂತೆ ಆಯೋಗವು ಮತದಾರರಿಗೆ ಕರೆ ನೀಡಿದೆ, ಆದರೆ ಕೆಲವು ಕ್ಷೇತ್ರಗಳಲ್ಲಿ ತೀವ್ರ ಬಿಸಿಗಾಳಿ ಮತದಾನದ ಮೇಲೆ ಪರಿಣಾಮ ಬೀರಬಹುದು ಎಂದು ಚುನಾವಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಐದನೇ ಹಂತದಲ್ಲಿ 42.6 ಮಿಲಿಯನ್ ಮಹಿಳೆಯರು ಮತ್ತು 5,409 ತೃತೀಯಲಿಂಗಿ ಮತದಾರರು ಸೇರಿದಂತೆ 89.5 ಮಿಲಿಯನ್ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. 94,732 ಮತಗಟ್ಟೆಗಳು ಮತ್ತು 9,47,000 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆಯು ಜೂ.4ರಂದು ನಡೆಯಲಿದೆ.

ಇದನ್ನು ಓದಿ: ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು: ಮಾಹಿತಿ ಬಹಿರಂಗಗೊಳಿಸಿದ ಅಧಿಕಾರಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...