Homeಕರ್ನಾಟಕಇವಿಎಂಗೆ ಹಾನಿ ಪ್ರಕರಣ: ಜೆಡಿಎಸ್ ಮುಖಂಡನ ವಿರುದ್ದದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ...

ಇವಿಎಂಗೆ ಹಾನಿ ಪ್ರಕರಣ: ಜೆಡಿಎಸ್ ಮುಖಂಡನ ವಿರುದ್ದದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳಿಗೆ ಹಾನಿ ಮಾಡಿ ಆರೋಪದ ಮೇಲೆ ಜೆಡಿಎಸ್‌ ಮುಖಂಡ ಬಿ ಬಿ ಪಾಟೀಲ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ದೂರು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಪಾಟೀಲ್‌ ಅವರ ಪ್ರತಿಕ್ರಿಯೆ ಕೇಳಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪಾಟೀಲ್ ಅವರಿಗೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ನೋಟಿಸ್ ಜಾರಿ ಮಾಡಿದೆ ಎಂದು ವರದಿ ಹೇಳಿದೆ.

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಜುಲೈ 2023ರಲ್ಲಿ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಬಿ ಬಿ ಪಾಟೀಲ್‌ ವಿರುದ್ಧದ ದೂರನ್ನು ತಪ್ಪಾಗಿ ಹೈಕೋರ್ಟ್‌ ರದ್ದುಗೊಳಿಸಿದೆ ಎಂದು ವಿಚಾರಣೆ ವೇಳೆ ವಾದಿಸಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ನಿಂದನೆ ಮತ್ತು ಇವಿಎಂ ಯಂತ್ರಗಳನ್ನು ಹಾನಿ ಮಾಡಿದ ಗುಂಪಿನ ಭಾಗವಾಗಿದ್ದ ಪಾಟೀಲ್ ಅವರ ವಿರುದ್ಧ ವಿಡಿಯೋ ಮತ್ತು ಫೋಟೋ ರೂಪದಲ್ಲಿ ಬಹಳಷ್ಟು ಸಾಕ್ಷ್ಯಗಳನ್ನು ಒದಗಿಸಲಾಗಿತ್ತು. ಅದನ್ನು ಹೈಕೋರ್ಟ್ ಗಣನೆಗೆ ತೆಗೆದುಕೊಂಡಿಲ್ಲ ಎಂದು ಸರ್ಕಾರ ದೂರಿದೆ.

ಚುನಾವಣಾಧಿಕಾರಿಗಳ ಮೇಲೆ ದಾಳಿ ಮಾಡಿ, ವಾಹನಗಳನ್ನು ಜಖಂಗೊಳಿಸಿ ಇವಿಎಂ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ಧ್ವಂಸಗೊಳಿಸಿದ ಗುಂಪಿನಲ್ಲಿ ಆರೋಪಿ ಪಾಟೀಲ್‌ ಸಕ್ರಿಯ ಪಾತ್ರ ವಹಿಸಿದ್ದರು ಎಂದು ಮನವಿಯಲ್ಲಿ ತಿಳಿಸಿದೆ.

ಬಿ ಬಿ ಪಾಟೀಲ್ ಕಾನೂನುಬಾಹಿರ ಸಭೆಯ ನೇತೃತ್ವ ವಹಿಸಿದ್ದರು. ಅವರು ಅಪರಾಧ ಎಸಗಿದ್ದರು ಎಂಬುವುದನ್ನು ಚಾರ್ಜ್ ಶೀಟ್‌ನ ಭಾಗವಾಗಿರುವ ವಿಡಿಯೋ ರೆಕಾರ್ಡಿಂಗ್ ಸೂಚಿಸುತ್ತದೆ ಎಂದು ಸರ್ಕಾರ ಹೇಳಿದೆ. ಆರೋಪ ಪಟ್ಟಿಯು ಹೈಕೋರ್ಟ್‌ನ ವಿಚಾರಣೆಯ ಭಾಗವಾಗಿ ಇರಲಿಲ್ಲ ಎಂದೂ ವಿವರಿಸಿದೆ. ಕರ್ನಾಟಕ ಸರ್ಕಾರದ ಪರವಾಗಿ ವಕೀಲ ಡಿ ಎಲ್ ಚಿದಾನಂದ ವಾದ ಮಂಡಿಸಿದ್ದಾರೆ.

ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳ ಮೇಲೆ ದಾಳಿ ನಡೆಸಿ ವಾಹನಗಳಿಗೆ ಹಾನಿ ಮತ್ತು ಇವಿಎಂ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ನಾಶಪಡಿಸಲು ಆರೋಪಿ ಸಕ್ರಿಯವಾಗಿ ಪಾಲ್ಗೊಂಡು ಜನಸಮೂಹವನ್ನು ಮುನ್ನಡೆಸಿದ್ದಾರೆ ಎಂದು ರಾಜ್ಯ ತನ್ನ ಮನವಿಯಲ್ಲಿ ಒತ್ತಿಹೇಳಿದೆ.

ಇದನ್ನೂ ಓದಿ : ಎಚ್.ಡಿ.ರೇವಣ್ಣ ಪ್ರಕರಣ: ಸಂತ್ರಸ್ತೆಯ ಹೇಳಿಕೆ ದಾಖಲಿಸಲು ಎಸ್‌ಐಟಿ ವಿಳಂಬ ಮಾಡಿದೆ ಎಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...