Homeಮುಖಪುಟರಾಜಸ್ಥಾನ: ಲೈಂಗಿಕ ದೌರ್ಜನ್ಯದ ಕುರಿತು ವರದಿ ಮಾಡಿದ್ದ ದಲಿತ ಪತ್ರಕರ್ತನ ಮೇಲೆ ಹಲ್ಲೆ

ರಾಜಸ್ಥಾನ: ಲೈಂಗಿಕ ದೌರ್ಜನ್ಯದ ಕುರಿತು ವರದಿ ಮಾಡಿದ್ದ ದಲಿತ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ನಿರಂತರವಾಗಿ ವರದಿಯನ್ನು ಪ್ರಕಟಿಸಿ, ಆರೋಪಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಕಾರಣನಾಗಿದ್ದ ದಲಿತ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.

ಹರಿ ಸಿಂಗ್ ಚರಣ್ ಕೃತ್ಯದ ಪ್ರಮುಖ ಆರೋಪಿ ಎಂದು ಹೇಳಲಾಗಿದ್ದು, ಈತನ ವಿರುದ್ಧ ಈಗಾಗಲೇ ಎನ್‌ಡಿಪಿಎಸ್ ಕಾಯ್ದೆ, ದೈಹಿಕ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ. ಮಾಹಿತಿಯ ಪ್ರಕಾರ, ಪತ್ರಕರ್ತ ಹೀರಾ ಲಾಲ್ ಮೇಘವಾಲ್ ಮೇಲೆ ಈತನ ಆಜ್ಞೆಯ ಮೇರೆಗೆ ದಾಳಿ ನಡೆಸಲಾಗಿದೆ.

ಜೈಸಲ್ಮೇರ್ ಪೊಲೀಸರ ಪ್ರಕಾರ, ನಾಲ್ಕು ತಿಂಗಳ ಹಿಂದೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಹೀರಾಲಾಲ್ ಮೇಘವಾಲ್ ಘಟನೆ ಬಗ್ಗೆ ನಿರಂತರವಾಗಿ ವರದಿ ಮಾಡಿದ್ದರಿಂದ, ಆತನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿತ್ತು.

ಘಟನೆಯ ಬಗ್ಗೆ ಜೈಸಲ್ಮೇರ್ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ಭವಾನಿ ಸಿಂಗ್ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಈ ಕುರಿತು ತನಿಖೆ ನಡೆಯುತ್ತಿದೆ. ಮೇ 12ರ ರಾತ್ರಿ ಐವರು ಹೀರಾ ಲಾಲ್ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ. ನಾವು ಆರೋಪಿಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದೇವೆ, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಇನ್ನು ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ ಬಯಲಾಗುತ್ತಿದ್ದಂತೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು, ನಿರ್ಭೀತಿಯಿಂದ ಪತ್ರಕರ್ತರಿಗೆ ಕೆಲಸ ಮಾಡಲು ಅನು ಮಾಡಿಕೊಡಬೇಕು ಎಂದು ಆಗ್ರಹ ವ್ಯಕ್ತವಾಗಿದೆ.

ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...