Homeಮುಖಪುಟಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

ಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

- Advertisement -
- Advertisement -

ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಎಸ್‌ಒಪಿ ಮಾಹಿತಿಯನ್ನು ನೀಡಲು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತೆ ನಿರಾಕರಿಸಿದ್ದು, ಕೇಂದ್ರ ಮಾಹಿತಿ ಆಯೋಗಕ್ಕೆ (ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮುಂದಾಗಿದ್ದಾರೆ.

ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಲಾದ ಮೊದಲ ಮೇಲ್ಮನವಿಗೆ ಪ್ರತಿಕ್ರಿಯೆಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಮಾರಾಟ ಮತ್ತು ನಗದೀಕರಣ ಕುರಿತಂತೆ ಶಾಖೆಗಳಿಗೆ ನೀಡಿದ ಎಸ್ಒಪಿ (ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್) ಪ್ರತಿಯನ್ನು ಒದಗಿಸಲು ಮತ್ತೆ ನಿರಾಕರಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಕೋರಲಾದ ಮಾಹಿತಿಯನ್ನು ಬ್ಯಾಂಕ್ “ಕಮರ್ಷಿಯಲ್ ಕಾನ್ಫಿಡೆನ್ಸ್” ಆಗಿ ಇರಿಸಿಕೊಂಡಿದೆ ಮತ್ತು ಅದು “ಬ್ಯಾಂಕ್‌ನ ಬೌದ್ಧಿಕ ಆಸ್ತಿ” ಎಂದು ಮಾಹಿತಿ ನಿರಾಕರಣೆಗೆ ಬ್ಯಾಂಕ್ ಕಾರಣ ನೀಡಿದೆ. ಮೇಲಾಗಿ ಆಂತರಿಕ ಮಾರ್ಗಸೂಚಿಗಳು ಚುನಾವಣಾ ಬಾಂಡ್ ಕುರಿತಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಗಾಗಿ ಮಾತ್ರ ಆಗಿವೆ ಎಂದೂ ಬ್ಯಾಂಕ್ ಹೇಳಿದೆ.

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಎಪ್ರಿಲ್ 2017ರಂದು ಬ್ಯಾಂಕ್ ಇದೀಗ ರದ್ದುಗೊಂಡಿರುವ ಬಾಂಡ್‌ಗಳ ಕುರಿತಂತೆ ಜಾರಿಗೊಳಿಸಲಾದ ಎಸ್ಒಪಿ ಕುರಿತು ಮಾಹಿತಿ ಕೋರಿದ್ದರು. ಮಾರ್ಚ್ 30ರಂದು ಬ್ಯಾಂಕ್ ಮಾಹಿತಿಯನ್ನು ನೀಡಲು ನಿರಾಕರಿಸಿದ ನಂತರ, ಅವರು ಎಸ್‌ಬಿಐನ ಮೇಲ್ಮನವಿ ಪ್ರಾಧಿಕಾರಕ್ಕೆ (ಎಫ್‌ಎಎ)ಗೆ ಮನವಿಯನ್ನು ಸಲ್ಲಿಸಿದ್ದರು. ಎಫ್‌ಎಎಯಿಂದ ಮೇ 17ರಂದು ಸ್ವೀಕರಿಸಿದ ಪ್ರತಿಕ್ರಿಯೆಯಿಂದ ಅತೃಪ್ತರಾಗಿರುವ ಭಾರದ್ವಾಜ್ ಈಗ ಕೇಂದ್ರ ಮಾಹಿತಿ ಆಯೋಗಕ್ಕೆ(ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಮೇ 17ರ ಆದೇಶದಲ್ಲಿ ಮಾಹಿತಿಯು ಬ್ಯಾಂಕ್‌ನ ಬೌದ್ಧಿಕ ಆಸ್ತಿಯಾಗಿದೆ. ಆದ್ದರಿಂದ RTI ಕಾಯಿದೆಯಡಿ ಸೆಕ್ಷನ್ 8(1)(d) ಅಡಿಯಲ್ಲಿ ಸರಿಯಾಗಿ ನಿರಾಕರಿಸಲಾಗಿದೆ. ವಾಣಿಜ್ಯ ವಿಶ್ವಾಸ, ವ್ಯಾಪಾರ ರಹಸ್ಯಗಳು ಅಥವಾ ಬೌದ್ಧಿಕ ಆಸ್ತಿ ಸೇರಿದಂತೆ ಮಾಹಿತಿ ಬಹಿರಂಗಪಡಿಸುವಿಕೆಯು ಮೂರನೇ ವ್ಯಕ್ತಿಯ ಸ್ಪರ್ಧಾತ್ಮಕ ಸ್ಥಾನಕ್ಕೆ ಹಾನಿಯುಂಟುಮಾಡುತ್ತದೆ ಎಂದು ಹೇಳಲಾಗಿದೆ.

ಎಸ್‌ಬಿಐ ಬಾಂಡ್‌ಗಳ ವಹಿವಾಟು ಡೇಟಾವನ್ನು ಹೇಗೆ ನಿರ್ವಹಿಸುತ್ತದೆ ಎಂಬುದರ ಕುರಿತು ಅಸ್ಪಷ್ಟತೆಯಿಂದಾಗಿ ಎಸ್‌ಒಪಿಗಳನ್ನು ವಿನಂತಿಸಲಾಗಿದೆ. ಬಾಂಡ್‌ಗಳ ಸಂಭಾವ್ಯ ಟ್ರ್ಯಾಕಿಂಗ್ ಬಗ್ಗೆ ಕಳವಳಗಳು ಇದ್ದವು. ಏಕೆಂದರೆ    ಎಸ್‌ಬಿಐ ಖರೀದಿದಾರ ಮತ್ತು ರಿಡೀಮರ್ ಇಬ್ಬರಿಗೂ ವಿಶಿಷ್ಟ ಸಂಖ್ಯೆಯನ್ನು ದಾಖಲಿಸಿದೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ ನಂತರ ಮತ್ತು ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಆದೇಶಿಸಿದ ನಂತರವೂ, ಎಸ್‌ಬಿಐ ನಿರ್ಣಾಯಕ ಮಾಹಿತಿಯನ್ನು ತಡೆಹಿಡಿಯುವುದನ್ನು ಮುಂದುವರೆಸಿದೆ ಎಂದು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...